ಪ್ರಧಾನಿ, ಗೃಹ ಸಚಿವರ ಭೇಟಿಯಾದ ಗೌರ್ನರ್
Team Udayavani, Jun 12, 2019, 3:00 AM IST
ನವದೆಹಲಿ: ಕರ್ನಾಟಕದ ರಾಜ್ಯಪಾಲ ವಜುಭಾಯ್ ವಾಲಾ ನವದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್ನ ಮೈತ್ರಿ ಸರ್ಕಾರ ಬಿಕ್ಕಟ್ಟಿನ ಸ್ಥಿತಿ ಎದುರಿಸುತ್ತಿರುವಾಗಲೇ ರಾಜ್ಯಪಾಲರ ಈ ಭೇಟಿ ಮಹತ್ವ ಪಡೆದಿದೆ. ಪ್ರಧಾನಿ ಮೋದಿಯವರ ಕಾರ್ಯಾಲಯವು ಕರ್ನಾಟಕ ರಾಜ್ಯಪಾಲರು ಭೇಟಿ ಮಾಡಿದ ಫೋಟೋ ಟ್ವೀಟ್ ಮಾಡಿದೆ.
ಮತ್ತೂಂದೆಡೆ ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್, ಗುಜರಾತ್ ರಾಜ್ಯಪಾಲ ಓಂ ಪ್ರಕಾಶ್ ಕೋಲಿ, ಉತ್ತರಾಖಂಡ ರಾಜ್ಯಪಾಲ ಬೇಬಿರಾಣಿ ಮೌರ್ಯ ಪ್ರಧಾನಿ ಮೋದಿ, ಗೃಹ ಸಚಿವ ಶಾರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಜತೆಗೆ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳ ಜತೆಗೂ ರಾಜ್ಯಪಾಲರು ಮಾತನಾಡಿದ್ದಾರೆ. ಆಯಾ ರಾಜ್ಯಗಳಲ್ಲಿರುವ ವಿಚಾರಗಳ ಬಗ್ಗೆ ಗೃಹ ಸಚಿವರು ಮಾತುಕತೆ ನಡೆಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.