ಕುಡಿಯುವ ನೀರಿನ ಯೋಜನೆ ಎಂಜಿನಿಯರ್ ಗಳೊಂದಿಗೆ ಶಾಸಕರ ಸಭೆ
Team Udayavani, Jun 9, 2019, 6:10 AM IST
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಹಾಗೂ ಕ್ಷೇತ್ರದ ಜನತೆಗೆ ನೀರು ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನೂತನ ಯೋಜನೆ ರೂಪಿಸುವ ಸಲುವಾಗಿ ಶಾಸಕ ವಿ. ಸುನಿಲ್ ಕುಮಾರ್ ಅವರು ಇಲಾಖೆ ಎಂಜಿನಿಯರ್ಗಳೊಂದಿಗೆ ಜೂ. 7ರಂದು ತಾ.ಪಂ. ಸಭಾಂಗಣದಲ್ಲಿ ಸಮಾಲೋಚನ ಸಭೆ ನಡೆಸಿದರು.
ಹೆಬ್ರಿ ಹಾಗೂ ನಿಟ್ಟೆಯ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿಕೊಡುವಂತೆ ಸೂಚಿಸಿದ ಶಾಸಕರು, ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸೀತಾನದಿ ಕಿಂಡಿ ಅಣೆಕಟ್ಟಿನಿಂದ ಹಾಗೂ ವಾರಾಹಿ ನೀರಿನ ಮೂಲದಿಂದ ನೀರು ಪೂರೈಸುವ ಸಾಧ್ಯತೆ ಕುರಿತು ಪರಿಶೀಲಿಸಿ ವರದಿ ನೀಡುವಂತೆಯೂ ತಿಳಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್. ಕೋಟ್ಯಾನ್, ರೇಷ್ಮಾ ಉದಯ ಶೆಟ್ಟಿ, ದಿವ್ಯಶ್ರೀ ಅಮೀನ್, ಸುಮಿತ್ ಶೆಟ್ಟಿ, ಜ್ಯೋತಿ ಹರೀಶ್ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಮೈಸೂರು ವಿಭಾಗದ ಸುಪರಿಂಟೆಂಡೆಂಟ್ ಎಂಜಿನಿಯರ್ ವೀರಭದ್ರಯ್ಯ, ಉಡುಪಿ ಕಾರ್ಯನಿರ್ವಾಹಕ ಎಂಜಿನಿಯರ್, ಕಾರ್ಕಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.