ಶುದ್ಧ ಕುಡಿಯುವ ನೀರು ಒದಗಿಸಲು ಡಿಸಿಗೆ ಸೂಚನೆ
Team Udayavani, Jun 10, 2019, 3:07 PM IST
ಯಾದಗಿರಿ: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿವೆ. ಇದರಿಂದ ಜನರಿಗೆ ಶುದ್ಧ ಕುಡಿಯುವ ನೀರು ದೊರೆಯದಂತಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಬೇಕು ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
ಜಿಲ್ಲೆಯಲ್ಲಿ ಬರ ಪರಿಸ್ಥಿತಿ ವೀಕ್ಷಣೆಗೆ ಆಗಮಿಸಿದ್ದ ವೇಳೆ ನಗರದಲ್ಲಿ ರವಿವಾರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬರಗಾಲ ಸಮರ್ಪಕವಾಗಿ ನಿರ್ವಹಣೆ ಮಾಡುವ ಜತೆಗೆ ಕೇಂದ್ರ ಸರಕಾರದ ಸೌಲಭ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನೀರು, ವಿದ್ಯುತ್, ಬೆಳೆ ಪರಿಹಾರ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ಜಿಲ್ಲೆಯ ಜನರು ತೊಂದರೆ ಅನುಭವಿ ಸುತ್ತಿದ್ದಾರೆ ಎಂದು ವಿವರಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್, ಮೇವಿನ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 168 ಮೆಟ್ರಿಕ್ ಟನ್ ಮೇವು ದಾಸ್ತಾನು ಮಾಡಲಾಗಿದೆ. ಅಲ್ಲದೆ ಸುಮಾರು 500ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಪುನಶ್ಚೇತನ ಮಾಡಲಾಗಿದೆ. ಇದರಲ್ಲಿ ಶೇ.70ರಷ್ಟು ಯಶಸ್ವಿಯಾಗಿರುವುದಾಗಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ 24 ಕೆರೆಗಳನ್ನು ಹೂಳೆತ್ತಲಾಗಿದೆ. ಕಳೆದ ವರ್ಷ ನರೇಗಾ ಯೋಜನೆಯಡಿ 26 ಲಕ್ಷ ಮಾನವ ದಿನಗಳನ್ನು ಸೃಷ್ಟಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ರಾಜಕುಮಾರ ಪತ್ತಾರ, ಕುಡಿಯುವ ನೀರಿನ ಸಮಸ್ಯೆ ಇರುವ 52 ಹಳ್ಳಿಗಳನ್ನು ಗುರುತಿಸಲಾಗಿದೆ. ಇದಲ್ಲದೇ ಹೊಸದಾಗಿ 400ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಕೆಲವೊಂದು ಕಡೆಗೆ ನೀರು ಲಭ್ಯವಾಗಿದೆ. ಕೆಲವೆಡೆ ನೀರಿನ ಲಭ್ಯತೆಯಿಲ್ಲ. ಪ್ರಯತ್ನಪಟ್ಟು 400 ಅಡಿ ಕೊರೆದರೂ ನೀರು ಬಂದಿಲ್ಲ. ಅಂತರ್ಜಲ ಮಟ್ಟ ಕಡಿಮೆಯಾಗಿದೆ. ಜಿಲ್ಲೆಯಲ್ಲಿ 326 ನೀರು ಶುದ್ಧೀಕರಣ ಘಟಕಗಳನ್ನು ಅಳವಡಿಸಲಾಗಿದೆ. ಇದರಲ್ಲಿ 197 ಕಾರ್ಯ ನಿರ್ವಹಿಸುತ್ತಿವೆ. 129 ಸ್ಥಗಿತಗೊಂಡಿವೆ ಎಂದು ಮಾಹಿತಿ ನೀಡಿದರು.
ಶಾಸಕ ನರಸಿಂಹನಾಯಕ ಮಾತನಾಡಿ, ಜಿಲ್ಲೆಯಲ್ಲಿ ಬಹುತೇಕ ಶುದ್ಧ ಕುಡಿಯುವ ನೀರಿನ ಘಟಕಗಳು ನಿಂತು ಹೋಗಿವೆ. ತಾವು ಅಧಿವೇಶನದಲ್ಲಿ ಈ ಬಗ್ಗೆ ಗಂಭೀರವಾಗಿ ಧ್ವನಿ ಎತ್ತಬೇಕು ಎಂದು ಯಡಿಯೂರಪ್ಪ ಅವರಿಗೆ ಸಮಸ್ಯೆ ಮನವರಿಕೆ ಮಾಡಿದರು.
ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಸಾಕಷ್ಟು ಇದೆ. ಹೀಗಾಗಿ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದಲ್ಲದೇ ಆರ್‌ಒ ಪ್ಲಾಂಟ್‌ಗಳನ್ನು ದುರಸ್ತಿಗೊಳಿಸುವಂತೆ ಸೂಚಿಸಿದರು.
ಇದಕ್ಕೆ ಸ್ಪಂದಿಸಿದ ಜಿಪಂ ಸಿಇಒ ಕವಿತಾ ಮನ್ನಿಕೇರಿ ಮಾತನಾಡಿ, ಈಗಾಗಲೇ ಏಜೆನ್ಸಿಗಳಿಗೆ ಸೂಚನೆ ನೀಡಲಾಗಿದೆ. ಒಂದು ವಾರದೊಳಗೆ ಆರ್‌ಒ ಪ್ಲಾಂಟ್ ಆರಂಭಿಸಬೇಕು. ಇಲ್ಲದಿದ್ದರೇ ಕಪ್ಪು ಪಟ್ಟಿಗೆ ಸೇರಿಸುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
MUST WATCH
ಹೊಸ ಸೇರ್ಪಡೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.