ಮಲ್ಪೆ ಬೀಚ್: ಹಟ್‌ಗಳ ತೆರವು
Team Udayavani, Jun 13, 2019, 6:31 AM IST
ಮಲ್ಪೆ: ಮಲ್ಪೆ ಕಡಲ ತೀರದಲ್ಲಿ ಪ್ರವಾಸಿಗರ ಆಕರ್ಷಣೆ ಮತ್ತು ನೆರಳಿಗಾಗಿ ನಿರ್ಮಿಸಿದ್ದ “ಹಟ್’ಗಳನ್ನು ಮಳೆಗಾಲದಲ್ಲಿ ನೀರುಪಾಲಾಗದಿರಲಿ ಎಂದು ಮುಂಜಾಗ್ರತಾ ಕ್ರಮವಾಗಿ ತೆರವುಗೊಳಿಸಲಾಗಿದೆ.
ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯು ಇಲ್ಲಿ 8 ಹಟ್‌ಗಳನ್ನು ನಿರ್ಮಿಸಿತ್ತು. ಈ ಹಿಂದಿನ ವರ್ಷಗಳಲ್ಲಿ ಮಳೆಗಾಲದಲ್ಲಿ ಸಮುದ್ರದ ತೆರೆಗಳು ಇವುಗಳನ್ನು ಸೆಳೆದುಕೊಂಡು ಹೋಗಿದ್ದವು.
ಕಳೆದ ಎರಡು ದಿನಗಳಿಂದ ಸಮುದ್ರ ಪ್ರಕ್ಷುಬ್ಧವಾಗಿರುವ ಕಾರಣ ಬೃಹತ್ ಗಾತ್ರದ ಅಲೆಗಳು ಮರಳ ದಂಡೆಗೆ ಅಪ್ಪಳಿಸಿ ಹಟ್‌ಗಳನ್ನು ದಾಟಿ ರಸ್ತೆಯತ್ತ ಬರುತ್ತಿವೆ. ಈ ಬಾರಿಯೂ ಅವು ಹಾನಿಗೀಡಾಗುವುದು ಬೇಡ ಎಂದು ಮುಂಜಾಗರೂಕತಾ ಕ್ರಮವಾಗಿ ತೆರವುಗೊಳಿಸಲಾಗಿದೆ.
ಆಗಸ್ಟ್ ಬಳಿಕ ಮತ್ತೆ ಹೊಸ ಹಟ್‌ಗಳನ್ನು ಅಳವಡಿಸಲಾಗುವುದು ಎಂದು ಬೀಚ್ ನಿರ್ವಾಹಕ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.