ಸಿದ್ದಾಪುರ: ರಾಜ್ಯ ಹೆದ್ದಾರಿ ಬದಿಯಲ್ಲೇ ಕಸದ ಕಾಶಿ
ಪರಿಸರ ದುರ್ನಾತ, ಸಾಂಕ್ರಾಮಿಕ ರೋಗದ ಭೀತಿ
Team Udayavani, Jun 8, 2019, 6:00 AM IST
ಸಿದ್ದಾಪುರ: ಕುಂದಾಪುರ ತಾಲೂಕಿನಲ್ಲಿಯೇ ಅತೀ ವೇಗವಾಗಿ ಬೆಳೆಯುತ್ತಿರುವ ಸಿದ್ದಾಪುರಕ್ಕೆ ಕಸದ ವಿಲೇವಾರಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಹೆದ್ದಾರಿಯ ಬದಿಯಲ್ಲಿಯೇ ತ್ಯಾಜ್ಯ ರಾಶಿ ಬಿದ್ದಿದ್ದು, ಜನರನ್ನು ರೋಗದ ಭೀತಿ ಆವರಿಸಿದೆ.
ಪೇಟೆಯಲ್ಲಿ ಸಂಗ್ರಹವಾದ ಕಸವನ್ನು ವಿಲೇವಾರಿ ಮಾಡಲು ಗ್ರಾ. ಪಂ.ಗೆ ಸೂಕ್ತ ಜಾಗದ ಕೊರತೆ ಇಲ್ಲದಿದ್ದರೂ, ವ್ಯವಸ್ಥೆ ಮಾಡುವಲ್ಲಿ ಎಡವುತ್ತಿದೆ. ಸಂಗ್ರಹವಾಗುವ ಕಸ ಘನ ತ್ಯಾಜ್ಯ ಘಟಕದಲ್ಲಿ ವಿಲೇವಾರಿ ಆಗುತ್ತಿದ್ದರೂ, ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎನ್ನುವ ಅಪಾದನೆಯೂ ಇದೆ.
ಪೇಟೆಯ ಅನತಿ ದೂರದಲ್ಲಿರುವ ಸಣ್ಣಹೊಳೆಯ ಹತ್ತಿರ ರಾಜ್ಯ ಹೆದ್ದಾರಿಯ ಬದಿಯಲ್ಲಿಯೇ ಪೇಟೆಯವರು ಮತ್ತು ಗ್ರಾಮದ ಹೊರಗಿನವರು ಕಸವನ್ನು ಎಸೆಯುತ್ತಿದ್ದಾರೆ. ಇದನ್ನು ತಡೆಗಟ್ಟಬೇಕಾದ ಸ್ಥಳೀಯಾಡಳಿತ ಮಾತ್ರ ಕೈಕಟ್ಟಿ ಕುಳಿತಿದೆ.
ಇದರ ಪರಿಣಾಮ ಮಳೆಗಾಲದಲ್ಲಿ ಕಸ ಹಾಗೂ ಇತರ ತ್ಯಾಜ್ಯಗಳ ನೀರು ನೇರವಾಗಿ ನದಿಗೆ ಸೇರುತ್ತಿದೆ. ಇದರಿಂದಾಗಿ ಸಾಂಕ್ರಾಮಿಕ ರೋಗದ ಭೀತಿ ಜನರಲ್ಲಿ ಮನೆ ಮಾಡಿದೆ. ದುರ್ನಾತ ಬಿರುತ್ತಿದ್ದು, ವಾಹನ ಸವಾರರು ಹಾಗೂ ದಾರಿ ಹೋಕರು ಮೂಗು ಮುಚ್ಚಿಕೊಂಡು ತಿರುಗುವಂತಾಗಿದೆ. ಸ್ಥಳೀಯ ನಿವಾಸಿಗಳು ಮನೆಯಿಂದ ಹೊರಬರಲಾರದೆ, ಕಿಟಕಿ ಹಾಗೂ ಬಾಗಿಲುಗಳನ್ನು ಮುಚ್ಚಿಕೊಂಡೆ ಜೀವನ ಸಾಗಿಸುತ್ತಿದ್ದಾರೆ.
ನಾಯಿಗಳ ಹಾವಳಿ
ಕಸ ಕಡ್ಡಿಗಳಲ್ಲದೆ, ಕೋಳಿ ಸೇರಿದಂತೆ ಇತರ ತ್ಯಾಜ್ಯಗಳನ್ನು ಹೆದ್ದಾರಿ ಬದಿಯಲ್ಲಿ ಎಸೆಯುವುದರಿಂದ ಇದನ್ನು ತಿನ್ನಲು ಬರುವ ನಾಯಿಗಳ ಹಾವಳಿ ಹೆಚ್ಚಾಗಿದೆ.
ಕೆಲವು ಬಾರಿ ತ್ಯಾಜ್ಯಗಳು ತಿನ್ನಲು ಸಿಗದಿದ್ದಾಗ ನಾಯಿಗಳು ಶಾಲಾ ಮಕ್ಕಳು ಸೇರಿದಂತೆ ದಾರಿಹೋಕರಿಗೆ ತೊಂದರೆ ನೀಡುತ್ತವೆ. ಬೈಕಿನಲ್ಲಿ ಹೋಗುವರನ್ನು ಅಟ್ಟಿಸಿಕೊಂಡು ಹೋಗುತ್ತವೆ. ಇದರಿಂದಾಗಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂಬುದು ಸಾರ್ವಜನಿಕರ ಅಳಲು.
ಈ ಬಗ್ಗೆ ಸ್ಥಳೀಯಾಡಳಿತ, ಪರಿಸರ ಇಲಾಖೆ, ರಾಜ್ಯ ಹೆದ್ದಾರಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಗಮನ ಹರಸುವ ಮೂಲಕ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.
ಕ್ರಮ ಕೈಗೊಳ್ಳಲಾಗುವುದು
ಹೊರಗಿನ ಜನರಿಂದ ಇಲ್ಲಿ ತ್ಯಾಜ್ಯ ಹೆಚ್ಚಾಗುತ್ತಿದೆ. ಈ ಬಗ್ಗೆ ನಿಗಾ ವಹಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
-ಸತೀಶ್ ನಾಯಕ್,
ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿದ್ದಾಪುರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.