ರಾಜಣ್ಣ ವಿರುದ್ಧದ ಪ್ರತಿಭಟನೆ ಮುಂದೂಡಿಕೆ
ಜಿಲ್ಲಾ ಪಂಚಾಯಿತಿ ಸದಸ್ಯ ಕೆಂಚಮಾರಯ್ಯ ಹೇಳಿಕೆ ಪೊಲೀಸರಿಂದ ಅವಕಾಶ ನಿರಾಕರಣೆ
Team Udayavani, Jun 10, 2019, 4:02 PM IST
ತುಮಕೂರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿ.ಪಂ.ಸದಸ್ಯ ಕೆಂಚಮಾರಯ್ಯ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ, ನಾರಾಯಣಮೂರ್ತಿ ಇತರರು ಇದ್ದರು.
ತುಮಕೂರು: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿರುದ್ಧ ಪರಮೇಶ್ವರ್ ಅಭಿಮಾನಿ ಬಳಗದಿಂದ ಜೂ.12ರಂದು ಹಮ್ಮಿಕೊಂಡಿದ್ದ ಪ್ರತಿಭಟನೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿ.ಪಂ.ಸದಸ್ಯ ಕೆಂಚಮಾರಯ್ಯ ತಿಳಿಸಿದರು.
ಅವಕಾಶ ನಿರಾಕರಣೆ: ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಎಂ ಘನತೆಗೆ ಗೌರವ ಕೊಡದೆ, ನನ್ನ ವಿರುದ್ಧ ಧಿಕ್ಕಾರ ಕೂಗಿ ಯಾರಾದರೂ ಪ್ರತಿಭಟಿಸಿದರೆ ಅವರ ನಾಲಿಗೆ ಸೀಳುವುದಾಗಿ ಹೇಳಿದ್ದಕ್ಕೆ ಪ್ರತಿಭಟನೆಗೆ ಮುಂದಾಗಿದ್ದೆವು. ಕಾನೂನು ತೊಡಕಿನಿಂದ ಪ್ರತಿಭಟನೆಗೆ ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಪ್ರತಿಭಟನೆ ಮುಂದೂಡಲಾಗಿದೆ ಎಂದು ಹೇಳಿದರು.
ಹಿರಿಯರ ಸಲಹೆ: ಪ್ರತಿಭಟನೆಗೆ ಹತ್ತು ತಾಲೂಕುಗಳ ಮುಖಂಡರು ಉತ್ತಮ ಸ್ಪಂದನೆ ನೀಡಿದ್ದರು. ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿಷಾದ ವ್ಯಕ್ತಪಡಿಸಿದ ನಂತರ ಪ್ರತಿಭಟನೆಗೂ ಮುನ್ನ ಚಿಂತಿಸುವುದು ಒಳ್ಳೆಯದು, ಆತುರದ ತೀರ್ಮಾನ ಬೇಡ ಎಂಬ ಸಲಹೆ ಹಿರಿಯರು ನೀಡಿದ್ದಾರೆ. ವಿಷಾದದ ಬಗ್ಗೆ ಜಾತ್ಯತೀತವಾಗಿ, ಪಕ್ಷಾತೀತವಾಗಿ ಬೆಂಬಲ ಸೂಚಿಸಿರುವವರೊಂದಿಗೆ ಚರ್ಚಿಸಿ ಪ್ರತಿಭಟನೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಚರ್ಚಿಸಿ ತೀರ್ಮಾನ: ಡಿಸಿಎಂ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಸರ್ವಾಧಿಕಾರಿ ಧೋರಣೆ ವಿರುದ್ಧ ಪಕ್ಷಾತೀತವಾಗಿ ಹೋರಾಟ ರೂಪಿಸಲಾಗಿತ್ತು. ಯಾವುದೇ ಜಾತಿ ಅಥವಾ ಪಕ್ಷದ ವಿರುದ್ಧ ಅಲ್ಲ. ಪ್ರತಿಭಟನೆ ನಿಲ್ಲಿಸುವಂತೆ ಪಕ್ಷದ ಯಾವ ಮುಖಂಡರೂ ನಮಗೆ ಸೂಚಿಸಿಲ್ಲ. ಯಾವುದೇ ಒತ್ತಡಕ್ಕೆ ಮಣಿದು ಪ್ರತಿಭಟನೆ ನಿಲ್ಲಿಸುವುದಿಲ್ಲ. ವಿಷಾದದ ಬಗ್ಗೆ ಚರ್ಚಿಸುವುದು ಅವಶ್ಯಕವಾಗಿರುವುದರಿಂದ ಮುಂದೂಡಲಾಗಿದೆ ಎಂದು ತಿಳಿಸಿದರು.
ವಿಷಾದ ವ್ಯಕ್ತಪಡಿಸಿರುವುದರ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಇರಬಹುದು. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಕೆಂಚಮಾರಯ್ಯ ಉತ್ತರಿಸಿದರು.
ತಾಲೂಕು ಪ್ರವಾಸ: ಈ ವಿಚಾರದಲ್ಲಿ ದೊಡ್ಡವರು ರಾಜಿ ಸಂಧಾನ ಮಾಡಿಕೊಂಡರೂ ಒಪ್ಪಿಕೊಳ್ಳವುದಿಲ್ಲ, ಡಿಸಿಎಂಗೆ ಆಗಿರುವ ಅವಮಾನವನ್ನು ಸಮುದಾಯ ಮರೆಯುವುದಿಲ್ಲ. ಸಮುದಾಯದಲ್ಲಿ ಅರಿವು ಮೂಡಿಸಲು ಎಲ್ಲ ತಾಲೂಕುಗಳಲ್ಲಿಯೂ ಪ್ರವಾಸ ಮಾಡುತ್ತೇವೆ. ಎಲ್ಲರಲ್ಲೂ ವಿಶ್ವಾಸ ಮೂಡಿಸುತ್ತೇವೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಘಟನೆಯಿಂದ ಮಲಗಿದ್ದ ಸಮುದಾಯದಲ್ಲಿ ಎಚ್ಚರಿಕೆ ಮೂಡಿದ್ದು, ಸಮುದಾಯದ ಜಾಗೃತವಾಗಿದೆ. ನಮ್ಮಲ್ಲಿನ ತಪ್ಪು ಅರಿತುಕೊಂಡಿದ್ದೇವೆ. ಮುಂದೆ ವ್ಯವಸ್ಥಿತವಾಗಿ ಪ್ರತಿಭಟನೆ ರೂಪಿಸುವುದಾಗಿ ತಿಳಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣಮೂರ್ತಿ, ಯಾದವ ಸಂಘದ ಅಧ್ಯಕ್ಷ ಚಂದ್ರಶೇಖರ್ ಗೌಡ, ಮಾಜಿ ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ, ಮಾಜಿ ನಗರಸಭಾ ಸದಸ್ಯ ತರುಣೇಶ್, ಮುಖಂಡರಾದ ವಾಲೆಚಂದ್ರು, ಸೋಮಣ್ಣ, ಅತೀಕ್ ಅಹಮದ್, ಪುಟ್ಟರಾಜು, ನಿಂಗರಾಜು, ದಿನೇಶ್, ನರಸೀಯಪ್ಪ, ರೇವಣ್ಣ ಸಿದ್ದಪ್ಪ, ನಗರ ಪಾಲಿಕೆ ಸದಸ್ಯ ಮಹೇಶ್, ಗೋವಿಂದಗೌಡ ದೀಪು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.