ಸಮುದಾಯ ಭವನ ಕಟ್ಟಡ ಪೂರ್ಣಗೊಳಿಸಿ

ಅಧಿಕಾರಿಗಳು-ಜನಪ್ರತಿನಿಧಿಗಳ ನಿರ್ಲಕ್ಷ್ಯ ••ಹಲವು ವರ್ಷದಿಂದ ನನೆಗುದಿಗೆ ಬಿದ್ದ ಕಾಮಗಾರಿ

Team Udayavani, Jun 12, 2019, 11:05 AM IST

10

ದೇವದುರ್ಗ: ಯಲ್ಲಾಲಿಂಗ ಕಾಲೋನಿಯಲ್ಲಿ ಅರ್ಧಕ್ಕೆ ನಿಂತ ಬಂಜಾರ ಭವನ.

ದೇವದುರ್ಗ: ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ತಾಲೂಕಿನಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನ ಕಟ್ಟಡ ಕಾಮಗಾರಿಗಳು ಹಲವು ವರ್ಷದಿಂದ ನನೆಗುದಿಗೆ ಬಿದ್ದಿದ್ದು, ಕೋಟ್ಯಂತರ ರೂ. ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಇದಕ್ಕೆ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬರುತ್ತಿದೆ.

ತಾಲೂಕಿನ ಜಾಲಹಳ್ಳಿ ಪಟ್ಟಣದ ವಾಲ್ಮೀಕಿ, ಪಟ್ಟಣದ ಬಂಜಾರ ಸಮುದಾಯ ಭವನಗಳು ಇದಕ್ಕೆ ಸಾಕ್ಷಿಯಾಗಿವೆ. 2011-12ನೇ ಸಾಲಿನ ಎಸ್‌ಟಿಪಿ ಗಿರಿಜನ ಕಲ್ಯಾಣ ಉಪಯೋಜನೆಯಡಿ 1ಕೋಟಿ ರೂ. ವೆಚ್ಚದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿತ್ತು. ನಿರ್ಮಿತಿ ಕೇಂದ್ರಕ್ಕೆ ಕಾಮಗಾರಿ ನಿರ್ವಹಣೆ ಹೊಣೆ ವಹಿಸಲಾಗಿತ್ತು. 8 ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಜಾಲಹಳ್ಳಿ ಗ್ರಾಮದಲ್ಲಿ ನಾಯಕ ಸಮುದಾಯದ ಜನರೇ ಹೆಚ್ಚಾಗಿದ್ದಾರೆ. ಮಾಜಿ ಸಂಸದ ಬಿ.ವಿ.ನಾಯಕ, ಸ್ಥಳೀಯ ಶಾಸಕ ಕೆ.ಶಿವನಗೌಡ ನಾಯಕ ಕೂಡ ಅದೇಶ ಸಮುದಾಯಕ್ಕೆ ಸೇರಿದ್ದಾರೆ. ಆದರೆ ಸಮುದಾಯ ಭವನ ಪೂರ್ಣಕ್ಕೆ ನಿರ್ಲಕ್ಷ್ಯ ವಹಿಸಿರುವುದು ಸಮುದಾಯದ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಸಮುದಾಯ ಭವನ ಪೂರ್ಣವಾಗದ್ದಕ್ಕೆ ಜಾಲಹಳ್ಳಿ ಪಟ್ಟಣದ ನಾಯಕ ಸಮುದಾಯದ ಜನರು ಸಭೆ, ಸಮಾರಂಭಗಳಿಗೆ ಖಾಸಗಿ ಕಲ್ಯಾಣ ಮಂಟಪಗಳ ಮೊರೆ ಹೋಗುವಂತಾಗಿದೆ. ಪಟ್ಟಣದ ಹೊರವಲಯದ ಯಲ್ಲಾಲಿಂಗ ಕಾಲೋನಿ ಹೆಮ್ಮಡಗಿ ಮಠದ ಪಕ್ಕದಲ್ಲಿ 1 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಬಂಜಾರ ಸಮುದಾಯ ಭವನ ಕಾಮಗಾರಿ ಆರೇಳು ತಿಂಗಳಿನಿಂದ ಸ್ಥಗಿತಗೊಂಡಿದೆ. ಕಾಮಗಾರಿ ಆರಂಭಿಸಲು ಸಮುದಾಯದ ಮುಖಂಡರು ನಿಗಮದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಕೆಲ ಸಮಸ್ಯೆ ಕಾರಣದಿಂದ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎನ್ನಲಾಗುತ್ತಿದೆ. ಅಪೂರ್ಣ ಸ್ಥಿತಿಯಲ್ಲಿರುವ ವಾಲ್ಮೀಕಿ, ಬಂಜಾರ ಸಮುದಾಯ ಭವನ ಕಾಮಗಾರಿಯನ್ನು ಪುನಾರಂಭಿಸಿ ಕೂಡಲೇ ಪೂರ್ಣಗೊಳಿಸಬೇಕೆಂದು ನರಸಣ್ಣ ನಾಯಕ ಜಾಲಹಳ್ಳಿ ಆಗ್ರಹಿಸಿದ್ದಾರೆ.

ಎಸ್‌ಟಿ ಮೀಸಲಾತಿಯಿಂದ ಸಂಸದ, ಶಾಸಕರು ಆಯ್ಕೆಯಾದರೂ ಸಮಾಜದ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲದಾಗಿದೆ. ಸುಮಾರು ವರ್ಷಗಳಿಂದ ಜಾಲಹಳ್ಳಿಯಲ್ಲಿ ವಾಲ್ಮೀಕಿ ಭವನ ಕಾಮಗಾರಿ ನನೆಗುದಿಗೆ ಬೀಳಲು ಜನಪತ್ರಿನಿಧಿಗಳೇ ಮೂಲ ಕಾರಣ.
•ಮಾನಸಯ್ಯ,
ಮಾನಸಯ್ಯದೊಡ್ಡಿ ವಾಲ್ಮೀಕಿ ಸಮಾಜ ಉಪಾಧ್ಯಕ್ಷ

ಟಾಪ್ ನ್ಯೂಸ್

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

1

Kundapura: ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

fraudd

Hiriydaka: ಆನ್‌ಲೈನ್‌ ಮೂಲಕ ಯುವತಿಗೆ 2.80 ಲಕ್ಷ ರೂ. ವಂಚನೆ

1

Udupi: ಅಧಿಕ ಲಾಭದ ಆಮಿಷ; ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

1

Kundapura: ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

fraudd

Hiriydaka: ಆನ್‌ಲೈನ್‌ ಮೂಲಕ ಯುವತಿಗೆ 2.80 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.