ಇಂದು ನಾಡೋಜ ಡಾ| ಕಯ್ಯಾರರ 104ನೇ ಜನ್ಮದಿನ, ಪ್ರಶಸ್ತಿ ಪ್ರದಾನ
Team Udayavani, Jun 8, 2019, 6:00 AM IST
ಉಪ್ಪಳ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಮತ್ತು ಜನಾರ್ದನ ಕಲಾವೃಂದ ಜೋಡುಕಲ್ಲು ಇದರ ಸಂಯುಕ್ತ ಆಶ್ರಯದಲ್ಲಿ ಕನ್ನಡದ ಹಿರಿಯ ಚೇತನ ನಾಡೋಜ ಡಾ| ಕಯ್ಯಾರ ಕಿಂಞಣ್ಣ ರೈಗಳ 104ನೇ ಜನ್ಮದಿನಾಚರಣೆ ಮತ್ತು ಗಡಿನಾಡ ಕೇಸರಿ ಪ್ರಶಸ್ತಿ ಪ್ರದಾನ ಜೂನ್ 8ರಂದು ಜೋಡುಕಲ್ಲು ಜೆ.ಕೆ.ವಿ. ಸಭಾಂಗಣದಲ್ಲಿ ಬೆಳಗ್ಗೆ 10ರಿಂದ ಜರಗಲಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾ ಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಕಾರ್ಯಕ್ರಮ ಉದ್ಘಾಟಿಸುವರು.
ಕೇರಳ ಗ್ರಾಮೀಣ ಬ್ಯಾಂಕ್‌ನ ನಿವೃತ್ತ ಪ್ರಾದೇಶಿಕ ಪ್ರಬಂಧಕ ಎಸ್. ಜಗನ್ನಾಥ ಶೆಟ್ಟಿ ಕುಂಬಳೆ ಅವರು ಸಂಸ್ಮರಣ ಭಾಷಣ ಮಾಡುವರು.
ಟಿ.ಎಚ್.ಎಂ. ಬಸವರಾಜರಿಗೆ
ಗಡಿನಾಡ ಕೇಸರಿ ಪ್ರಶಸ್ತಿ
ಬೆಂಗಳೂರು ಕರ್ನಾಟಕ ಇತಿಹಾಸ ಅಕಾಡೆಮಿಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಟಿ.ಎಚ್.ಎಂ. ಬಸವರಾಜ ಬಳ್ಳಾರಿಯವರಿಗೆ ಗಡಿನಾಡ ಕೇಸರಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ರವಿ ನಾಯ್ಕಪು ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸುವರು.
ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಎ.ಕೆ.ಎಂ. ಅಶ್ರಫ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಪ್ರಸಾದ ರೈ ಕಯ್ಯಾರ, ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಶೆಟ್ಟಿ, ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್‌ನ ಶ್ರೀಧರ ಹೊಳ್ಳ ಕಯ್ಯಾರ, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕಾಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ, ಪ್ರೊ| ಎ. ಶ್ರೀನಾಥ್, ಮೀಡಿಯ ಕ್ಲಾಸಿಕಲ್ ಅಧ್ಯಕ್ಷ ಶ್ರೀಕಾಂತ್ ನೆಟ್ಟಣಿಗೆ, ಜೆಕೆವಿ ಜೋಡುಕಲ್ಲು ಅಧ್ಯಕ್ಷ ಲಕ್ಷ್ಮಣ ಮಡಂದೂರು ಮೊದಲಾದವರು ಮುಖ್ಯ ಅಥಿತಿಗಳಾಗಿ ಸಮಾರಂಭದಲ್ಲಿ ಭಾಗವಹಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.