ಮಳೆಗಾಲಕ್ಕೂ ಮುನ್ನ ಸಾಂಕ್ರಾಮಿಕ ರೋಗ ಭೀತಿ


Team Udayavani, Jun 8, 2019, 9:34 AM IST

hubali-tdy-1..

ಧಾರವಾಡ: ಮಳೆಗಾಲದ ಹೊಸ್ತಿಲಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಳವಾಗಿದೆ. ಬಿಸಿಲಿನ ಹೊಡೆತಕ್ಕೆ ಕಾವೇರಿರುವ ಭೂಮಿ ಆಗಾಗ ಸುರಿಯುತ್ತಿರುವ ಮಳೆಗೆ ತಣ್ಣಗಾಗುತ್ತಿದ್ದರೂ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಇದೇ ಪ್ರಶಸ್ತ ಸಮಯವಾಗಿದೆ.

ಕುಡಿಯುವ ನೀರಿನ ಪೈಪ್‌ಲೈನ್‌ ಒಡೆದು ಚರಂಡಿ ನೀರು ಸೇರುವಿಕೆ, ಪರಿಸರದಲ್ಲಿ ಸ್ವಚ್ಛತೆ ಕೊರತೆ, ತಾಜ್ಯ ನಿರ್ವಹಣೆ ಕೊರತೆ, ಗ್ರಾಮೀಣ ಪ್ರದೇಶದಲ್ಲಿನ ಬಯಲು ಶೌಚಾಲಯ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಾರಣವಾಗುತ್ತಿದೆ.

ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಹಾಗೂ ಪಾಲಿಕೆ ಲೋಕಸಭಾ ಚುನಾವಣಾ ಕಾರ್ಯದಲ್ಲಿ ಮಗ್ನಗೊಂಡಿತ್ತು. ಫಾಗಿಂಗ್‌ ಮಾಡುವ ಕಾರ್ಯಕ್ಕೂ ಪಾಲಿಕೆ ಕೊಕ್ಕೆ ಹಾಕಿತ್ತು. ಮಹಾನಗರ ಪಾಲಿಕೆ ನಿರ್ಲಕ್ಷ್ಯವೇ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಮುಖ್ಯ ಕಾರಣವಾಗಿದ್ದು, ಈವರೆಗೂ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ. ಸದ್ಯ ಚುನಾವಣೆ ಕಾರ್ಯ ಮುಗಿದಿದ್ದು, ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಮೊದಲೇ ಪಾಲಿಕೆ, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂಬುದು ಜನಾಗ್ರಹವಾಗಿದೆ.

ನಗರದಲ್ಲಿಯೇ ಹೆಚ್ಚು: ಜೂ.7ರಂದು ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳ ಅನ್ವಯ ಜಿಲ್ಲೆಯಲ್ಲಿ 2019ರ ಜನೇವರಿಯಿಂದ ಜೂ. 7ರ ವರೆಗೆ ಮಲೇರಿಯಾ ರೋಗಕ್ಕೆ 4 ಜನ ತುತ್ತಾಗಿದ್ದರೆ ಡೆಂಘೀ 7, ಚಿಕುನ್‌ಗುನ್ಯಾ 8 ಜನರಲ್ಲಿ ಪತ್ತೆ ಆಗಿದೆ. ಸೂಕ್ತ ಚಿಕಿತ್ಸೆ ಲಭಿಸಿದ ಕಾರಣ ಯಾರೂ ಮೃತಪಟ್ಟಿಲ್ಲ. ಗ್ರಾಮೀಣಕ್ಕಿಂತ ನಗರ ಪ್ರದೇಶದಲ್ಲಿಯೇ ಹೆಚ್ಚು ಸಾಂಕ್ರಾಮಿಕ ರೋಗಗಳು ಪ್ರತಿವರ್ಷದಂತೆ ಈ ಸಲವೂ ಕಂಡು ಬಂದಿವೆ

ಮಲೇರಿಯಾ-ಡೆಂಘೀ ಆತಂಕ:
2010ರಲ್ಲಿ 309 ಜನರಲ್ಲಿ ಕಾಣಿಸಿಕೊಂಡಿದ್ದ ಮಲೇರಿಯಾ 2018ರಲ್ಲಿ 25 ಜನರಲ್ಲಿ ಕಾಣಿಸಿಕೊಂಡಿತ್ತು. ಈ ವರ್ಷದ ಐದು ತಿಂಗಳಲ್ಲಿ ಹುಬ್ಬಳ್ಳಿ ನಗರದಲ್ಲಿ 1 ಹಾಗೂ ನವಲಗುಂದದಲ್ಲಿ 3 ಜನರಲ್ಲಿ ಕಾಣಸಿಕೊಂಡಿದೆ. 2017ರಲ್ಲಿ 172 ಜನರಲ್ಲಿ ಕಾಣಸಿಕೊಂಡು ಆತಂಕಕ್ಕೆ ಕಾರಣವಾಗಿದ್ದ ಡೆಂಘೀ ಆಗ 3 ಜನರನ್ನು ಬಲಿ ಪಡೆದಿತ್ತು. ಈ ಪೈಕಿ ಧಾರವಾಡ ನಗರದಲ್ಲಿ ಇಬ್ಬರು ಹಾಗೂ ಕುಂದಗೋಳದಲ್ಲಿ ಒಬ್ಬ ವ್ಯಕ್ತಿ ಡೆಂಘೀಗೆ ಮೃತಪಟ್ಟಿದ್ದರು. 2018ರಲ್ಲಿ 112 ಜನರಲ್ಲಿ ಕಾಣಸಿಕೊಂಡಿದ್ದ ಡೆಂಘೀ ಹುಬ್ಬಳ್ಳಿ ನಗರದಲ್ಲಿ 55 ಹಾಗೂ ಧಾರವಾಡ ನಗರದಲ್ಲಿ 21 ಜನರಲ್ಲಿ ಕಾಣಿಸಿಕೊಂಡಿತ್ತು. ಈ ವರ್ಷದ ಐದು ತಿಂಗಳಲ್ಲಿ ಹುಬ್ಬಳ್ಳಿ ನಗರದಲ್ಲಿಯೇ ಆರು ಜನರು ಡೆಂಘೀಗೆ ತುತ್ತಾಗಿದ್ದರೆ ಧಾರವಾಡ ನಗರದಲ್ಲಿ ಒಬ್ಬರಲ್ಲಿ ಕಾಣಿಸಿಕೊಂಡಿದೆ.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಾ ಇದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇನ್ನೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಮ್ಮ ವ್ಯಾಪ್ತಿಗೆ ಬರದು. ಆದರೆ ಪಾಲಿಕೆಯೊಂದಿಗೆ ಸಮನ್ವತೆ ಇದ್ದು, ಅವಳಿ ನಗರದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯ ಕೈಗೊಳ್ಳುವಂತೆ ಪಾಲಿಕೆಗೆ ಪತ್ರ ಬರೆಯಲಾಗುವುದು.•ಆರ್‌.ಎನ್‌. ದೊಡ್ಡಮನಿ, ಜಿಲ್ಲಾ ಆರೋಗ್ಯಾಧಿಕಾರಿ
ಆರ್ಭಟಿಸಿ ತಣ್ಣಗಾದ ಚಿಕೂನ್‌ಗುನ್ಯಾ:
2009ರಲ್ಲಿ 308 ಜನರಲ್ಲಿ ಕಾಣಿಸಿಕೊಂಡು ಆರ್ಭಟಿಸಿದ್ದ ಚಿಕೂನಗುನ್ಯಾ 2017ರಲ್ಲಿ 11ಜನರಲ್ಲಿ ಕಾಣಿಸಿಕೊಂಡು ತಣ್ಣಗಾಗಿತ್ತು. ಆದರೆ 2018ರಲ್ಲಿ ವಿಧಾನಸಭಾ ಚುನಾವಣೆಯ ಗುಂಗಿನಲ್ಲಿ ಜಿಲ್ಲಾಡಳಿತ ಮಗ್ನರಾಗಿದ್ದರಿಂದ 85 ಜನರಲ್ಲಿ ಕಾಣಿಸಿಕೊಂಡಿತ್ತು. ಈ ಪೈಕಿ ಹುಬ್ಬಳ್ಳಿ ನಗರದಲ್ಲಿ 30, ಧಾರವಾಡ ನಗರದಲ್ಲಿಯೇ 21 ಜನರು ತುತ್ತಾಗಿದ್ದರು. ಈಗ ಐದು ತಿಂಗಳಲ್ಲಿ 8 ಜನರಲ್ಲಿ ಚಿಕೂನ್‌ಗುನ್ಯಾ ಕಂಡುಬಂದಿದೆ. ಧಾರವಾಡ, ಹುಬ್ಬಳ್ಳಿ, ಕಲಘಟಗಿಯಲ್ಲಿ ತಲಾ 2, ನವಲಗುಂದ ಹಾಗೂ ಹುಬ್ಬಳ್ಳಿ ನಗರದಲ್ಲಿ ತಲಾ ಒಬ್ಬರಲ್ಲಿ ಕಾಣಿಸಿಕೊಂಡಿದೆ. ಇನ್ನೂ ಮೆದುಳು ಜ್ವರಕ್ಕೆ 2018ರಲ್ಲಿ ಒಬ್ಬ ಬಲಿಯಾಗಿದ್ದು, ಈ ವರ್ಷದಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಿಲ್ಲ.
ಹೆಚ್ಚಾಗುತ್ತಾ ಇದೆ ಕಜ್ಜಿಯ ಕಿರಿಕಿರಿ:
ಜಿಲ್ಲಾಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಫೋಗಲ್, ಕಜ್ಜಿಯಂತಹ ಚರ್ಮ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಈ ಪೈಕಿ ಕಜ್ಜಿ ರೋಗಕ್ಕೆ ತುತ್ತಾದ ಜನರೇ ಹೆಚ್ಚು. ತುರಿಕೆ ಶಮನಕ್ಕಾಗಿ ಆಸ್ಪತ್ರೆಗಳ ಬಾಗಿಲು ತಟ್ಟುವಂತಾಗಿದೆ. ಇದಕ್ಕೆ ಈಗ ನೀಡುತ್ತಿರುವ ಔಷಧಿಯೂ ಕೆಲ ರೋಗಿಗಳಿಗೆ ನಾಟುತ್ತಿಲ್ಲ. ಔಷಧಿಗಳ ನಿಯಂತ್ರಣಕ್ಕೂ ಬಾರದ ಕಜ್ಜಿ ವೈರಾಣು ತನ್ನ ಹರಡುವಿಕೆ ಸಾಮರ್ಥಯ ಹೆಚ್ಚಿಸಿಕೊಂಡಿರುವ ಕಾರಣ ರೋಗಿಗಳು ಪರದಾಡುವಂತಾಗಿದೆ.
•ಶಶಿಧರ ಬುದ್ನಿ

ಟಾಪ್ ನ್ಯೂಸ್

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.