ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿ
Team Udayavani, Jun 11, 2019, 2:07 PM IST
ಮುಂಡರಗಿ: ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವಂತೆ ಆಗ್ರಹಿಸಿ ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆಯಿಂದ ತಾಪಂ ಕಾರ್ಯಾಲಯ ಆವರಣದಲ್ಲಿ ಬಿಇಒ ಎಸ್.ಎನ್. ಹಳ್ಳಿಗುಡಿಯವರಿಗೆ ಮನವಿ ಸಲ್ಲಿಸಲಾಯಿತು.
ಮುಂಡರಗಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಎರಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಬೇಕು ಎಂದು ಆಗ್ರಹಿಸಿ ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆಯಿಂದ ತಾಪಂ ಆವರಣದಲ್ಲಿ ಬಿಇಒ ಎಸ್.ಎನ್. ಹಳ್ಳಿಗುಡಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್. ಗೌಡರ, ಶೈಕ್ಷಣಿಕವಾಗಿ ಹಿಂದುಳಿದರುವ ತಾಲೂಕಿನ ಮುಂಡರಗಿ ಹೋಬಳಿಯಲ್ಲಿ ಸರಕಾರವು ಆಂಗ್ಲ ಮಾಧ್ಯಮ ಶಾಲೆಯನ್ನು ತೆರೆಯದೇ ಅನ್ಯಾಯ ಮಾಡಲಾಗುತ್ತಿದೆ. ಈ ಕೊಡಲೇ ಮುಂಡರಗಿ ಪಟ್ಟಣ ಮತ್ತು ಹೋಬಳಿಯ ಯಾವುದೇ ಸ್ಥಳದಲ್ಲಿ ಆಂಗ್ಲ ಮಾಧ್ಯಮ ಶಾಲೆ ತೆರೆಯುವ ಮೂಲಕ ತಾಲೂಕಿಗೆ ನ್ಯಾಯ ಒದಗಿಸಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು. ಸರಕಾರಿ ಶಾಲೆಯಲ್ಲಿ ಎಂಟನೆಯ ತರಗತಿ ಪಾಸು ಮಾಡಿದ ವಿದ್ಯಾರ್ಥಿಗಳಿಗೆ ಒಂಬತ್ತನೇಯ ತರಗತಿಗೆ ಪಟ್ಟಣದ ಪ್ರೌಢಶಾಲೆಗಳಲ್ಲಿ ಅವಕಾಶ ಕಲ್ಪಿಸಿ ಕೊಡಬೇಕು. ಮುಂಡರಗಿ ಪಟ್ಟಣದಲ್ಲಿ ಎರಡು ಸರಕಾರಿ ಪ್ರೌಢಶಾಲೆ ತೆರೆಯಬೇಕು ಎಂದರು.
ಮನವಿಗೆ ಸ್ಪಂದಿಸಿದ ಬಿಇಒ ಎಸ್.ಎನ್. ಹಳ್ಳಿಗುಡಿ, ಸರಕಾರಿ ಆಂಗ್ಲ ಮಾಧ್ಯಮ ಶಾಲೆ ತೆರೆಯಲು ಪ್ರಸ್ತಾವನೆ ಕಳುಹಿಸಿಕೊಡಲಾಗಿದೆ. ಪಟ್ಟಣದಲ್ಲಿ ಸರಕಾರಿ ಪ್ರೌಢಶಾಲೆ ತೆರೆಯಲು ಕೂಡಾ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು.
ತಾಪಂ ಇಒ ಎಸ್.ಎಸ್. ಕಲ್ಮನಿ ಇದ್ದರು. ವಿ.ಎಸ್. ಘಟ್ಟಿ, ದ್ರುವ ಹೂಗಾರ, ನಿಂಗಪ್ಪ ಕುಂಬಾರ, ಸುರೇಶ ಮಾಳೆಕೊಪ್ಪ, ಮಂಜುನಾಥ ಮುಧೋಳ, ದೇವಪ್ಪ ಇಟಗಿ, ಮೌಲಾಸಾಬ ಬಾಗವಾನ್, ದುರಗಪ್ಪ ಮೋರನಾಳ, ಸುರೇಶ ಹಲವಾಗಲಿ ಮತ್ತಿತರರು ಮನವಿ ಸಲ್ಲಿಸುವ ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.