ಜಿಪಂ ಸಿಇಒ ಅಮಾನತಿಗೆ ಕರವೇ ಒತ್ತಾಯ

ಜಿಲ್ಲೆಯ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸಲಿ

Team Udayavani, Jun 8, 2019, 9:52 AM IST

bk-tdy-2..

ಬಾಗಲಕೋಟೆ: ಜಿಪಂ ಸಿಇಒ ಗಂಗೂಬಾಯಿ ಮಾನಕರ ಅವರನ್ನು ಅಮಾನತುಗೊಳಿಸಲು ಒತ್ತಾಯಿಸಿ ಜಿಲ್ಲಾ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ: ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಮೂಲ ಸೌಲಭ್ಯಗಳನ್ನು ಈಡೇರಿಸುವಂತೆ ಮತ್ತು ಜಿಲ್ಲೆಯ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸುವಂತೆ ಹಾಗೂ ಸರ್ವಾಧಿಕಾರಿ ಧೋರಣೆಯ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಕರವೇ ಕಾರ್ಯಕರ್ತರು ಜಿಲ್ಲಾಡಳಿತ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಪಂ ಸಿಇಒ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗುತ್ತಾ ಆಗಮಿಸಿದ ಕರವೇ ಕಾರ್ಯಕರ್ತರು, ಕೆಲಕಾಲ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು.

ನಂತರ ಕರವೇ ಜಿಲ್ಲಾಧ್ಯಕ್ಷ ರಮೇಶ ಬದ್ನೂರು ಮಾತನಾಡಿ, ಜಿಲ್ಲೆಯಲ್ಲಿ ಶಾಶ್ವತ ಕುಡಿಯುವ ನೀರಿನ ಸರಬರಾಜಿಗಾಗಿ ಜಾರಿಗೆ ತಂದ ಬಹು ಹಳ್ಳಿ ಕುಡಿಯುವ ನೀರಿನ ಯೋಜನೆಗಳು ಆಮೆಗತಿಯಲ್ಲಿ ಸಾಗುತ್ತಿರುವುದು ಮತ್ತು ಕಳಪೆ, ಅವೈಜ್ಞಾನಿಕ ಕಾಮಗಾರಿಗಳ ಮೂಲಕ ಸರಕಾರದ (ಜನರ) ಹಣವನ್ನು ಪೋಲು ಮಾಡಿದ್ದಲ್ಲದೇ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದು ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನದ ಸಂಕೇತ. ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಜೂ.2ರಂದು ಸಂಜೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಭೇಟಿಯಾಗಿ ಪ್ರಮುಖ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ವಿನಂತಿಸಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ತೆರಳಿದ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಅವರು ಇಲಾಖೆಯ ಇತರೆ ಸಿಬ್ಬಂದಿ ಸಮ್ಮುಖದಲ್ಲಿ ಕೇವಲ ಕುಡಿಯಲು ಮಾತ್ರ ನೀರು ಕೊಡುತ್ತೇನೆ, ಸ್ನಾನಕ್ಕೆ, ಶೌಚಕ್ಕೆ, ಬಟ್ಟೆ ತೊಳೆಯಲು, ಪಾತ್ರೆ ತೊಳೆಯಲು, ಜಾನುವಾರುಗಳಿಗೆ ನೀರು ಕೊಡಲಾಗುವುದಿಲ್ಲ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ ಎಂದು ಆರೋಪಿಸಿದರು.

ಭಾಗ್ಯಾ ಬೆಟಗೇರಿ, ಬಸವರಾಜ ಧರ್ಮಂತಿ, ಬಸವರಾಜ ನೀಲನಾಯಕ, ಜಗದೀಶ ಎಂ.ಬಿ., ಗಣಪತಿ ಭೋವಿ, ಬಸವರಾಜ ಅಂಬಿಗೇರ, ಆತ್ಮಾರಾಮ ನೀಲನಾಯಕ, ಮಲ್ಲು ಕಟ್ಟಿಮನಿ, ರಂಜಾನ ನದಾಫ್‌, ಮಂಜುನಾಥ ಕಳ್ಳಿಗುಡ್ಡ, ಚಿನ್ನಪ್ಪ ಕುಂದರಗಿ, ಶ್ರೀಮಂತ ಹೊಸಕೋಟಿ, ಅಶೋಕ ಪೂಜಾರ, ಮಲ್ಲು ಮಡಿವಾಳರ, ರವಿ ಅಂಗಡಿ, ಶರಣು ಗಾಣಿಗೇರ, ಢೋಂಗ್ರಿಸಾಬ ನದಾಫ್‌, ಸಂಗು ಅಂಬಿಗೇರ, ಅಶೋಕ ಶಿಳ್ಳಿಕ್ಯಾತರ, ಮಹೇಶ ದೊಡ್ಡಣ್ಣವರ ಹಾಗೂ ರಂಗನಾಥ ಮೊಕಾಶಿ ಸೇರಿದಂತೆ ಕಾರ್ಯಕರ್ತರು ಪತ್ರಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.