ಜಮ್ಮು: ಮತ್ತೆ ಸಿಆರ್‌ಪಿಎಫ್ ಗುರಿ; ಐವರು ಹುತಾತ್ಮ
ಗಸ್ತು ತಿರುಗುತ್ತಿದ್ದ ವಾಹನದ ಮೇಲೆ ಫೈರಿಂಗ್
Team Udayavani, Jun 13, 2019, 5:10 AM IST
ಶ್ರೀನಗರ/ಹೊಸದಿಲ್ಲಿ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ದಾಳಿಯ ನೋವು ಆರುವ ಮುನ್ನ ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ ನಡೆದಿದೆ. ಅನಂತನಾಗ್ ಜಿಲ್ಲೆಯ ಕೆ.ಪಿ. ರೋಡ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಸಿಆರ್‌ಪಿಎಫ್ನ ಐವರು ಯೋಧರು ಹುತಾತ್ಮರಾಗಿದ್ದಾರೆ.
ಮೋಟರ್‌ಸೈಕಲ್ನಲ್ಲಿ ಆಗಮಿಸಿದ ಇಬ್ಬರು ಉಗ್ರರು ಗಸ್ತು ತಿರುಗುವ ಕರ್ತವ್ಯದಲ್ಲಿ ನಿರತರಾಗಿದ್ದ ಯೋಧರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ಜತೆಗೆ ಗ್ರೆನೇಡ್‌ಗಳನ್ನೂ ಎಸೆದು ಪರಾರಿಯಾಗಿದ್ದಾರೆ. ಇತರ ಮೂವರು ಗಾಯಗೊಂಡಿದ್ದಾರೆ. ಅನಂತನಾಗ್ ಠಾಣೆಯ ಠಾಣಾಧಿಕಾರಿ ಅರ್ಶದ್ ಅಹ್ಮದ್ ಗಾಯಗೊಂಡವರಲ್ಲಿ ಸೇರಿದ್ದಾರೆ.
ಈ ಘಟನೆಯ ಬಳಿಕ ಪೊಲೀಸರು, ಸಿಆರ್‌ಪಿಎಫ್ ಮತ್ತು ಇತರ ಸೇನಾ ಸಿಬಂದಿ ತತ್‌ಕ್ಷಣ ಶೋಧ ಕಾರ್ಯ ಆರಂಭಿಸಿದರು. ಈ ಸಂದರ್ಭ ಉಗ್ರರ ಜತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರ ಪೈಕಿ ಒಬ್ಬನನ್ನು ಕೊಂದು ಹಾಕಲಾಗಿದೆ. ಇನ್ನೊಬ್ಬ ಉಗ್ರ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಅಲ್ ಉಮರ್ ಮುಜಾಹಿದ್ದೀನ್ ಎಂಬ ಸಂಘಟನೆ ಕೃತ್ಯದ ಹೊಣೆ ಹೊತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.