ಪಿಯುಸಿಯಲ್ಲಿ ತುಳು ಪಠ್ಯ ಸೇರ್ಪಡೆಗೆ ಮನವಿ
ತುಳು ನಿಯೋಗದಿಂದ ಸಿಎಂ ಭೇಟಿ
Team Udayavani, Jun 8, 2019, 9:51 AM IST
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಅವರ ನೇತೃತ್ವದ ನಿಯೋಗವು ಗುರುವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಪಿಯುಸಿ ತರಗತಿಯಲ್ಲಿ ಐಚ್ಛಿಕ ಪಠ್ಯವಿಷಯವಾಗಿ ತುಳುವನ್ನು ಸೇರ್ಪಡೆ ಮಾಡುವ ವಿಚಾರವಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಿತು.
ಸಚಿವ ಯು.ಟಿ. ಖಾದರ್ ಅವರು ಮುಖ್ಯಮಂತ್ರಿಗಳ ಜತೆ ಈ ಮಾತುಕತೆಯನ್ನು ಆಯೋಜಿಸಿದ್ದರು. ತುಳು ಪಠ್ಯವನ್ನು ಈಗಾಗಲೇ ಪ್ರೌಢ ಶಾಲೆ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅಳವಡಿಸಿಕೊಳ್ಳಲಾಗಿದೆ.
ಪಿಯುಸಿಯಲ್ಲಿ ಮಾತ್ರ ಬಾಕಿ ಇದೆ ಎಂಬ ವಿಚಾರವನ್ನು ಸಿಎಂ ಗಮನಕ್ಕೆ ತರಲಾಯಿತು. ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಮುಂಚಿತವಾಗಿ ಪಿಯುಸಿ ತರಗತಿಗಳಿಗೆ ಕೂಡ ತುಳು ಪಠ್ಯವನ್ನು ಐಚ್ಛಿಕ ವಿಷಯವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ತತ್ಕ್ಷಣವೇ ಪಿಯು ಇಲಾಖೆಯ ಉನ್ನತ ಅಧಿ ಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತುಳು ಅಕಾಡೆಮಿಯ ತುಳು ಭವನದ ಅಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಲು ಬೇಕಾದ 3.6 ಕೋ.ರೂ. ಬಿಡುಗಡೆ ಮಾಡುವಂತೆಯೂ ಅಧ್ಯಕ್ಷ ಎ.ಸಿ. ಭಂಡಾರಿಯವರು ಮುಖ್ಯಮಂತ್ರಿಯವರ ಗಮನ ಸೆಳೆದರು. ಈ ಬಗ್ಗೆ ಕೂಡ ಸ್ಪಂದಿಸುವುದಾಗಿ ಭರವಸೆ ಲಭಿಸಿದೆ.
ನಿಯೋಗದಲ್ಲಿ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಶಾಸಕ ವಸಂತ ಬಂಗೇರ, ಅಕಾಡೆಮಿ ಸದಸ್ಯರಾದ ತಾರಾನಾಥ ಗಟ್ಟಿ ಕಾಪಿಕಾಡ್, ಬೆನೆಟ್ ಅಮ್ಮನ್ನ ಇದ್ದರು. ಬಳಿಕ ಇದೇ ವಿಚಾರವಾಗಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕೂಡ ಭೇಟಿಯಾಗಿ ಮಾತುಕತೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.