ಸಾವಿರ ಹಾಸಿಗೆ ಆಸ್ಪತ್ರೆ ಶೀಘ್ರ ನಿರ್ಮಾಣ
Team Udayavani, Jun 9, 2019, 11:56 AM IST
ಕೊಪ್ಪಳ: ಡೊಂಬರಹಳ್ಳಿ-ಹಳೆ ಗೊಂಡಬಾಳ ಮಧ್ಯೆ ಹಿರೇಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ಶಾಸಕ ರಾಘವೇಂದ್ರ ಹಿಟ್ನಾಳ ಪರಿಶೀಲಿಸಿದರು.
ಕೊಪ್ಪಳ: ನಗರದಲ್ಲಿ ಶೀಘ್ರದಲ್ಲೇ ಸಾವಿರ ಹಾಸಿಗೆಯುಳ್ಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದರು.
ತಾಲೂಕಿನ ಕಾತರಕಿ, ಗುಡ್ಲಾನೂರು, ಬೇಳೂರು, ಡೊಂಬರಳ್ಳಿ, ಬೂದಿಹಾಳ, ಬಿಸರಳ್ಳಿ ಸೇರಿ ವಿವಿಧ ಗ್ರಾಮಗಳಲ್ಲಿ 1 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕೊಪ್ಪಳಕ್ಕೆ 116 ಕೋಟಿ ವೆಚ್ಚದಲ್ಲಿ ಸಾವಿರ ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ. ಇನ್ನೊಂದು ಜಿಲ್ಲಾಸ್ಪತ್ರೆ ನಗರದಲ್ಲಿ ಶೀಘ್ರ ನಿರ್ಮಾಣವಾಗಲಿದೆ. ಡೊಂಬರಹಳ್ಳಿ- ಹಳೇ ಗೊಂಡಬಾಳ ನಡುವೆ ಹಿರೇಹಳ್ಳದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲಾಗುತ್ತಿದ್ದು, ಇನ್ನೇನು ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಸೇತುವೆ ನಿರ್ಮಾಣದಿಂದ ಈ ಭಾಗದ ರೈತರಿಗೆ ವರದಾನವಾಗಲಿದೆ. ಮೈತ್ರಿ ಸರ್ಕಾರದಲ್ಲಿ ರೈತಪರ ಅನೇಕ ಯೋಜನೆಗಳು ಅನುಷ್ಠಾನಗೊಂಡಿದ್ದು, ಕೊಪ್ಪಳ ಕ್ಷೇತ್ರಕ್ಕೆ ನೀರಾವರಿಗೆ ಹೆಚ್ಚು ಅನುದಾನ ಬಿಡುಗಡೆಯಾಗಿದೆ ಎಂದರು.
ಕೊಪ್ಪಳ ಕ್ಷೇತ್ರವು ಬರುವ ದಿನಗಳಲ್ಲಿ ಹಸಿರಿನಿಂದ ಕಂಗೊಳಿಸಲಿದೆ. ತುಂಗಾಭದ್ರಾ ನದಿಯ ಹಿನ್ನೀರಿನ ಸದ್ಬಳಕೆ ಮಾಡಿಕೊಂಡು ಕೊಪ್ಪಳ ಏತ ನೀರಾವರಿಗೆ ಹೆಚ್ಚಿನ ಭೂಮಿಯು ಒಳಪಡುವಂತೆ ಮಾಡಿ, ಸತತವಾಗಿ ಭೀಕರ ಬರಗಾಲಕ್ಕೆ ತುತ್ತಾಗಿರುವ ಕೊಪ್ಪಳ ಕ್ಷೇತ್ರವನ್ನು ಒಂದು ಮಾದರಿಯ ನೀರಾವರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದರು.
ಈ ವೇಳೆ ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ಪ್ರಾಧಿಕಾರದ ಮಾಜಿ ಅಧ್ಯಕ್ಷ ಜುಲ್ಲು ಖಾದ್ರಿ, ಎಪಿಎಂಸಿ ಮಾಜಿ ಅಧ್ಯಕ್ಷ ಯಂಕನಗೌಡ್ರು ಹಿರೇಗೌಡ್ರು, ನಗರಸಭೆ ಸದಸ್ಯ ಅಕ್ಬರಪಾಷಾ ಪಲ್ಟನ್, ಮುಖಂಡರಾದ ಕೃಷ್ಣ ಇಟ್ಟಂಗಿ, ಕೇಶವರೆಡ್ಡಿ, ಶಂಕರಗೌಡ್ರು ಹಿರೇಗೌಡ್ರು, ಜಿಲ್ಲಾ ಎಸ್. ಘಟಕದ ಅಧ್ಯಕ್ಷ ಗಾಳೇಪ್ಪ ಪೂಜಾರ, ಕೃಷ್ಣ ಗಲಬಿ, ಬಸವರೆಡ್ಡಿ ಕರೆಡ್ಡಿ, ರಾಮನಗೌಡ್ರು, ಅಳವಂಡಿ ಪಿಎಸ್‌ಐ ರಾಮಣ್ಣ, ವಕ್ತಾರ ಕುರಗೋಡ ರವಿ ಯಾದವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
By Election: ಮೂರೂ ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.