ಭೂಸ್ವಾಧೀನ ವಿರುದ್ಧ ರೈತರ ಪ್ರತಿಭಟನೆ
|ಸುವರ್ಣ ವಿಧಾನ ಸೌಧ ಎದುರು ಧರಣಿ |ರೈತರನ್ನು ವಶಕ್ಕೆ ಪಡೆದು ಬಿಡುಗಡೆ |ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
Team Udayavani, Jun 11, 2019, 7:31 AM IST
ರಾಮದುರ್ಗ: ಭೂಸ್ವಾಧೀನ ಕಾಯ್ದೆ ರದ್ದತಿಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಘಕದಿಂದ ತಾಲೂಕಿನ ಚಂದರಗಿಯಲ್ಲಿ ಬಾಗಲಕೋಟೆ-ಬೆಳಗಾವಿ ರಾಜ್ಯ ರಸ್ತೆ ತಡೆ ನಡೆಸಿದರು.
ಬೆಳಗಾವಿ: ಫಲವತ್ತಾದ ಜಮೀನು ಕಬಳಿಸಿಕೊಂಡು ರೈತರನ್ನು ಸರ್ಕಾರ ಬೀದಿ ಪಾಲು ಮಾಡುತ್ತಿದೆ ಎಂದು ಆರೋಪಿಸಿ ನಗರ ಸೇರಿದಂತೆ ಸುತ್ತಲಿನ ಹಳ್ಳಿಗಳ ರೈತರು ಸೋಮವಾರ ಇಲ್ಲಿಯ ಸುವರ್ಣ ವಿಧಾನಸೌಧ ಎದುರು ಪ್ರತಿಭಟನೆ ನಡೆಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.
ಸುವರ್ಣ ವಿಧಾನಸೌಧ ಎದುರು ಜಮಾಯಿಸಿದ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಫಲವತ್ತಾದ ಜಮೀನಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಇದರಿಂದ ರೈತರು ಜಮೀನು ಕಳೆದುಕೊಂಡು ಬೀದಿ ಪಾಲಾಗುತ್ತಾರೆ. ಹೀಗಾಗಿ ಹಲಗಾ-ಮಚ್ಛೆ ಬೈಪಾಸ್ ರಸ್ತೆ ಹಾಗೂ ಹಲಗಾದಲ್ಲಿ ಜಲ ಶುದ್ಧೀಕರಣ ಘಟಕ ನಿರ್ಮಾಣಕ್ಕಾಗಿ ಜಮೀನು ಸ್ವಾಧೀನ ವಿರೋಧಿಸಿ ಪ್ರತಿಭಟನೆ ನಡೆಸಿದರು.
ಈಗಾಗಲೇ ಸುವರ್ಣ ವಿಧಾನಸೌಧ ನಿರ್ಮಾಣಕ್ಕೆ ರೈತರು ಜಮೀನು ನೀಡಿದ್ದಾರೆ. ಈಗ ಮತ್ತೆ ಬೈಪಾಸ್ ರಸ್ತೆ, ಜಲ ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಭೂಮಿ ಕಬಳಿಸಲಾಗುತ್ತಿದೆ. ಫಲವತ್ತಾದ ಜಮೀನು ಹೊಂದಿರುವ ಇಲ್ಲಿ ವರ್ಷಕ್ಕೆ 3-4 ಬೆಳೆ ತೆಗೆಯಲಾಗುತ್ತಿದೆ. ಇಂಥ ಜಮೀನು ಹೋದರೆ ಮುಂದೆ ರೈತರು ಏನು ಮಾಡುವುದು ಎಂದು ಪ್ರಶ್ನಿಸಿದರು.
ಹಲಗಾ, ಬೆಳಗಾವಿ ನಗರದ ವಡಗಾಂವಿ, ರೈತ ಗಲ್ಲಿ, ಶಹಾಪುರ, ಖಾಸಬಾಗ ಸೇರಿದಂತೆ ಸುತ್ತಲಿನ ಪ್ರದೇಶಗಳ ರೈತರ ಜಮೀನು ಅಭಿವೃದ್ಧಿ ಕಾರ್ಯಕ್ಕಾಗಿ ಹೋಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಕೃಷಿ ಜಮೀನು ಸಂಪೂರ್ಣ ನಾಶವಾಗುವ ಲಕ್ಷಣಗಳು ಕಂಡು ಬರುತ್ತಿದೆ. ಕೂಡಲೇ ಸರ್ಕಾರ ಫಲವತ್ತಾದ ಜಮೀನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ರದ್ದು ಪಡಿಸಬೇಕು. ರೈತರಿಗೆ ಕೃಷಿ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಜಿಪಂ ಸದಸ್ಯೆ ಮಾಧುರಿ ಹೆಗಡೆ, ರೈತ ಗಲ್ಲಿಯ ರೈತ ಸಂಘದ ಅಧ್ಯಕ್ಷ ರಾಜು ಮರವೆ, ಉಪಾಧ್ಯಕ್ಷ ಗಂಗಾಧರ ಬಿರ್ಜೆ, ವಡಗಾಂವಿಯ ರೈತ ಸಂಘದ ಪದಾಧಿಕಾರಿ ರಮಾಕಾಂತ ಬಾಳೇಕುಂದ್ರಿ, ಹಣಮಂತ ಬಾಳೇಕುಂದ್ರಿ, ಮುಖಂಡರಾದ ಸುಜೀತ ಮುಳಗುಂದ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.