ಬಸ್ ಹಾಯ್ದು ಬಾಲಕ ಸಾವು
•ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ •ರಸ್ತೆ ತಡೆ ನಿರ್ಮಿಸುವಂತೆ ಗ್ರಾಮಸ್ಥರ ಒತ್ತಾಯ
Team Udayavani, Jun 10, 2019, 2:04 PM IST
ಚಿಕ್ಕೋಡಿ: ವೇಗ ತಡೆ ನಿರ್ಮಿಸುವಂತೆ ಒತ್ತಾಯಿಸಿ ಹೆದ್ದಾರಿಯಲ್ಲಿ ಬಾಲಕನ ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಚಿಕ್ಕೋಡಿ: ಬಸ್ ಹಾಯ್ದು ಬಾಲಕನೋರ್ವ ಸ್ಥಳದಲ್ಲಿಯೇ ಮೃತಟ್ಟಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆ ನಿರ್ಮಿಸುವಂತೆ ರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ರವಿವಾರ ನಡೆದಿದೆ.
ಗೋಕಾಕ ತಾಲೂಕಿನ ಕಲ್ಲೋಳಿ ಗ್ರಾಮದ ಶಾನೂರ ತುಕಾರಾಮ ಉಮರಾಣಿ (10) ಮೃತಪಟ್ಟ ಬಾಲಕ. ಈತನು ಶಾಲೆಯ ರಜೆಗೆಂದು ಅಜ್ಜಿಗೆ ಮನೆಗೆ ಬಂದಿದ್ದನು. ಎರಡು ಮೂರು ದಿನಗಳಲ್ಲಿ ಮರಳಿ ಸ್ವಗ್ರಾಮಕ್ಕೆ ತೆರಳುವಷ್ಟರಲ್ಲಿಯೇ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದು:ಖ ಮಡುಗಟ್ಟಿದೆ.
ಉಮರಾಣಿ ಗ್ರಾಮದ ಮಧ್ಯೆ ಹಾದು ಹೋಗಿರುವ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಗೆ ಗ್ರಾಮದ ಹತ್ತಿರ ವೇಗ ತಡೆ ಹಾಕುವಂತೆ ಹಲವು ಬಾರಿ ಮನವಿ ಮಾಡಿದರೂ ಕೂಡಾ ಸರ್ಕಾರ ನಿರ್ಲಕ್ಷ ಮಾಡಿದೆ. ಹೀಗಾಗಿ ಗ್ರಾಮದ ಬಳಿ ವಾಹನಗಳು ಅತಿಯಾದ ವೇಗದಿಂದ ಚಲಿಸುವ ಕಾರಣದಿಂದ ವಾರಕ್ಕೊಮ್ಮೆ ರಸ್ತೆ ಅಪಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಆದರೂ ಸರ್ಕಾರ ವೇಗ ತಡೆ ಹಾಕದೇ ಇರುವುದು ದುರ್ದೈವದ ಸಂಗತಿಯಾಗಿದೆ ಎಂದು ಗ್ರಾಮಸ್ಥರು ರಸ್ತೆ ಬಂದ್ ಮಾಡಿ ಟೈಯರಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಜಿಪಂ ಸದಸ್ಯ ಪವನ ಕತ್ತಿ, ಮುಖಂಡರಾದ ಮುರಗೇಪ್ಪ ಅಡಿಸೇರಿ, ಲಕ್ಷ್ಮಣ ಪೂಜೇರಿ, ಕಲಗೌಡ ಪಾಟೀಲ, ಧನಪಾಲ ಭೀಮನಾಯಿಕ, ಸಂಜು ಜಿಡ್ಡಿಮನಿ, ಅಜಿತ್ ಕಾಂಬಳೆ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು. ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.