ಕೊಲ್ಲೂರು ಶ್ರೀ ಮೂಕಾಂಬಿಕೆಯ ಜನ್ಮಾಷ್ಟಮಿ: ಶತಚಂಡಿಯಾಗ ಸಂಪನ್ನ
Team Udayavani, Jun 11, 2019, 6:00 AM IST
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಜನ್ಮಾಷ್ಟಮಿ ಪ್ರಯುಕ್ತ ಜೂ. 10ರಂದು ದೇಗುಲದಲ್ಲಿ ವಿಶೇಷ ಪೂಜೆ, ಲೋಕಕಲ್ಯಾಣಾರ್ಥ ಶತಚಂಡಿಯಾಗ ನಡೆಯಿತು.
ದೇಗುಲದ ಅರ್ಚಕರ ನೇತೃತ್ವದಲ್ಲಿ ಶ್ರೀದೇವಿಯ ಜನ್ಮಾಷ್ಟಮಿ ಪ್ರಯುಕ್ತ ದೇಗುಲದಲ್ಲಿ ಬೆಳಗ್ಗೆ ವಿಶೇಷ ಪೂಜೆ ನಡೆಯಿತು. ಅರ್ಚಕರ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡರು. ಶ್ರೀ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು ಶಕ್ತಿ ಸ್ವರೂಪಿಣಿಯಾದ ಮೂಕಾಂಬಿಕೆಗೆ ವಿನೂತನ ಮಾದರಿಯ ವಸ್ತ್ರಾಲಂಕಾರಗಳಿಂದ ಶೃಂಗರಿಸಲಾಗಿತ್ತು.
ಶತಚಂಡಿಯಾಗ ಪೂರ್ಣಾಹುತಿ
ಅರ್ಚಕರ ಪ್ರಾಯೋಜಕತ್ವದಲ್ಲಿ ನಡೆದ ಶ್ರೀದೇವಿಯ ಜನ್ಮಾಷ್ಟಮಿಯ ಶತಚಂಡಿಯಾಗದ ಪೂರ್ಣಾಹುತಿಯಲ್ಲಿ ಕಾರ್ಯನಿರ್ವಹಣಾಧಿಕಾರಿ ಎಚ್.ಹಾಲಪ್ಪ, ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ್ ಶೆಟ್ಟಿ, ಉಪ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸಮಿತಿ ಸದಸ್ಯರಾದ ರಮೇಶ್ ಗಾಣಿಗ, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ, ಅಭಿಲಾಷ್, ರಾಜೇಶ್ ಕಾರಂತ, ಅಂಬಿಕಾ ದೇವಾಡಿಗ, ಜಯಂತಿ ಪಡುಕೋಣೆ ಹಾಗೂ ಅರ್ಚಕರು ಉಪಸ್ಥಿತರಿದ್ದರು.
ಕೇರಳದ ನುರಿತ ತಂಡಗಳಿಂದ ಸ್ವರ್ಣಮುಖೀ ಸಭಾಭವನದಲ್ಲಿ ದಿನವಿಡೀ ಭರತನಾಟ್ಯಂ, ಕೂಚುಪುಡಿ, ಕಥಕ್ಕಳಿ ಸಹಿತ ಶಾಸ್ತ್ರೀಯ ಸಂಗೀತಾರಾಧನೆ ನಡೆಯಿತು.
ವರ್ಷದ ಕೊನೆಯ ರಥೋತ್ಸವ ಸಂಜೆ ಶ್ರೀ ದೇವಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ, ದೇಗುಲದ ಒಳಪೌಳಿಯಲ್ಲಿ ವರ್ಷದ ಕೊನೆಯ ರಥೋತ್ಸವದ ಕಾರ್ಯಕ್ರಮವು ನೆರೆದ ಭಕ್ತರ ಸಮ್ಮುಖದಲ್ಲಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
MUST WATCH
ಹೊಸ ಸೇರ್ಪಡೆ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.