ಬಳ್ಳಾರಿಯ ಜನಪದ ನಾಯಕನಿಗೆ ಗಡಿನಾಡ ಕೇಸರಿ ಪ್ರಶಸ್ತಿ ಪ್ರಧಾನ

ಕಯ್ಯಾರರ 104 ನೇ ಜನ್ಮದಿನಾಚರಣೆ

Team Udayavani, Jun 8, 2019, 4:04 PM IST

Prashasti-Pradhana

ಬದಿಯಡ್ಕ: ನೇಗಿಲ ಕ್ರಾಂತಿ, ಕನ್ನಡದ ಜಾಗೃತಿ, ಸಾಹಿತ್ಯದ ಆಸಕ್ತಿ ಕಯ್ಯಾರರನ್ನು ಒಂದು ಶಕ್ತಿಯನ್ನಾಗಿ ಮಾಡಿದೆ. ಸಂಸ್ಕೃತ ಪಂಡಿತರಾಗಿ, ಕನ್ನಡ ಹೋರಾಟಗಾರರಾಗಿ, ಸಾಹಿತ್ಯ ಲೋಕಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ ಶ್ರೇಷ್ಠ ಅಧ್ಯಾಪಕ ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲೂ ಕೈಯಾಡಿಸಿ ಸೆ„ ಎನಿಸಿಕೊಂಡ ಅನುಭವದ ಖಜಾನೆ ಕಯ್ಯಾರ ಕಿಂಞಣ್ಣ ರೈಗಳು ಎಂದು ದ.ಕ. ಜಿಲ್ಲಾ ಕ.ಸಾ.ಪ.ದ ಅಧ್ಯಕ್ಷರಾದ ಪ್ರದೀಪ ಕುಮಾರ ಕಲ್ಕೂರ ಅಭಿಪ್ರಾಯಪಟ್ಟರು.

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಮತ್ತು ಜನಾರ್ದನ ಕಲಾವೃಂದ ಜೋಡುಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ ಜೆಕೆವಿ ಸಭಾಂಗಣದಲ್ಲಿ ಜರುಗಿದ ಕನ್ನಡದ ಹಿರಿಯ ಚೇತನ ನಾಡೋಜ ಡಾ.ಕಯ್ಯಾರ ಕಿಞಣ್ಣ ರೈಗಳ 104 ನೇ ಜನ್ಮದಿನಾಚರಣೆ ಮತ್ತು ಗಡಿನಾಡ ಕೇಸರಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಕಯ್ಯಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೆ„ದು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಗಟ್ಟಿ ಕನ್ನಡಿಗರಾಗಿ ಕನ್ನಡವನ್ನೇ ಜೀವನವಾಗಿಸಿದವರು ಕಯ್ಯಾರರು. ಅನುಭವ ಸಾಮ್ರಾಜ್ಯದಲ್ಲಿ ಸರಳ ವ್ಯಕ್ತಿತ್ವ ಮತ್ತು ದಿಟ್ಟತನದ ಬರಹಗಳ ಮೂಲಕ, ಹೋರಾಟಗಳ ಮೂಲಕ ಬೆಂಕಿ ಬಿದ್ದಿದೆ ಮನೆಗೆ ಎಚ್ಚೆತ್ತು ಹೋರಾಡಿ ಎಂದು ಕನ್ನಡಿಗರನ್ನು ಒಗ್ಗೂಡಿಸಿ ಹೋರಾಡಿದವರು. ಬಹುಭಾಷಾ ಸಾಧಕರು. ವಿಭಿನ್ನ ಭಾಷಾ ವೀವಿಧ್ಯತೆ ಹೊಂದಿರುವ ಕಾಸರಗೋಡಲ್ಲಿ ಕನ್ನಡಿಗರ ಭಾಷಾ ಪ್ರೇಮ ಗಟ್ಟಿಯಾಗಿ ಉಳಿಯಲು ಇಂತಹ ಚೇತನಗಳೇ ಕಾರಣ ಎಂದು ಅವರು ಹೇಳಿದರು.

ಗ.ಸಾ.ಸಾಂ. ಅಕಾಡೆಮಿಯ ಅಧ್ಯಕ್ಷರಾದ ಪ್ರಭಾಕರ ಕಲ್ಲೂರಾಯ ಬನದಗದ್ದೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಕರ್ನಾಟಕ ಇತಿಹಾಸ ಅಕಾಡೆಮಿಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಟಿ.ಎಚ್‌.ಎಮ್‌. ಬಸವರಾಜ ಬಳ್ಳಾರಿಯವರಿಗೆ ಗಡಿನಾಡ ಕೇಸರಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ಅಕಾಡೆಮಿಯು ಕಯ್ಯಾರರ ಜನ್ಮಭೂಮಿಯಲ್ಲಿ ವರ್ಷಂಪ್ರತಿ ಸಂಸ್ಮರಣೆ, ಜನ್ಮದಿನಾಚರಣೆ ಮುಂತಾದ ಕಾರ್ಯಕ್ರಮಗಳ ಮೂಲಕ ಹಿರಿಯ ಚೇತನಕ್ಕೆ ಗೌರವ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.


ಕೇರಳ ಗ್ರಾಮೀಣ ಬ್ಯಾಂಕ್‌ನ ನಿವೃತ್ತ ಪ್ರಾದೇಶಿಕ ಪ್ರಬಂಧಕರಾದ ಎಸ್‌.ಜಗನ್ನಾಥ ಶೆಟ್ಟಿ ಕುಂಬಳೆ ಸಂಸ್ಮರಣಾ ಭಾಷಣ ಮಾಡಿ ಕಯ್ನಾರರ ವ್ಯಕ್ತಿತ್ವ, ಸಾಧನೆ, ರಾಜಕೀಯ, ಸಾಮಾಜಿಕ, ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದರು. ರವಿ ನಾಯ್ಕಪು ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಅಧ್ಯಕ್ಷ ಎ.ಕೆ.ಎಂ. ಅಶ್ರಫ್‌, ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಸದಸ್ಯ ಪ್ರಸಾದ ರೈ ಕಯ್ನಾರು, ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್‌ ಶ್ರೀಧರ ಹೊಳ್ಳ ಕಯ್ನಾರು, ಕ.ಜಾ.ಪ. ಕೇರಳ ಘಟಕ ಅಧ್ಯಕ್ಷ ಎ.ಆರ್‌.ಸುಬ್ಬಯ್ಯಕಟ್ಟೆ , ಪ್ರೊ. ಶ್ರೀನಾಥ್‌, ಮೀಡಿಯ ಕ್ಲಾಸಿಕಲ್‌ ಅಧ್ಯಕ್ಷ ಶ್ರೀಕಾಂತ್‌ ನೆಟ್ಟಣಿಗೆ, ಲಯನ್ಸ್‌ ಕ್ಲಬ್‌ ಅಧ್ಯಕ್ಷ ರಾಧಾಕೃಷ್ಣ ಮಡಂದೂರು, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯು.ಎ.ಇ ಘಟಕದ ಉಪಾಧ್ಯಕ್ಷ ಮುನೀರ್‌ ಕುಬನೂರು, ಸಿದ್ಧಿಕ್‌ ಕಯ್ನಾರ್‌, ಕಾರ್ಯದರ್ಶಿ ಇಬ್ರಾಹಿಂ ಬಾಜೂರಿ, ತಾಜುದ್ದೀನ್‌ ಕುಬನೂರು ಹಾಗೂ ಸದಸ್ಯರಾದ ಸಾಕೀರ್‌ ಬಾಯಾರು ಮೊದಲಾದವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿದರು. ನವೀನ್‌ ನೆಟ್ಟಣಿಗೆ, ಗೋವಿಂದ ಪೈ ಕಾಲೇಜು ಉಪನ್ಯಾಸಕರಾದ ಶಿವಶಂಕರ್‌ ಉಪಸ್ಥಿತರಿದ್ದರು. ಗಾಯಕ ಋತಿಕ್‌ ಯಾದವ್‌ ಪ್ರಾರ್ಥನೆ ಹಾಡಿದರು. ಗ.ಸ.ಸಾಂ. ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಅಖೀಲೇಶ್‌ ನಗುಮುಗಂ ವಂದಿಸಿ ಜತೆಕಾರ್ಯದರ್ಶಿ ವಿದ್ಯಾ ಗಣೇಶ್‌ ಅಣಂಗೂರು ಕಾರ್ಯಕ್ರಮ ನಿರ್ವಹಿಸಿದರು.

ದೂರದ ಬಳ್ಳಾರಿಯಲ್ಲಿದ್ದ ನನ್ನ ಜಾನಪದ, ಕನ್ನಡ ಚಟುವಟಿಕೆಗಳನ್ನು ಗುರುತಿಸಿ ಕಯ್ಯಾರರಂತಹ ಮಹಾನ್‌ ವ್ಯಕ್ತಿತ್ವದ ಜನ್ಮದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಿರುವುದು ಅತ್ಯಂತ ಸಂತಸ ನೀಡಿದೆ. ಸಾರ್ಥಕ ಭಾವ ಮೂಡಿಸಿದೆ. ಪುಸ್ತಕ ಇಲ್ಲದ ಮನೆ ಹಿಡಿಗೆ ಇಲ್ಲದ ಕೊಡಲಿಯಂತೆ. ಪುಸ್ತಕಗಳು ಮಾನವನ ನಿಜವಾಗ ಸಂಗಾತಿ ಗಡಿನಾಡಿನ ಕನ್ನಡ ಶಾಲೆಗಳಿಗೆ ಕನ್ನಡ ಪುಸ್ತಕಗಳನ್ನು ನೀಡುವ ಅಕಾಡೆಮಿಯ ಉನ್ನತ ಚಿಂತನೆಗೆ ಪೂರ್ಣ ಬೆಂಬಲವಾಗಿ ಒಂದಷ್ಟು ಪುಸ್ತಕಗಳನ್ನು ನೀಡುತ್ತಿದ್ದೇನೆ.

ಟಿ.ಎಚ್‌.ಎಂ.ಬಸವರಾಜ್‌, ಜನಪದ ಪರಿಷತ್ತು ಬಳ್ಳಾರಿ ಘಟಕದ ಅಧ್ಯಕ್ಷ

ಅಪ್ಪಟ ಕನ್ನಡಿಗರಾದ ಕಯ್ಯಾರರು ನಮ್ಮಲ್ಲಿ ತುಂಬಿದ ಭಾಷಾ ಪ್ರೇಮದ ಕಂಪು ಆರಿಹೋಗದಂತೆ ಗಡಿನಾಡ ಕನ್ನಡಿಗರು ಜಾಗೃತರಾಗಬೇಕು. ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸುವುದು, ಕನ್ನಡದ ಪುಸ್ತಕಗಳನ್ನು, ಪತ್ರಿಕೆಗಳನ್ನು ಓದಲು ನೀಡುವ ಮೂಲಕ ಭಾಷೆಯ ಬಗ್ಗೆ ಪ್ರೀತಿ ಮತ್ತು ಗೌರವ ಹುಟ್ಟುವಂತೆ ಮಾಡಬೇಕು. ಆದುದರಿಂದಲೇ ನನ್ನ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸಿ ಕನ್ನಡದಲ್ಲೇ ವಿದ್ಯಾಭ್ಯಾಸ ನೀಡುತ್ತಿದ್ದೇನೆ.

ಎ.ಕೆ.ಎಂ.ಅಶ್ರಫ್‌, ಅಧ್ಯಕ್ಷರು, ಮಂಜೇಶ್ವರ, ಬ್ಲೋಕ್‌ ಪಂಚಾಯತ್‌

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.