ಸರ್ಕಾರಿ ಶಾಲೆಗಳಿಗೂ ಬಂತು ಈಗ ಡಿಮಾಂಡ್‌!

Team Udayavani, Jun 9, 2019, 9:53 AM IST

Udayavani Kannada Newspaper

ವಿಶೇಷ ವರದಿ
ದಾವಣಗೆರೆ:
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯ 32 (ಹರಪನಹಳ್ಳಿ ತಾಲೂಕು ಸೇರಿ) ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭವಾಗಿದ್ದು, ಜೂನ್‌ 7ರ ವರೆಗೆ ಒಟ್ಟು 843 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಕಳೆದ ಮೇ 29ರಂದು ಶಾಲಾ ಪ್ರಾರಂಭೋತ್ಸವದೊಂದಿಗೆ ಆಂಗ್ಲ ಮಾಧ್ಯಮಕ್ಕೂ ಚಾಲನೆ ನೀಡಲಾಗಿದ್ದು, ಕೆಲವೊಂದು ಶಾಲೆಗಳಲ್ಲಿ ಅತಿ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆಂಗ್ಲ ಮಾಧ್ಯಮಕ್ಕಾಗಿಯೇ ಹೊಸದಾಗಿ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆದಿಲ್ಲ. ಈಗಾಗಲೇ ಸೇವೆಯಲ್ಲಿರುವ ಶಿಕ್ಷಕರಲ್ಲೇ ಇಬ್ಬರನ್ನು ಆಯ್ಕೆ ಮಾಡಿ ಆಂಗ್ಲ ಮಾಧ್ಯಮ ಹೊಣೆಗಾರಿಕೆ ವಹಿಸಲಾಗಿದೆ. ಜಿಲ್ಲಾ ಮತ್ತು ಶಿಕ್ಷಣ ತರಬೇತಿ ಸಂಸ್ಥೆ (ಡಯಟ್)ನಲ್ಲಿ 15 ದಿನಗಳ ಕಾಲ ಶಿಕ್ಷಕರಿಗೆ ಆಂಗ್ಲ ಮಾಧ್ಯಮದ ಬಗ್ಗೆ ವಿಶೇಷ ತರಬೇತಿ ಸಹ ನೀಡಲಾಗಿದೆ.

ಆಂಗ್ಲ ಮಾಧ್ಯಮ ಪ್ರವೇಶಕ್ಕೆ ಈ ವರ್ಷ ಶಿಕ್ಷಣ ಇಲಾಖೆ 30 ವಿದ್ಯಾರ್ಥಿಗಳ ನಿಗದಿಪಡಿಸಿಕೊಂಡಿದೆ. ಆದರೆ, ಕೆಲವೊಂದು ಶಾಲೆಗಳಲ್ಲಿ ನಿಗದಿಗಿಂತ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವುದು ಶಿಕ್ಷಣ ಇಲಾಖೆ ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಕಳೆದ 10 ದಿನಗಳಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೂ ಕೆಲವೊಂದು ಶಾಲೆಯಲ್ಲಿ ನಿರೀಕ್ಷಿತ ದಾಖಲಾತಿ ನಡೆದಿಲ್ಲ. ಈ ಶೈಕ್ಷಣಿಕ ಸಾಲಿನಲ್ಲಿ ಆಂಗ್ಲ ಮಾಧ್ಯಮಕ್ಕೆ ಸದ್ಯ 946 ಅರ್ಜಿ ವಿತರಣೆಯಾಗಿದ್ದು, ಅದರಲ್ಲಿ 843 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಈ ಪೈಕಿ ಬಾಲಕರು 433 ಹಾಗೂ ಬಾಲಕಿಯರು 410 ಇದ್ದಾರೆ. ಆಂಗ್ಲ ಮಾಧ್ಯಮ ಪ್ರವೇಶಕ್ಕೆ ಜೂನ್‌ 30ರ ವರೆಗೂ ಅವಕಾಶ ಇದೆ.

ಆಂಗ್ಲ ಮಾಧ್ಯಮಕ್ಕೆ ಈ ಸಾಲಿನಲ್ಲಿ ಅತಿ ಕಡಿಮೆ ಅಂದರೆ ಹೊನ್ನಾಳಿ ತಾಲೂಕಿನ ಬೆಳಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಮಾತ್ರ ದಾಖಲಾಗಿದ್ದರೆ, ಹರಪನಹಳ್ಳಿ ತಾಲೂಕಿನ ಹಲುವಾಗಲು ಶಾಲೆಯಲ್ಲಿ 112 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಚನ್ನಗಿರಿ ತಾಲೂಕಿನ ನಲ್ಲೂರು ಸರ್ಕಾರಿ ಹೈಯರ್‌ ಪ್ರಾಥಮಿಕ ಶಾಲೆ ಹಾಗೂ ಹೊನ್ನಾಳಿ ತಾಲ್ಲೂಕಿನ ದೇವನಾಯ್ಕನಹಳ್ಳಿ ಶಾಲೆಯಲ್ಲಿ ತಲಾ 8 ಹಾಗೂ ಜಗಳೂರು ಜಿಎಚ್ಪಿಎಸ್‌ (ಬಾಲಕರು)ನಲ್ಲಿ 11 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.

ಕೆಲವು ಶಾಲೆಗಳಲ್ಲಿ 15 ರಿಂದ 40 ವಿದ್ಯಾರ್ಥಿಗಳು ದಾಖಲಾಗಿದ್ದು, ಅರ್ಜಿ ಪಡೆದ ಇನ್ನೂ 103 ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮಕ್ಕೆ ಸೇರಿಸಬೇಕಿದೆ. ಪ್ರವೇಶಕ್ಕೆ 20 ದಿನ ಕಾಲಾವಕಾಶ ಇರುವುದರಿಂದ ಮತ್ತಷ್ಟು ವಿದ್ಯಾರ್ಥಿಗಳು ದಾಖಲಾಗಬಹುದೆಂದು ನಿರೀಕ್ಷಿಸಲಾಗಿದೆ.

ಜಿಲ್ಲೆಯ 32 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲಾಗಿದೆ. ಈ ಸಾಲಿನಲ್ಲಿ ಒಂದು ಶಾಲೆಗೆ 30 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೆಲವೆಡೆ ಕಡಿಮೆ ಇದ್ದರೆ ಹಲವೆಡೆ ನಿರೀಕ್ಷೆಗಿಂತ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ವಿದ್ಯಾರ್ಥಿಗಳ ದಾಖಲಾತಿಗೆ ಜೂನ್‌ 30ರ ವರೆಗೆ ಅವಕಾಶ ಇದೆ. ಸದ್ಯ ಮೊದಲಿದ್ದ ಶಿಕ್ಷಕರಿಗೇ ತರಬೇತಿ ನೀಡಿ, ಆಂಗ್ಲ ಮಾಧ್ಯಮಕ್ಕೆ ನಿಯೋಜಿಸಲಾಗಿದೆ. ಮುಂದೆ ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 120 ಹಾಗೂ ಹರಪನಹಳ್ಳಿ ತಾಲೂಕಿನಲ್ಲಿ 120 ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಸದ್ಯ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಂದೆ ತರಗತಿ, ಶಿಕ್ಷಕರ ಕೊರತೆ ಉಂಟಾಗಬಹುದು.
ಸಿ.ಆರ್‌. ಪರಮೇಶ್ವರಪ್ಪ,
ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ.

ಟಾಪ್ ನ್ಯೂಸ್

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.