ಮರಗಳ ಹನನ: ಗಂಧದಗುಡಿ ಫೌಂಡೇಶನ್‌ನಿಂದ ಧರಣಿ
Team Udayavani, Jun 12, 2019, 3:00 AM IST
ಮೈಸೂರು: ಕೊಡಗಿನಲ್ಲಿ ರೆಸಾರ್ಟ್ ನಿರ್ಮಾಣ ಮಾಡಲು 800 ಮರಗಳನ್ನು ಕಡಿದಿರುವುದನ್ನು ವಿರೋಧಿಸಿ ಗಂಧದಗುಡಿ ಫೌಂಡೇಷನ್ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಜಮಾವಣೆಗೊಂಡ ಗಂಧದಗುಡಿ ಫೌಂಡೇಷನ್ ಸ್ವಯಂ ಸೇವಕರು ಪರಿಸರ, ಅರಣ್ಯ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ, ಕೊಡಗಿನಲ್ಲಿ ಆಂಧ್ರ ಮೂಲದ ಉದ್ಯಮಿಯೊಬ್ಬರು ರೆಸಾರ್ಟ್ ನಿರ್ಮಾಣ ಮಾಡುವ ಸಲುವಾಗಿ 800 ಮರಗಳನ್ನು ಕಡಿದಿದ್ದಾರೆ ಎಂದು ಆರೋಪಿಸಿ ಉದ್ಯಮಿ, ಕೊಡಗು ಜಿಲ್ಲಾಡಳಿ ಹಾಗೂ ಅರಣ್ಯ ಇಲಾಖೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮರಗಳನ್ನು ಕಡಿದಿರುವುದರಿಂದ ಅರಣ್ಯಕ್ಕೆ ಕುತ್ತುಂಟಾಗಿದ್ದು, ಅಲ್ಲಿ ವಾಸಿಸುವ ಪ್ರಾಣಿ, ಪಕ್ಷಿಗಳು ಜೀವಿಸಲು ತೊಂದರೆಯಾಗಿದೆ. ಉದ್ಯಮಿ ಮರಗಳನ್ನು ಕಡಿದಿರುವ ಸ್ಥಳದಲ್ಲಿ ಹಸಿರು ನ್ಯಾಯಾಧಿಕರಣದ ಆದೇಶದ ಪ್ರಕಾರ ಸಸಿಗಳನ್ನು ನೆಡಬೇಕು ಎಂದು ಫೌಂಡೇಷನ್‌ನ ಸದಾ ಅರಸ್ ಒತ್ತಾಯಿಸಿದರು.
ಕಳೆದ ಬಾರಿ ಕೊಡಗಿನಲ್ಲಿ ಭೂಕುಸಿತ ಮತ್ತು ಅತಿ ಹೆಚ್ಚು ಮಳೆ ಸುರಿದು ಸಾಕಷ್ಟು ಹಾನಿಯಾಗಿದೆ. ಹೀಗಿದ್ದರೂ ಅಲ್ಲಿನ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳದೇ, ಅರಣ್ಯವನ್ನು ಕಡಿದು ರೆಸಾರ್ಟ್ ನಿರ್ಮಿಸಲು ಅನುಮತಿ ನೀಡಿರುವುದು ಕಾನೂನು ಉಲ್ಲಂಘನೆಯಾಗಿದೆ.
ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ಮತ್ತೆ ಆ ಸ್ಥಳದಲ್ಲಿ ಸಸಿ ನೆಡುವ ಮೂಲಕ ಅರಣ್ಯ ನಾಶವನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮೋಹನ್ ಕುಮಾರ್, ಮನೋಹರ್, ವಿಜಯ್‌ಗೌಡ, ಮಹೇಶ್, ಶ್ರೀನಿವಾಸ್, ರಂಜಿತ್, ಯಶ್ವಂತ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.