ಮುಧೋಳ: ಸ್ವಂತ ಖರ್ಚಿನಿಂದ ಹೆದ್ದಾರಿ ಗುಂಡಿ ದುರಸ್ತಿ
Team Udayavani, Jun 9, 2019, 10:15 AM IST
ಮುಧೋಳ: ರಸ್ತೆ ದುರಸ್ತಿ ಮಾಡುವಂತೆ ತಾಲೂಕು ಆಡಳಿತಕ್ಕೆ ಮನವಿ ಮಾಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಸತೀಶ ಬಂಡಿವಡ್ಡರ ಸ್ವಂತ ಖರ್ಚಿನಿಂದ ಹೆದ್ದಾರಿ ಗುಂಡಿಗಳನ್ನು ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.
ನಗರದ ರಾಜ್ಯ ಹೆದ್ದಾರಿಯಲ್ಲಿ ಅಲ್ಲಲ್ಲಿ ತೆಗ್ಗುಗಳು ಬಿದ್ದಿರುವುದರಿಂದ ವಾಹನ ಚಾಲಕರಿಗೆ ತೊಂದರೆಯಾಗಿತ್ತು. ನಗರಸಭೆ ಹಾಗೂ ಪಿಡಬ್ಲುಡಿ ಇಲಾಖೆಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ್ಲ. ಇದರಿಂದ ಬೇಸತ್ತು ತಮ್ಮ ಸ್ವಂತ ಖರ್ಚಿನಲ್ಲಿ ಸತೀಶ ಬಂಡಿವಡ್ಡರ ರಸ್ತೆಗಳಲ್ಲಿ ಬಿದ್ದಿರುವ ತೆಗ್ಗುಗಳನ್ನು ಡಾಂಬರೀಕರಣದ ಖಡಿಗಳಿಂದ ಮುಚ್ಚಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಸತೀಶ ಬಂಡಿವಡ್ಡರ, ಅನೇಕ ಬಾರಿ ಈ ರಸ್ತೆಗಳ ಬಗ್ಗೆ ಸಂಬಂಧಿಸಿದ ಇಲಾಖೆಗಳಿಗೆ ನಾನು ಮನವಿ ಮಾಡಿದ್ದೆ. ಆದರೆ ಇದಕ್ಕೆ ಯಾರೂ ಸ್ಪಂದಿಸಲಿಲ್ಲ. ಈಗ ಮಳೆಗಾಲ ಆರಂಭವಾಗಿರುವುದರಿಂದ ಈ ತಗ್ಗುಗಳಿಂದ ವಾಹನ, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಕಂಡು ನಾನೇ ಈ ಕೆಲಸ ಮಾಡುತ್ತಿದ್ದೇನೆ ಎಂದರು. ಇದರಲ್ಲಿ ಯಾವುದೇ ತರಹದ ರಾಜಕೀಯವಿಲ್ಲ. ಇದೊಂದು ಸಾಮಾಜಿಕ ಕಾರ್ಯವೆಂದು ಭಾವಿಸಿದ್ದೇನೆಎಂದರು.
ಪರಸು ಇಟ್ಟಿನ್ನವರ, ಸಂಜು ಡೊಂಬರ, ಶಂಕರ ಹಲಗಲಿ, ನಾಗರಾಜ ಸಂಭಾಜಿ, ರಾಜು ಬೇಪಾರಿ, ಇರ್ಫಾನ ಸುರಪುರ, ದಾದಾ ಜಮಾದಾರ,ಹಜರತಸಾಬ ಸಿದ್ದಕಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.