ಕೋಲ್ಕತಾ ರಣರಂಗ
ಬಿಜೆಪಿ ಕಾರ್ಯಕರ್ತರು- ಪೊಲೀಸರ ನಡುವೆ ಘರ್ಷಣೆ
Team Udayavani, Jun 13, 2019, 5:46 AM IST
ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಲೋಕಸಭೆ ಚುನಾವಣೆ ಬಳಿಕ ನಡೆದ ಹಿಂಸಾಚಾರ ಖಂಡಿಸಿ ಬಿಜೆಪಿ ಬುಧವಾರ ಆಯೋಜಿಸಿದ್ದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದು, ಕೋಲಾಹಲವೇ ನಡೆದಿದೆ. ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ನಡೆಸಿದ್ದಾರೆ. ಅದಕ್ಕೂ ಬಗ್ಗದೇ ಇದ್ದಾಗ, ಜಲಫಿರಂಗಿ ಪ್ರಯೋಗಿಸಲಾಗಿದೆ. ಈ ಸಂದರ್ಭದಲ್ಲಿ ಹಲವು ಮುಖಂಡರು ಗಾಯಗೊಂಡಿದ್ದಾರೆ. ಇದರಿಂದಾಗಿ ಪಕ್ಷದ ನಾಯಕರಾದ ಮುಕುಲ್ ರಾಯ್, ರಾಜು ಬ್ಯಾನರ್ಜಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ, ಬಿಜೆಪಿ-ಟಿಎಂಸಿ ಘರ್ಷಣೆ ಮತ್ತೂಂದು ಮಜಲು ಪ್ರವೇಶಿಸಿದೆ.
ನೂತನವಾಗಿ ಆಯ್ಕೆಯಾಗಿರುವ 18 ಮಂದಿ ಸಂಸದರೂ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕೋಲ್ಕತಾದ ಬೋಬಜಾರ್ ಪ್ರದೇಶಕ್ಕೆ ಮೆರವಣಿಗೆ ಪ್ರವೇಶಿಸುತ್ತಿದಂತೆಯೇ ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಇದರಿಂದ ಕ್ರುದ್ಧಗೊಂಡ ಬಿಜೆಪಿ ಕಾರ್ಯಕರ್ತರು ಪೊಲೀಸರತ್ತ ಕಲ್ಲು, ಬಾಟಲ್ಗಳನ್ನು ಎಸೆಯಲಾರಂಭಿಸಿದರು. ಆದರೆ ಬಿಜೆಪಿ ನಾಯಕರ ಪ್ರಕಾರ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ. ಪಕ್ಷದ ಕಾರ್ಯಕರ್ತರು ಅದರಲ್ಲಿ ಭಾಗಿಯಾಗಿಲ್ಲ ಎಂದಿದ್ದಾರೆ.
ಪೊಲೀಸರ ವರ್ತನೆ ಖಂಡಿಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ಪಶ್ಚಿಮ ಬಂಗಾಲ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಹಲವಾರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದೇ ವೇಳೆ ಪಶ್ಚಿಮ ಬಂಗಾಲದ ಬಿರ್‌ಭುಮ್ ಜಿಲ್ಲೆಯ ಬಂದಾರ್ ಗ್ರಾಮದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೂ ದಾಳಿ ನಡೆಸಲಾಗಿದೆ.
ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸಭೆ
ರಾಜ್ಯಪಾಲ ಕೆ.ಎನ್. ತ್ರಿಪಾಠಿ ನೇತೃತ್ವದಲ್ಲಿ ಕೋಲ್ಕತಾದ ರಾಜಭವನದಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಸಭೆಯನ್ನು ಗುರುವಾರ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ. ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಸಿಪಿಎಂ ನಾಯಕರಿಗೆ ರಾಜಭವನದಿಂದ ಸಭೆ ನಡೆಯುವ ಬಗ್ಗೆ ಪತ್ರ ರವಾನೆಯಾಗಿದೆ. ಬಿಜೆಪಿ ಮತ್ತು ಟಿಎಂಸಿ ನಾಯಕರು ಅದರಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಮತ್ತು ಸಿಪಿಎಂ ಪತ್ರ ಬಂದಿರುವುದನ್ನು ದೃಢೀಕರಿಸಿವೆ.
ರಾಜ್ಯದಲ್ಲಿ ಬಿಜೆಪಿ ಶಕ್ತಿ ವೃದ್ಧಿಯಾಗುತ್ತಿರುವುದರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರು ನಮ್ಮನ್ನು ತಡೆಯಲು ಹಿಂಸಾತ್ಮಕ ರಾಜಕೀಯ ಕೈಗೆತ್ತಿಕೊಂಡಿದ್ದಾರೆ.
-ಕೈಲಾಶ್ ವಿಜಯವರ್ಗೀಯ, ಬಿಜೆಪಿ ನಾಯಕ
ಪಶ್ಚಿಮ ಬಂಗಾಲದಲ್ಲಿನ ಶಾಂತಿಯುತ ವಾತಾವರಣ ಕದಡಲು ಬಿಜೆಪಿ ಮುಂದಾಗುತ್ತಿದೆ. ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದಿದ್ದಾರೆ ಎಂದಾಕ್ಷಣ ಅವರು ಏನುಬೇಕಾದರೂ ಮಾಡಹುದು ಎಂದರೆ ಒಪ್ಪಲಾಗದು.
-ಪಾರ್ಥ ಚಟರ್ಜಿ, ಟಿಎಂಸಿ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.