ಕಾಲೇಜು ಸ್ಥಳಾಂತರ: ವಿದ್ಯಾರ್ಥಿಗಳ ಪ್ರತಿಭಟನೆ
•ಸಾಧನಕೇರಿಯಿಂದ ಮುಗದ ಗ್ರಾಮಕ್ಕೆ ಪಿಯು ಕಾಲೇಜು ಶಿಫ್ಟ್•ಡಿಡಿಪಿಯು ಕಚೇರಿ ಎದುರು ಹೋರಾಟ
Team Udayavani, Jun 12, 2019, 9:01 AM IST
•ಸಾಧನಕೇರಿಯಿಂದ ಮುಗದ ಗ್ರಾಮಕ್ಕೆ ಪಿಯು ಕಾಲೇಜು ಶಿಫ್ಟ್•ಡಿಡಿಪಿಯು ಕಚೇರಿ ಎದುರು ಹೋರಾಟ
ಧಾರವಾಡ: ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಕಾಲೇಜು ಸ್ಥಳಾಂತರ ಮಾಡಿರುವ ಕ್ರಮ ಖಂಡಿಸಿ ನಗರದ ಡಿಡಿಪಿಯು ಕಚೇರಿ ಎದುರು ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಸರ್ವೋದಯ ಶಿಕ್ಷಣ ಟ್ರಸ್ಟ್ ಅಡಿಯಲ್ಲಿ ಸಾಧನಕೇರಿಯಲ್ಲಿ ನಡೆದಿರುವ ಆಲೂರು ವೆಂಕಟರಾವ್ ಸ್ಮಾರಕ ಪಿಯು ಕಾಲೇಜನ್ನು ಮುಗದ ಗ್ರಾಮಕ್ಕೆ ಸ್ಥಳಾಂತರ ಮಾಡಿರುವುದು ಖಂಡನೀಯ. ಮುಗದ ಗ್ರಾಮದ ಹನುಮಂತಪ್ಪ ಮಾವಳೇರ ಪ್ರೌಢಶಾಲೆ ಆವರಣಕ್ಕೆ ಸ್ಥಳಾಂತರ ಮಾಡುವಂತೆ ಸರ್ಕಾರ ಕೆಲ ದಿನಗಳ ಹಿಂದೆ ಆದೇಶ ಹೊರಡಿಸಿದೆ. ಆದರೆ ಮುಗದ ಗ್ರಾಮಕ್ಕೆ ತೆರಳಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಮುಖ್ಯ ರಸ್ತೆಯಿಂದ 3 ಕಿಮೀ ನಡೆದು ತೆರಳುವ ಪರಿಸ್ಥಿತಿ ಎದುರಾಗಿದ್ದು, ಹೀಗಾಗಿ ಈಗ ಸಾಧನಕೇರಿಯಲ್ಲಿ ಇರುವ ಸ್ಥಳದಲ್ಲೇ ಕಾಲೇಜು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಶಾಲೆ ಪ್ರಾಚಾರ್ಯರು ಪಿಯು ದ್ವಿತೀಯ ವರ್ಷದ ಪ್ರವೇಶ ಪಡೆಯುವ ಪೂರ್ವದಲ್ಲೇ ನೀಡಬೇಕಾದ ನೋಟಿಸ್ ಕೆಲ ದಿನಗಳ ಹಿಂದಷ್ಟೇ ನೀಡಿದ್ದಾರೆ. ಸದ್ಯ ಪ್ರವೇಶಾತಿ ಪ್ರಕ್ರಿಯೆ ಮುಗಿದ ಕಾರಣ ವಿದ್ಯಾರ್ಥಿಗಳು ಬೇರೆ ಕಾಲೇಜುಗಳಲ್ಲೂ ಪ್ರವೇಶ ಪಡೆಯದೆ ಪರದಾಡುವಂತಾಗಿದೆ. ನಗರದಿಂದ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುವ ಕಾರಣಕ್ಕೆ ಕೂಡಲೇ ಸಾಧನಕೇರಿಯಲ್ಲೇ ಕಾಲೇಜು ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಡಿಡಿಪಿಯು ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.