ಬುಲ್‌ಟ್ರಾಲ್, ಬೆಳಕು ಮೀನುಗಾರಿಕೆ ನಿಷೇಧ ಜಾರಿಗೆ ತರಲು ಆಗ್ರಹ
Team Udayavani, Jun 12, 2019, 6:10 AM IST
ಮಲ್ಪೆ: ಮೀನುಗಾರಿಕೆಯ ಭವಿಷ್ಯದ ಹಿತದೃಷ್ಟಿಯಿಂದ ಕೇಂದ್ರ, ರಾಜ್ಯ ಸರಕಾರ ಬುಲ್‌ಟ್ರಾಲ್ ಮತ್ತು ಬೆಳಕು ಮೀನುಗಾರಿಕೆ ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಿದ್ದು, ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಲ್ಪೆಯ ಬೇಸಗೆ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದಿಂದ ಸೋಮವಾರ ಮನವಿ ಸಲ್ಲಿಸಲಾಯಿತು.
ಹೈಕೋರ್ಟ್ ಲೈಟ್ ಫಿಶಿಂಗ್ ನಿಷೇಧಿಸಿ ತೀರ್ಪು ನೀಡಿದ್ದರೂ ಸಾರಾಸಗಟಾಗಿ ಉಲ್ಲಂಘಿಸಿ ಬಂದರು ವ್ಯಾಪ್ತಿಯಲ್ಲಿ ಲೈಟ್‌ಫಿಶಿಂಗ್, ಬುಲ್‌ಟ್ರಾಲ್ ಮೀನುಗಾರಿಕೆ ನಡೆಯುತ್ತಿದೆ. ಇದರಿಂದ ತೊಂದರೆಯಾಗುತ್ತಿದೆ.
ಮಂಗಳೂರಿನಿಂದ ಬೈಂದೂರು ತನಕ ಸಮುದ್ರ ತೀರಪ್ರದೇಶದಲ್ಲಿ ಬದಿಗೆ ಬಂದ ಮೀನನ್ನು ಹಿಡಿದು ಜೀವನ ಸಾಗಿಸುವ ನಾಡದೋಣಿ ಮೀನುಗಾರಿಗೆ ಸಮಸ್ಯೆಯಾಗುತ್ತಿದ್ದು, ತೀರ ಪ್ರದೇಶದಲ್ಲಿ ಕೈರಂಪಣಿ, ಕಂತಲೆ, ಟ್ಯೂಬನ್ನು ಹಿಡಿದು ಈಜಿ ಬಲೆ ಹಾಕಿ ಮೀನು ಹಿಡಿಯುವವರಿಗೆ ಹೊಟ್ಟೆ ಹೊರೆಯಲು ಮೀನು ಸಿಗದಂತಾಗಿದ್ದು ಸರಕಾರ, ನ್ಯಾಯಾಲಯದ ಆದೇಶ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸಂಘದ ಅಧ್ಯಕ್ಷ ಚಂದ್ರಕಾಂತ ಕರ್ಕೇರ, ಕಾರ್ಯದರ್ಶಿ ರತ್ನಾಕರ ಮೆಂಡನ್, ಲಕ್ಷ್ಮೀನಾರಾಯಣ ಕೋಟ್ಯಾನ್, ಪ್ರವೀಣ್ ಶ್ರೀಯಾನ್, ರಾಜೇಶ್ ಕೋಟ್ಯಾನ್, ಹರೀಶ್ ತಿಂಗಳಾಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.