ಗ್ರಾಮ ವಾಸ್ತವ್ಯ ವಿಭಿನ್ನವಾಗಿರುತ್ತೆ: ಎಚ್‌ಡಿಕೆ
Team Udayavani, Jun 8, 2019, 3:06 AM IST
ಬೆಂಗಳೂರು: “ಈ ಬಾರಿಯ ನನ್ನ ಗ್ರಾಮ ವಾಸ್ತವ್ಯ ವಿಭಿನ್ನವಾಗಿರುತ್ತದೆ. ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕೊಡಿಸಲಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರನ್ನು ಮೆಚ್ಚಿಸೋಕೆ ಗ್ರಾಮ ವಾಸ್ತವ್ಯ ಮಾಡುತ್ತಿಲ್ಲ. ಮಧ್ಯರಾತ್ರಿ ವಿಸಿಟ್ ಮಾಡುವುದಿಲ್ಲ. ಬೆಳಗ್ಗೆ 10 ಗಂಟೆಗೆ ಪಂಚಾಯಿತಿ ಕಚೇರಿಯಲ್ಲಿ ಹಾಜರಿರುತ್ತೇನೆ. ಇಡೀ ಜಿಲ್ಲೆಯ ಅಧಿಕಾರಿಗಳು ಅಲ್ಲಿ ಇರುತ್ತಾರೆ ಎಂದರು.
ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಸ್ವೀಕರಿಸುವ ಅರ್ಜಿಗಳ ವಿಲೇವಾರಿ ತಕ್ಷಣ ಆಗುವಂತೆ ನೋಡಿಕೊಳ್ಳುತ್ತೇನೆ. ಗ್ರಾಮ ವಾಸ್ತವ್ಯಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಂಡೇ ಹೋಗುತ್ತಿದ್ದೇನೆ. ಟೀಕಾಕಾರರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
“ಮಾಧ್ಯಮದವರ ಧಾರಾವಾಹಿಯಿಂದ ಸರ್ಕಾರ ಹೋಗುತ್ತಾ?. ಎಷ್ಟು ಚಿತ್ರಹಿಂಸೆ ಅನುಭವಿಸಿದ್ದೇನೆ ನಾನು. ಮಾಧ್ಯಮದವರನ್ನು ತೃಪ್ತಿಪಡಿಸಲು ನಾನು ಕೆಲಸ ಮಾಡಿಲ್ಲ. ನಾಡಿನ ಜನರ ತೃಪ್ತಿಗಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.
“ನಮ್ಮ ಕುಟುಂಬ ಕಣ್ಣೀರು ಹಾಕಿದರೆ ಮೊಸಳೆ ಕಣ್ಣೀರು ಅಂತ ಕರೀತಾರೆ. ಅಂಗವಿಕಲರನ್ನು, ಬಡವರನ್ನು ನೋಡಿದರೆ ನಮಗೆ ಸಹಜವಾಗಿ ಕಣ್ಣೀರು ಬರುತ್ತದೆ. ಎರಡು ತಿಂಗಳಲ್ಲಿ ನಲವತ್ತು ಲಕ್ಷ ರೈತ ಕುಟುಂಬಗಳ ಸಾಲಮನ್ನಾ ಆಗಲಿದೆ. ರೈತರ ಸಾಲಮನ್ನಾ ಬಗ್ಗೆ ಕಿರು ಹೊತ್ತಿಗೆ ಬಿಡುಗಡೆ ಮಾಡುತ್ತೇನೆ’ ಎಂದು ತಿಳಿಸಿದರು.
“ತುರ್ತು ಪರಿಸ್ಥಿತಿ ವಿರೋಧಿಸಿ ಜೈಲಿಗೆ ಹೋದ ತಂದೆಯ ಹೊಟ್ಟೆಯಲ್ಲಿ ಹುಟ್ಟಿದ ಮಗ ಈ ಕುಮಾರಸ್ವಾಮಿ. ನಾನು ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ಮಾಡುವವನಲ್ಲ’ ಎಂದರು.
ಅಪಪ್ರಚಾರ ಮಾಡಿದ್ದಕ್ಕೆ 37 ಸ್ಥಾನ: ದೇವೇಗೌಡರ ಹೋರಾಟದಿಂದ ಜೆಡಿಎಸ್ ಪಕ್ಷ ಉಳಿದಿದೆ. ವಿಧಾನಸಭೆ ಚುನಾವಣೆಯಲ್ಲಿ ಕೇವಲ 37 ಸ್ಥಾನಗಳಲ್ಲಿ ಗೆಲ್ಲೋ ವಾತಾವರಣ ಬಂದಿದ್ದರಿಂದ ಇಷ್ಟೆಲ್ಲಾ ಸಮಸ್ಯೆಯಾಗಿದೆ. ಕನಿಷ್ಠ 65 ರಿಂದ 70 ಸ್ಥಾನ ಗೆಲ್ಲುವ ಭರವಸೆ ಇತ್ತು. ಆದರೆ, ಅಲ್ಪಸಂಖ್ಯಾತರನ್ನು ತಪ್ಪು ದಾರಿಗೆ ಎಳೆದರು.
ಜೆಡಿಎಸ್ ಗೆದ್ದರೆ ಬಿಜೆಪಿ ಜತೆ ಹೋಗ್ತಾರೆ ಅಂತ ಅಪಪ್ರಚಾರ ಮಾಡಿದರು. ಮುಸ್ಲಿಂ ಸಮುದಾಯ ಸರಿಯಾದ ನಿರ್ಧಾರ ಮಾಡಿದ್ದರೆ ಬಿಜೆಪಿಗೆ 104 ಸ್ಥಾನ ಬರುತ್ತಿರಲಿಲ್ಲ. ಅವರು “ಆಪರೇಷನ್ ಕಮಲ’ಕ್ಕೂ ಹೋಗುತ್ತಿರಲಿಲ್ಲ ಎಂದು ಆಗ ಜೆಡಿಎಸ್ ವಿರುದ್ಧ ವಾಗಾœಳಿ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.