ಕೃಷಿ ಉತ್ಪಾದನಾ ವೆಚ್ಚ ಕಡಿತಗೊಳಿಸಿ: ಡಾ| ಮಂಜುನಾಥ್
ಕಡಿಮೆ ಖರ್ಚಿನಲ್ಲಿ ಕೃಷಿ ಮಾಡುವುದು ರೈತರಿಗೆ ಸಹಾಯಕ
Team Udayavani, Jun 12, 2019, 3:59 PM IST
ಶಿವಮೊಗ್ಗ: ನೈಸರ್ಗಿಕ ಕೃಷಿ ಯೋಜನೆಯ ಹಸ್ತ ಪತ್ರಿಕೆಗಳನ್ನು ಡಾ| ಮಂಜುನಾಥ್ ನಾಯ್ಕ ಬಿಡುಗಡೆಗೊಳಿಸಿದರು.
ಶಿವಮೊಗ್ಗ: ಸ್ಥಳೀಯ, ನೈಸರ್ಗಿಕವಾಗಿ ದೊರಕುವ ವಸ್ತುಗಳನ್ನು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಕೃಷಿ ಮಾಡುವುದರಿಂದ ರೈತರಿಗೆ ಉತ್ಪಾದನಾ ವೆಚ್ಚವನ್ನು ಕಡಿತಗೊಳಿಸಿ, ಹವಾಮಾನ ವೈಪರೀತ್ಯದಿಂದ ಎದುರಾಗುವ ಅಪಾಯವನ್ನು ತಗ್ಗಿಸಬಹದಾಗಿದೆ ಹಾಗೂ ಮಣ್ಣಿನಲ್ಲಿನ ಸೂಕ್ಷ್ಮಜೀವಿಗಳ ಸಂಖ್ಯೆಯನ್ನು ವೃದ್ಧಿಸಬಹುದಾಗಿದೆ ಎಂದು ಕುಲಪತಿ ಡಾ| ಮಂಜುನಾಥ್ ಕೆ. ನಾಯ್ಕ ಅಭಿಪ್ರಾಯಪಟ್ಟರು.
ಕೃಷಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆ ದಕ್ಷಿಣ ಅರೆಮಲೆನಾಡು ವಲಯ- 7ರ ಕಾರ್ಯವಾಹಿ ಸಂಶೋಧನಾ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ, ನೈಸರ್ಗಿಕ ಕೃಷಿ ಯೋಜನೆಯ ಹಸ್ತ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಯೋಜನಾ ಸಭೆಯ ಮುಖ್ಯಸ್ಥ ಡಾ| ಎಚ್. ಕೆ. ವೀರಣ್ಣ ಅವರು ಈ ಯೋಜನೆಯಡಿ ಐದು ಜಿಲ್ಲೆಗಳ 14 ತಾಲೂಕುಗಳಲ್ಲಿ 37 ಕ್ಲಸ್ಟರ್‌ಗಳನ್ನು ಆಯ್ಕೆ ಮಾಡಲಾಗಿದ್ದು, 97 ಹಳ್ಳಿಗಳ 2000 ಹೆಕ್ಟೇರ್ ರೈತರ ಹೊಲದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ವಲಯದ ಮುಖ್ಯ ಬೆಳೆಗಳಾದ ಅಡಕೆ, ತೆಂಗು, ಮೆಕ್ಕೆಜೋಳ, ಭತ್ತ, ತಂಬಾಕು, ಆಲೂಗಡ್ಡೆ, ಬಾಳೆ, ಕಾಳುಮೆಣಸು, ಶುಂಠಿ, ಟೊಮ್ಯಾಟೊ, ಮೆಣಸಿನಕಾಯಿ ಮುಂತಾದ ಬೆಳೆಗಳನ್ನು ನೈಸರ್ಗಿಕ ಕೃಷಿ ಪದ್ಧತಿಯಡಿ ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ ಎಂದು ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು.
ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆಯ ವಲಯ-7 ಕ್ಕೆ ಒಳಪಡುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಿಂದ ರೈತ ಪ್ರತಿನಿಧಿಗಳು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯವಾಹಿ ಸಂಶೋಧನಾ ಯೋಜನಾ ತಂಡದ ವಿಜ್ಞಾನಿಗಳು ಭಾಗವಹಿಸಿದ್ದರು. ಅತಿಥಿಗಳಾದ ಡಾ| ಬಿ. ಆರ್. ಗುರುಮೂರ್ತಿ ಸಂಶೋಧನಾ ನಿರ್ದೇಶಕರು ಮತ್ತು ಡಾ| ಎಚ್.ಎಂ. ಚಿದಾನಂದಪ್ಪ ಡೀನ್ (ಕೃಷಿ) ಕೃಷಿ ಮಹಾವಿದ್ಯಾಲಯ ಶಿವಮೊಗ್ಗ ಇವರು ನೈಸರ್ಗಿಕ ಕೃಷಿ ಯೋಜನೆಯ ಹಸ್ತ ಪತ್ರಿಕೆಗಳನ್ನು ಬಿಡುಗಡೆ ಮಾಡಿದರು. ಯೋಜನೆ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ಪೂರಕವಾದ ವಿಷಯಗಳ ಕುರಿತು ಕೃಷಿ ಅಧಿಕಾರಿಗಳು, ರೈತ ಪ್ರತಿನಿಧಿಗಳು ಹಾಗೂ ಕಾರ್ಯವಾಹಿ ಸಂಶೋಧನಾ ಯೋಜನಾ ತಂಡದ ವಿಜ್ಞಾನಿಗಳು ಚರ್ಚೆ ನಡೆಸಿದರು. ಡಾ| ಬಿ. ಸಿ. ಧನಂಜಯ (ಮಣ್ಣುವಿಜ್ಞಾನಿ) ವಂದಿಸಿದರು. ಡಾ|ಶರಣಬಸಪ್ಪ ಅವರು (ಕೀಟಶಾಸ್ತ್ರಜ್ಞರು) ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.