ಬಾಹ್ಯಾಕಾಶ ಸಮರ ಹೋರಾಡಲು ರಕ್ಷಣಾ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಸ್ಥಾಪನೆ
Team Udayavani, Jun 11, 2019, 7:24 PM IST
ಹೊಸದಿಲ್ಲಿ : ಬಾಹ್ಯಾಕಾಶ ಸಮರದಲ್ಲಿ ಹೋರಾಡುವ ದೇಶದ ಸಶಸ್ತ್ರ ಪಡೆಗಳ ಸಾಮರ್ಥ್ಯ ವರ್ಧನೆಗಾಗಿ ಹೊಸ ಸಂಸ್ಥೆಯೊಂದನ್ನು ಸ್ಥಾಪಿಸುವ ಪ್ರಸ್ತಾವಕ್ಕೆ ಸರಕಾರ ಅನುಮೋದನೆ ನೀಡಿದೆ.
ರಕ್ಷಣಾ ಬಾಹ್ಯಾಕಾಶ ಸಂಶೋಧನೆ (DSRO) ಎಂದು ಕರೆಯಲ್ಪಡುವ ಈ ನೂತನ ಸಂಸ್ಥೆಯನ್ನು ಸ್ಥಾಪಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಭದ್ರತಾ ಕ್ಯಾಬಿನೆಟ್ ಸಮಿತಿಯು ಅನುಮೋದನೆ ನೀಡಿದೆ.
ಅಂತೆಯೇ ದೇಶದ ಶಸ್ತ್ರಾಸ್ತ್ರ ಪಡೆಗಳಿಗೆ ಬಾಹ್ಯಾಕಾಶ ಸಮರದಲ್ಲಿ ಶಕ್ತಿಯುತವಾಗಿ ಹೋರಾಡಲು ಅವಶ್ಯವಿರುವ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಮತ್ತು ತಂತ್ರಜ್ಞಾನವನ್ನು DSRO ರೂಪಿಸಲಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ಹೇಳಿರುವುದನ್ನು ಎಎನ್‌ಐ ವರದಿ ಮಾಡಿದೆ.
DSRO ಸ್ಥಾಪಿಸುವ ಆಲೋಚನೆಯು ಜಂಟಿ ಕಾರ್ಯದರ್ಶಿ ಮಟ್ಟದ ವಿಜ್ಞಾನಿಗಳಲ್ಲಿ ಕೆಲ ಸಮಯದ ಹಿಂದೆಯೇ ಚಿಗುರೊಡೆದಿತ್ತು. ಇದೀಗ ಅಂತಿಮವಾಗಿ ಅದನ್ನು ಸಾಕಾರಗೊಳಿಸಲಾಗುತ್ತಿದೆ. DSRO ಗೆ ಈ ನಿಟ್ಟಿನಲ್ಲಿ ವಿಜ್ಞಾನಿಗಳ ತಂಡವೊಂದನ್ನು ಒದಗಿಸಲಾಗುವುದು. ಈ ತಂಡವು ದೇಶದ ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ನಿಕಟವಾಗಿ ಕೆಲಸ ಮಾಡಲಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.