ಏನ್‌ ಕಿರಿಕ್‌ ಲೈಫ್ ಗುರು!

ಸ್ಲಂ ಹುಡುಗರ ಕಹಾನಿ

Team Udayavani, Jun 13, 2019, 3:00 AM IST

Kirik-Life

ಎಲ್ಲರ ಲೈಫ್ನಲ್ಲೂ ಕಿರಿಕ್‌ ಅನ್ನೋದು ಮಾಮೂಲು. ಕಿರಿಕ್‌ ಇಲ್ಲದ ಲೈಫ್ ಯಾರದ್ದು ಇದೆ ಹೇಳಿ? ಈಗ ಯಾಕೆ ಈ ಕಿರಿಕ್‌ ವಿಷಯ ಅಂತೀರಾ? ಅದಕ್ಕೊಂದು ಕಾರಣವಿದೆ. ಈಗ ಇದೇ ಲೈಫ್ನಲ್ಲಿ ಏನೇನು ಕಿರಿಕ್‌ ಬರುತ್ತವೆ. ಯಾರ್ಯಾರು ಏನೇನು ಕಿರಿಕ್‌ ಅನುಭವಿಸುತ್ತಾರೆ ಎಂಬ ಅಂಶಗಳನ್ನೆ ಇಟ್ಟುಕೊಂಡು “ಕಿರಿಕ್‌ ಲೈಫ್’ ಅನ್ನೋ ಹೆಸರಿನಲ್ಲೇ ಸಿನಿಮಾವೊಂದು ತಯಾರಾಗುತ್ತಿದೆ.

ಕೆಲ ಚಿತ್ರಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿರುವ ಗುರುರಾಜ ಕುಲಕರ್ಣಿ ಈ ಕಿರಿಕ್‌ ಲೈಫ್ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ನವನಟ ಶರತ್‌ ಬಾಬು, ಸುವಾರ್ಥ, ನಿಖೀಲ್‌, ಮಹೇಶ್‌, ಪ್ರಕಾಶ್‌ ತಳಿಮೊದಲಾದ ನವ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಸದ್ದಿಲ್ಲದೆ ಸೆಟ್ಟೇರಿರುವ ಈ ಚಿತ್ರದ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಪತ್ರಕರ್ತರ ಮುಂದೆ ಬಂದಿದ್ದ ಚಿತ್ರತಂಡ, ಚಿತ್ರದಲ್ಲಿರುವ ಕಿರಿಕ್‌ ವಿಷಯಗಳ ಬಗ್ಗೆ ಮಾತನಾಡಿತು. ಮೊದಲಿಗೆ ಚಿತ್ರದ ಬಗ್ಗೆ ಮಾತಿಗಿಳಿದ ನಿರ್ದೇಶಕ ಗುರುರಾಜ ಕುಲಕರ್ಣಿ, ಇದೊಂದು ಐವರು ಹುಡುಗರ ಕಥೆ. ಸ್ಲಂ ಪ್ರದೇಶದಲ್ಲಿ ಬೆಳೆದ ಐವರು ಹುಡುಗರು ತಮ್ಮ ಲೈಫ್ನಲ್ಲಿ ಏನೇನು ಸೋಲು-ಸವಾಲುಗಳನ್ನು ಎದುರಿಸುತ್ತಾರೆ.

ಕೊನೆಗೂ ಈ ಹುಡುಗರು ತಮ್ಮ ಲೈಫ್ನಲ್ಲಿ ತಾವಂದುಕೊಂಡ ಸಾಧನೆ ಮಾಡುತ್ತಾರಾ ಅನ್ನೋದೆ ಚಿತ್ರದ ಕಥೆಯ ಒಂದು ಎಳೆ. ನಾನು ಕಂಡ ಕೆಲವು ನೈಜ ಘಟನೆಗಳನ್ನೇ ಪ್ರೇರಣೆಯಾಗಿಟ್ಟುಕೊಂಡು ಈ ಕಥೆ ಮಾಡಿದ್ದೇನೆ. ಮೊದಲು ಈ ಕಥೆಯನ್ನ ಶಾರ್ಟ್‌ಫಿಲಂ ಮಾಡುವ ಯೋಚನೆಯಿತ್ತು. ಅದೇ ವೇಳೆ ನಿರ್ಮಾಪಕರು ಸಿಕ್ಕಿದ್ದರಿಂದ ಫೀಚರ್‌ ಫಿಲಂ ಮಾಡಲು ಮುಂದಾದೆವು.

ಈ ಚಿತ್ರದಲ್ಲಿ ಕಾಮಿಡಿ, ಲವ್‌, ಸೆಂಟಿಮೆಂಟ್‌, ಎಮೋಷನ್ಸ್‌, ಮನರಂಜನೆಯ ಜೊತೆಗೊಂದು ಮೆಸೇಜ್‌ ಎಲ್ಲವೂ ಇದೆ. ಬಹುತೇಕ ಹೊಸ ಪ್ರತಿಭೆಗಳನ್ನೆ ಇಟ್ಟುಕೊಂಡು ಇಂಥದ್ದೊಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದೇವೆ ಎಂದರು. ಉದ್ಯಮಿ ಸಂದೇಶ್‌ ಹಾಸನ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಸಂದೇಶ್‌, ಚಿತ್ರದ ಕಥೆ ಕೇಳಿದಾಗ ಇಷ್ಟವಾಗಿ ಇದನ್ನು ನಿರ್ಮಿಸುವ ಯೋಚನೆ ಮಾಡಿದೆ.

ಇಂದಿನ ಪ್ರೇಕ್ಷಕರ ಅಭಿರುಚಿಯನ್ನ ಗಮನದಲ್ಲಿ ಇಟ್ಟುಕೊಂಡು ಈ ಚಿತ್ರ ಮಾಡುತ್ತಿದ್ದೇವೆ. ನೋಡುಗರಿಗೆ ಚಿತ್ರ ಇಷ್ಟವಾಗುವುದು ಎಂಬ ಭರವಸೆಯಿದೆ. ಆದಷ್ಟು ಬೇಗ ಚಿತ್ರವನ್ನು ಪೂರ್ಣಗೊಳಿಸಿ ಪ್ರೇಕ್ಷಕರ ಮುಂದೆ ತರುವ ಯೋಜನೆಯಿದೆ ಎಂದರು. “ಕಿರಿಕ್‌ ಲೈಫ್’ ಚಿತ್ರಕ್ಕೆ ಮುಂಜಾನೆ ಮಂಜು ಛಾಯಾಗ್ರಹಣ, ದುರ್ಗ ಪ್ರಸಾದ್‌ ಪಿ.ಎಸ್‌ ಸಂಕಲನ ಕಾರ್ಯವಿದೆ.

ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು ಶಿವು ಜಮಖಂಡಿ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಹಾಸನ, ಸಕಲೇಶಪುರ ಸುತ್ತಮುತ್ತಲಿನ ತಾಣಗಳಲ್ಲಿ ಚಿತ್ರದ ಚಿತ್ರೀಕರಣಕ್ಕೆ ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ ಈ ವರ್ಷಾಂತ್ಯಕ್ಕೆ ಕಿರಿಕ್‌ ಲೈಫ್ ತೆರೆಗೆ ತರುವ ಯೋಜನೆಯಲ್ಲಿದೆ ಚಿತ್ರತಂಡ. ಒಟ್ಟಾರೆ ಸ್ಲಂ ಹುಡುಗರ ಕಿರಿಕ್‌ ಲೈಫ್ ಕಹಾನಿ ಹೇಗಿದೆ ಅನ್ನೋದು ಗೊತ್ತಾಗಬೇಕಾದರೆ ಇನ್ನೂ ಕೆಲವು ತಿಂಗಳು ಕಾಯಬೇಕು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.