ಆರಂಬೋಡಿ: ಸ್ವಚ್ಛಮೇವ ಜಯತೆ ಆಂದೋಲನದ ಯಶಸ್ಸಿಗೆ ಸಭೆ
Team Udayavani, Jun 11, 2019, 6:00 AM IST
ವೇಣೂರು: ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಸರಕಾರ ಜಾರಿಗೆ ತಂದಿರುವ ಸ್ವಚ್ಛಮೇವ ಜಯತೆ ಎಂಬ ವಿನೂತನ ಕಾರ್ಯಕ್ರಮ ಆಂದೋಲನದ ಯಶಸ್ವಿಗೆ ಆರಂಬೋಡಿ ಗ್ರಾ.ಪಂ.ನಲ್ಲಿ ಪೂರ್ವಭಾವಿ ಸಭೆ ಜರಗಿತು.
ಆರಂಬೋಡಿ ಗ್ರಾ.ಪಂ. ಅಧ್ಯಕ್ಷ ಪ್ರಭಾಕರ ಎಚ್. ಅವರು ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಪಿಡಿಒ ಗಣೇಶ್ ಶೆಟ್ಟಿ ಅವರು ಮಾಹಿತಿ ನೀಡಿ, ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ ಬಳಕೆ, ಶಾಲೆ ಮತ್ತು ಅಂಗನವಾಡಿ ಶೌಚಾಲಯ ಉಪಯೋಗ ಮಾಡಲು ವಿದ್ಯಾರ್ಥಿಗಳಲ್ಲಿ ಮತ್ತು ಶಿಕ್ಷಕರಲ್ಲಿ ಜಾಗೃತಿ ಮೂಡಿಸುವುದು. ಒಂದು ತಿಂಗಳ ಕಾಲ ಎಲ್ಲ ಹಂತದಲ್ಲೂ ಅರಿವು ಮೂಡಿಸಿ, ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡುವ ಮೂಲಕ ಗ್ರಾಮೀಣ ಜನರ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಜೂ.5ರಿಂದ 30ಸರಕಾರ ಜೂ.5ರಿಂದ ಜೂ.30ರವರೆಗೆ ಆಯೋಜಿಸಲು ಸೂಚಿಸಿರುವ ಈ ಆಂದೋಲನದಲ್ಲಿ ಹಲವು ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಗ್ರಾಮಸ್ಥರು ಕೈಜೋಡಿಸಬೇಕೆಂದರು.
ಪಂಚಾಯತ್ ಉಪಾಧ್ಯಕ್ಷೆ ಆಶಾ ಎಸ್. ಶೆಟ್ಟಿ, ಕಾರ್ಯದರ್ಶಿ ಸೋಮಶೇಖರ, ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.