ಪ್ರಾಪರ್ಟಿ ಕಾರ್ಡ್: ವಿಸ್ತರಣೆ ಗಡುವು ಮುಕ್ತಾಯ; ಇಂದಿನಿಂದ ಕಡ್ಡಾಯ
Team Udayavani, Jun 10, 2019, 6:10 AM IST
ಮಹಾನಗರ: ನಗರ ವ್ಯಾಪ್ತಿಯಲ್ಲಿ ಆಸ್ತಿ ನೋಂದಣಿಗೆ ಪ್ರಾಪರ್ಟಿ ಕಾರ್ಡ್ ಕಡ್ಡಾಯ ವಿನಾಯತಿ ಜೂ. 10ಕ್ಕೆ ಮುಕ್ತಾಯಗೊಳ್ಳಲಿದ್ದು, ಸೋಮವಾರದಿಂದ ಮತ್ತು ಆಸ್ತಿ ನೋಂದಣಿಗೆ ಪ್ರಾಪರ್ಟಿಕಾರ್ಡ್ ಕಡ್ಡಾಯವಾಗಲಿದೆ.
ಈ ಕುರಿತಂತೆ ಭೂಮಾಪನ, ಭೂದಾಖಲೆಗಳು ಹಾಗೂ ಸೆಟ್ಲಮೆಂಟ್ ಇಲಾಖಾ ಆಯುಕ್ತ ಮನೀಶ್ ಮುದ್ಗೀಲ್ ಶನಿವಾರ ಮಂಗಳೂರಿಗೆ ಆಗಮಿಸಿ ಪರಿಶೀಲನೆ ನಡೆಸಿ ಇಲಾಖಾ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯೊಳಗೆ ಆಸ್ತಿ ನೋಂದಣಿಗೆ ಪ್ರಾಪರ್ಟಿಕಾರ್ಡ್ ಕಡ್ಡಾಯವನ್ನು ಜೂ. 10ರ ವರೆಗೆ ಮುಂದೂಡಿ ಮೇ 25ರಂದು ಆದೇಶ ಹೊರಡಿಸಲಾಗಿತ್ತು.
ಈ ನಡುವೆ ಪ್ರಾಪರ್ಟಿ ಕಾರ್ಡ್ ನೀಡಿಕೆ ಪ್ರಕ್ರಿಯೆಯಲ್ಲಿ ವಿಳಂಬಗತಿ ಮತ್ತು ಸರ್ವೆ ಹಾಗೂ ಇತರ ದಾಖಲಾತಿಗಳನ್ನು ಸಂಗ್ರಹಿಸಲು ಕಾಲಾವಕಾಶ ಬೇಕಾಗಿದ್ದು, ಪ್ರಾಪರ್ಟಿ ಕಾರ್ಡ್ ಅವಧಿಯನ್ನು ಇನ್ನೂ 2 ತಿಂಗಳು ವಿಸ್ತರಣೆ ಮಾಡು ವಂತೆ ಮುಖ್ಯಮಂತ್ರಿಯವರ ಸಂಸ ದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ಕಂದಾಯ ಸಚಿವ ಆರ್. ವಿ. ದೇಶಪಾಂಡೆಯವರಲ್ಲಿ ಮನವಿ ಮಾಡಿದ್ದಾರೆ.
ಇಲಾಖಾ ಆಯುಕ್ತರಿಂದ ಸಭೆ
ಫ್ಲಾಟ್‌ಗಳಿಗೆ ಪ್ರಾಪರ್ಟಿಕಾರ್ಡ್ ವಿತರಣೆ ಕುರಿತಂತೆ ಇರುವ ಗೊಂದಲ, ಸಮಸ್ಯೆಗಳ ನಿವಾರಣೆ ಕುರಿತಂತೆ ಮನೀಶ್ ಮುದ್ಗೀಲ್ ಜಿ.ಪಂ. ಸಭಾಂಗಣದಲ್ಲಿ ಸಭೆ ನಡೆಸಿದ್ದಾರೆ. ಇಲಾಖಾ ಅಧಿಕಾರಿಗಳು, ಬಿಲ್ಡರ್‌ಗಳು, ಕ್ರೆಡಾಯ್‌ಯ ಪದಾಧಿಕಾರಿಗಳು, ನ್ಯಾಯವಾದಿಗಳು ಭಾಗವಹಿಸಿದ್ದು, ಪ್ರಾಪರ್ಟಿಕಾರ್ಡ್ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ಆಯುಕ್ತರ ಗಮನಕ್ಕೆ ತಂದಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಆಯುಕ್ತರು ಪ್ರಾಪರ್ಟಿಕಾರ್ಡ್ ವಿತರಣೆ ವ್ಯವಸ್ಥೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.
ಮೂರು ಉಪನೋಂದಣಿ ಕಚೇರಿಗಳಲ್ಲಿ ಜಾರಿ
ಸರಕಾರದ ಆದೇಶದಂತೆ ಜೂ. 10ರ ಬಳಿಕ ಮಂಗಳೂರು ನಗರ, ಗ್ರಾಮಾಂತರ, ಮೂಲ್ಕಿ ಉಪನೋಂದಣಿ ಕಚೇರಿಗಳಲ್ಲಿ ಆಸ್ತಿ ಮಾರಾಟ ಮತ್ತು ನೋಂದಣಿಗೆ ಪ್ರಾಪರ್ಟಿಕಾರ್ಡ್ ಕಡ್ಡಾಯವಾಗಲಿದೆ. ಈ ನಿಟ್ಟಿನಲ್ಲಿ ಭೂಮಾಪನ, ಭೂದಾಖಲೆಗಳು, ಸೆಟ್ಲಮೆಂಟ್ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿದೆ.
ಉಪನೋಂದಣಿ ಕಚೇರಿಗಳ ಸರ್ವರ್‌ಗಳಿಗೆ ಲಿಂಕ್ ಮಾಡುವ ಕಾರ್ಯವೂ ನಡೆದಿದೆ. ಅಸ್ತಿ ನೋಂದಣಿ ಕಚೇರಿಗಳ ಸರ್ವರ್‌ಗಳಿಗೆ ಪ್ರಾಪರ್ಟಿ ಕಾರ್ಡ್ ಸರ್ವರ್ ಜೋಡಣೆಯಾದ ಬಳಿಕ ಮಾರಾಟ /ಖರೀದಿ ಜಾಗದ ಪ್ರಾಪರ್ಟಿಕಾರ್ಡ್ ನಂಬರ್‌ನ್ನು ನೋಂದಣಿ ಕಚೇರಿಯ ಸರ್ವರ್‌ನಲ್ಲಿ ನಮೂದಿಸಿದರೆ ಅದಕ್ಕೆ ಸಂಬಂಧಪಟ್ಟ ಎಲ್ಲ ದಾಖಲೆಗಳು, ವಿವರಗಳು ಲಭ್ಯವಾಗಲಿದ್ದು, ನೋಂದಣಿ ಪ್ರಕ್ರಿಯೆಯಲ್ಲಿ ಸುಗಮವಾಗಲಿದೆ.
ಪ್ರಾಪರ್ಟಿ ಕಾರ್ಡ್ ವಿತರಣೆಯ ಅವ್ಯವಸ್ಥೆಯನ್ನು ಖಂಡಿಸಿ ಶಾಸಕ ಡಿ. ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಜೂ. 10ರಂದು ಬೆಳಗ್ಗೆ 11 ಗಂಟೆಗೆ ನಗರದ ಸಮೀಪವಿರುವ ಮಿನಿ ವಿಧಾನಸೌಧದ ಆವರಣದಲ್ಲಿರುವ ಪ್ರಾಪರ್ಟಿ ಕಾರ್ಡ್ ವಿತರಣೆ ಕೇಂದ್ರದ ಎದುರು ಪ್ರತಿಭಟನೆ ನಡೆಯಲಿದೆ. ಪಾಪರ್ಟಿ ಕಾರ್ಡ್ ಅನುಷ್ಠಾನಗೊಳಿಸಿದ ಸರಕಾರ ಅದರ ವಿತರಣೆಗೆ ಸರಕಾರಿ ಕಚೇರಿಗಳಲ್ಲಿ ಯಾವುದೇ ಸೌಲಭ್ಯ ಕಲ್ಪಿಸದೆ ನಾಗರಿಕರನ್ನು ಸತಾಯಿಸಲಾಗುತ್ತ್ತಿದೆ. ಆದ್ದರಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.