11ರಿಂದ ಸ್ವಚ್ಛಮೇವ ಜಯತೇ ಆಂದೋಲನ
ಜಿಲ್ಲೆಯಲ್ಲಿ 1.25 ಲಕ್ಷ ಸಸಿ ನೆಡುವ ಗುರಿ: ಪ್ರಭಾರ ಸಿಇಒ ಪ್ರಕಾಶ್ • ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ
Team Udayavani, Jun 9, 2019, 1:41 PM IST
ಮಂಡ್ಯ: ವಿಶ್ವ ಪರಿಸರ ದಿನಾಚರಣೆ ಭಾಗವಾಗಿ ಸ್ವಚ್ಛ ಮೇವ ಜಯತೇ ಜನಾಂದೋಲನ ಕಾರ್ಯಕ್ರಮದಡಿ ಜೂ.11ರಂದು ಜಿಲ್ಲಾದ್ಯಂತ ಸುಮಾರು 1.25 ಲಕ್ಷ ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ ಎಂದು ಜಿಪಂ ಪ್ರಭಾರ ಸಿಇಒ ಎನ್.ಡಿ.ಪ್ರಕಾಶ್ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸ್ವಚ್ಛ ಮೇವ ಜಯತೇ ಜನಾಂದೋಲನ ಕಾರ್ಯಕ್ರಮ ಆಯೋಜನೆ ಕುರಿತು ಅರಣ್ಯ, ತೋಟಗಾರಿಕೆ ಅಧಿಕಾರಿಗಳು ಹಾಗೂ ಇಒ, ಪಿಡಿಒಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದೆ ಅವರು, ಜನಸಮುದಾಯಗಳ ಸಹಭಾಗಿತ್ವದಲ್ಲಿ ಸ್ವಚ್ಛತೆ, ನೀರು ಮತ್ತು ಹಸಿರು ಕುರಿತು ಜನಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗಿರುವ ಈ ಆಂದೋಲನವನ್ನು ಹೆಚ್ಚು ಕ್ರಿಯಾತ್ಮಕವಾಗಿ ಸಂಘಟಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಕಿವಿಮಾತು ಹೇಳಿದರು.
ಪ್ರತಿ ಗ್ರಾಪಂ 500 ಸಸಿ ನೆಡಬೇಕು: ಜೂ.11ರಂದು ಸಾರ್ವಜನಿಕರು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿ ಗ್ರಾಮ ಪಂಚಾಯತಿ ವತಿಯಿಂದ ಕನಿಷ್ಠ 500 ಸಸಿ ನೆಡಲು ಉದ್ದೇಶಿಸಲಾಗಿದೆ. ಸರ್ಕಾರಿ ಶಾಲೆ, ವಸತಿ ಶಾಲೆ, ವಸತಿ ನಿಲಯ, ಸರ್ಕಾರಿ ಕಚೇರಿ ಆವರಣ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡ ನೆಡಲು ಹಾಗೂ ಅವುಗಳನ್ನು ಸಂರಕ್ಷಿಸಲು ಪೂರಕ ವಾತಾವರಣ ಸೃಷ್ಟಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
2019 ಜಲವರ್ಷ ಘೋಷಣೆ: ಈ ಆಂದೋಲನ ಇಡೀ ವರ್ಷ ನಡೆಯಲಿದ್ದು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 2 ಸಾವಿರ ಸಸಿ ನೆಟ್ಟು ಪೋಷಿಸಬೇಕು. ಸರ್ಕಾರ 2019ನ್ನು ಜಲವರ್ಷ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಚೆಕ್‌ಡ್ಯಾಂಗಳ ನಿರ್ಮಾಣ, ಕಟ್ಟೆ, ಕಲ್ಯಾಣಿ, ಗೋಕಟ್ಟೆಗಳನ್ನು ಪುನರುಜ್ಜೀವನ ಗೊಳಿಸುವ ಅಭಿವೃದ್ಧಿ ಕೆಲಸಗಳನ್ನೂ ಅನುಷ್ಠಾನಗೊಳಿಸಬೇಕು ಎಂದ ಅವರು, ಸ್ವಚ್ಛಮೇವ ಜಯತೇ ಆಂದೋಲನ ಜೂ.11ರಿಂದ ಜುಲೈ 10ರವರೆಗೆ ನಡೆದರೆ, ಜಲಾಮೃತ ಕಾರ್ಯಕ್ರಮ ಇಡೀ ವರ್ಷ ನಡೆಯಲಿದೆ. ಸಭೆಯಲ್ಲಿ ತೋಟಗಾರಿಕೆ ಉಪ ನಿರ್ದೇಶಕ ರಾಜು, ಜಿಲ್ಲಾ ಅರಣ್ಯಾಧಿಕಾರಿ (ಸಾಮಾಜಿಕ ಅರಣ್ಯ ವಿಭಾಗ) ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ ಮೊದಲಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.