ಬಿಡಿಎಗೆ ಹೈಕೋರ್ಟ್ ನೋಟಿಸ್ ಜಾರಿ
Team Udayavani, Jun 13, 2019, 3:05 AM IST
ಬೆಂಗಳೂರು: ಬೆಂಗಳೂರಿನಲ್ಲಿ ಬಿಡಿಎ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಪುನರ್ ನವೀಕರಣ ಹಾಗೂ ಪುನರ್ ನಿರ್ಮಾಣ ಮಾಡುವ ಪ್ರಸ್ತಾವನೆಗೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಬಿಡಿಎಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿಗೊಳಿಸಿದೆ.
ಈಗಾಗಲೇ ನಿರ್ಮಾಣಗೊಂಡಿರುವ 68 ಲೇಔಟ್‌ಗಳಲ್ಲಿ ವಾಣಿಜ್ಯ ಮಳಿಗೆಗೆ ಮೀಸಲಾದ ನಿವೇಶನಗಳನ್ನು ವಾಸದ ನಿವೇಶನಗಳನ್ನಾಗಿ ಅಕ್ರಮವಾಗಿ ಪರಿವರ್ತಿಸಲಾಗಿದೆ. ಈಗ ಪುನಃ 330 ಕೋಟಿ ರೂ. ವೆಚ್ಚದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸುವ ಉದ್ದೇಶದ ಹಿಂದೆ ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಹುನ್ನಾರ ಅಡಗಿದೆ.
ಹೀಗಾಗಿ, ಬಿಡಿಎ ಪ್ರಸ್ತಾವನೆಗೆ ತಡೆ ನೀಡಬೇಕು ಎಂದು ಕೋರಿ ಈ ಕುರಿತಂತೆ ಜಿ.ಎಂ.ಪಾಳ್ಯದ ಹಿರಿಯ ನಾಗರಿಕ ನೆಲ್ಲೀರ ಎಂ. ಸುಬ್ಬಯ್ಯ ಪಿಐಎಲ್ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾ. ಎ.ಎಸ್ ಓಕಾ ಹಾಗೂ ನ್ಯಾ. ಎಚ್ ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ, ಪ್ರತಿವಾದಿ ಬಿಡಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಸಂಬಂಧಿಸಿದಂತೆ ಜುಲೈ 5ರೊಳಗೆ ಆಕ್ಷೇಪನೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ಹಲವು ಬಿಡಿಎ ವಾಣಿಜ್ಯ ಮಳಿಗೆಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದು, ಬಿಡಿಎ ಬಡಾವಣೆಗಳಲ್ಲಿರುವ ಕೆರೆಗಳು ಮತ್ತು ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸುವಂತೆ ಆದೇಶಿಸಬೇಕು, ಅಕ್ರಮವಾಗಿ ವಸತಿ ಪ್ರದೇಶದಲ್ಲಿನ ಕಟ್ಟಡಗಳು ವಾಣಿಜ್ಯ ಉದ್ದೇಶಕ್ಕೆ ಬಳಕೆ ಆಗುತ್ತಿರುವುದನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.