ಪ್ಲಾಸ್ಟಿಕ್‌ ನಿಷೇಧ ಅನುಷ್ಠಾನ ಅಧ್ಯಯನಕ್ಕೆ ಚೆನ್ನೈ ಪ್ರವಾಸ

Team Udayavani, Jun 13, 2019, 3:04 AM IST

bbmp2

ಬೆಂಗಳೂರು: ಪ್ಲಾಸ್ಟಿಕ್‌ ನಿಷೇಧ ನಿಯಮಗಳನ್ನು ಚೆನ್ನೈ ಮಾದರಿಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಬಿಬಿಎಂಪಿ ಮುಂದಾಗಿದ್ದು, ಆರೋಗ್ಯ ಅಧಿಕಾರಿಗಳ ತಂಡವನ್ನು ಅಧ್ಯಯನಕ್ಕಾಗಿ ಚೆನ್ನೈಗೆ ಕಳುಹಿಸಲು ಸಜ್ಜಾಗಿದೆ.

ರಾಜ್ಯಾದ್ಯಂತ 40 ಮೈಕ್ರಾನ್‌ಗಿಂತ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಲಾಗಿದೆ. ಆದರೂ, ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾತ್ರ ನಿಂತಿಲ್ಲ. ಹೀಗಾಗಿಯೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಲ್ಲಿ ಶೇ. 10ಕ್ಕೂ ಹೆಚ್ಚು ಭಾಗ ಪ್ಲಾಸ್ಟಿಕ್‌ ತ್ಯಾಜ್ಯವಾಗಿದ್ದು, ಅದರ ಸಂಸ್ಕರಣೆ ಕಷ್ಟವಾಗುತ್ತಿದೆ.

ಹೀಗಾಗಿ ಪ್ಲಾಸ್ಟಿಕ್‌ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ಮುಂದಾಗಿರುವ ಬಿಬಿಎಂಪಿ ಬೇರೆ ನಗರಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಅಧ್ಯಯನ ನಡೆಸಲು ನಿರ್ಧರಿಸಿದೆ. ಪ್ಲಾಸ್ಟಿಕ್‌ ನಿಷೇಧವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಚೆನ್ನೈ ಮಹಾನಗರ ಪಾಲಿಕೆ ಯಶಸ್ವಿಯಾಗಿದೆ.

ಅದರಂತೆ ಚೆನ್ನೈ ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಆ ಹಿನ್ನೆಲೆಯಲ್ಲಿ ಅಲ್ಲಿನ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಹಾಗೂ ಅನುಷ್ಠಾನ ಮಾದರಿಯ ಅಧ್ಯಯನಕ್ಕಾಗಿ ಪಾಲಿಕೆಯ ಅಧಿಕಾರಿಗಳು ಅಲ್ಲಿಗೆ ತೆರಳಲು ಮುಂದಾಗಿದ್ದಾರೆ.

ಆರೋಗ್ಯ ವಿಭಾಗದ ಐವರು ಅಧಿಕಾರಿಗಳು 10 ದಿನದಲ್ಲಿ ಚೆನ್ನೆ$„ಗೆ ತೆರಳಿ ಅಲ್ಲಿನ ಕ್ರಮಗಳ ಬಗ್ಗೆ ಮಾಹಿತಿ ಪಡೆದು, ವರದಿ ಸಿದ್ಧಪಡಿಸಲಿದ್ದಾರೆ. ಆನಂತರ ಅಲ್ಲಿನ ಮಾದರಿಯನ್ನು ಇಲ್ಲೂ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮೇಲೆ ಕಡಿವಾಣ ಹಾಕಲು ಚೆನ್ನೆ$„ನಲ್ಲಿ ಕೈಗೊಂಡಿರುವ ಕ್ರಮಗಳ ಅನುಷ್ಠಾನಗೊಳಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅದಕ್ಕಾಗಿ ಚೆನ್ನೆ$„ಗೆ ಅಧಿಕಾರಿಗಳು ತೆರಳಿ, ಅಲ್ಲಿ ಕೈಗೊಂಡಿರುವ ಕ್ರಮಗಳ ಮಾಹಿತಿ ಪಡೆದು, ವರದಿ ಸಿದ್ಧಪಡಿಸಲಿದ್ದಾರೆ. ಆನಂತರ ಅದನ್ನು ಬೆಂಗಳೂರಿನಲ್ಲೂ ಅನುಷ್ಠಾನಗೊಳಿಸಲಾಗುವುದು.
-ಗಂಗಾಂಬಿಕೆ, ಮೇಯರ್‌

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.