ಪ್ರಾಕೃತಿಕ ವಿಕೋಪದ ಸಂಕಷ್ಟ ಪರಿಸ್ಥಿತಿಯಲ್ಲೂ ಶೈಕ್ಷಣಿಕ ಸಾಧನೆ ಶ್ಲಾಘನೀಯ: ಕೆಂಚಪ್ಪ
ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Team Udayavani, Jun 11, 2019, 6:00 AM IST
ಮಡಿಕೇರಿ: ಪ್ರಾಕೃತಿಕ ವಿಕೋಪದಿಂದ ಕೊಡಗು ಜಿಲ್ಲೆಯಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದರೂ, ಈ ಬಾರಿ ವಿದ್ಯಾರ್ಥಿಗಳು ಶೈಕ್ಷಣಿಕ ಗುರಿಯನ್ನು ಸಾಧಿಸಿ ಉತ್ತಮ ಫಲಿತಾಂಶವನ್ನು ದಾಖಲಿಸಿರುವುದು ಶ್ಲಾಘನೀಯವೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೆಂಚಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ವತಿಯಿಂದ ನಗರದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿಭಾಗವಾರು ಶೇ. 100 ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪುರಸ್ಕಾರ ಹಾಗೂ ನಿವೃತ್ತ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಯಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ನಂತರದ ದಿನಗಳಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಕೊಡಗು ಜಿಲ್ಲೆ ಮೂರನೇ ಸ್ಥಾನವನ್ನು ಉಳಿಸಿಕೊಂಡಿರುವುದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು, ಶಿಕ್ಷಕರು ಯಾವುದೇ ಬೇಧಭಾವವಿಲ್ಲದೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದರು.
ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಕೆ.ಎಂ. ಭವಾನಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು, ಸ್ಪರ್ಧಾತ್ಮ ಪರೀಕ್ಷೆಗಳಲ್ಲಿ ಭಾಗವಹಿಸಿ ಸಮಾಜಕ್ಕೆ ಉತ್ತಮ ಮಾರ್ಗದರ್ಶಕರಾಗಬೇಕು ಎಂದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆಯನ್ನು ಮಾಡಬೇಕು ಎಂದ ಅವರು, ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದ ಜೊತೆಗೆ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಮುನ್ನುಗ್ಗಬೇಕು ಎಂದು ಸಲಹೆ ನೀಡಿದರು.
ಸಂತ ಜೋಸೆಫರ ಪ.ಪೂ. ಕಾಲೇಜು ಪ್ರಾಂಶುಪಾಲರಾದ ಸಿಸ್ಟರ್ ಶೋಭಾ ಮಾತನಾಡಿ, ಜೀವನದಲ್ಲಿ ಪ್ರಯತ್ನದ ಜೊತೆಗೆ ಒಂದು ಗುರಿಯನ್ನು ಹೊಂದಿದಾಗ ಮಾತ್ರ ಸಾಧನೆಯ ಮೆಟ್ಟಿಲೇರಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಭಾ ಕಾರ್ಯಕ್ರಮದ ಅನಂತರ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳನ್ನು ಹಾಗೂ ವಿಭಾಗವಾರು ಶೇ. 100 ರಷ್ಟು ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿರನ್ನು ಸನ್ಮಾನಿಸಿ ಗೌರವಿಸಲಾಯಿತು. ನಿವೃತ ಶಿಕ್ಷಕ ಎಚ್.ಕೆ. ದೇವರಾಜ್ ಅವರನ್ನು ಗೌರವಿಸಲಾಯಿತು.
ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್ ವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಕಾರ್ಯಧ್ಯಕ್ಷ ಟಿ.ಹೇಮಂತ್‌ಕುಮಾರ್, ಪ್ರಧಾನ ಕಾರ್ಯದರ್ಶಿನಾಗರಾಜ್, ಖಜಾಂಚಿ ಹೆಚ್.ಆರ್.ಸರ್ವೋತ್ತಮ್ ವಿರಾಜಪೇಟೆ ಪ್ರಧಾನ ಕಾರ್ಯದರ್ಶಿ ವಿವೇಕ್ ಸೇರಿದಂತೆ ಮೂರು ತಾಲೂಕುಗಳ ಅಧ್ಯಕ್ಷರು, ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಪೈಪೋಟಿ ಶ್ಲಾಘನೀಯಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅಧಿಕ ಅಂಕ ಪಡೆದಿಯುವ ಮೂಲಕ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವುದು ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ಸ್ಪರ್ಧೆ ಗಳು ಹೆಚ್ಚಿದ್ದು, ವಿದ್ಯಾರ್ಥಿಗಳು ಅವುಗಳಿಗೆ ಹೊಂದಿಕೊಂಡು ಬೆಳೆಯಬೇಕಾಗಿದೆ. ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಕರ ಹುದ್ದೆ ಖಾಲಿ ಇದ್ದು, ಸರ್ಕಾರ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಇದೇ ಸಂದರ್ಭ ಕೆಂಚಪ್ಪ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.