ಸೇನಾ ವಿಮಾನದ ಅವಶೇಷ ಪತ್ತೆ, 13 ಮಂದಿಯೂ ಬದುಕಿಲ್ಲ; IAF ಟ್ವೀಟ್
Team Udayavani, Jun 13, 2019, 2:29 PM IST
ನವದೆಹಲಿ: ಸುಮಾರು 9 ದಿನಗಳ ಹಿಂದೆ ಅಸ್ಸಾಂನ ಜೋಹಾರ್ಟ್ ನಿಂದ ನಾಪತ್ತೆಯಾಗಿದ್ದ ವಾಯುಪಡೆಯ ಎಎನ್ 32 ವಿಮಾನದ ಅವಶೇಷಗಳು ಮಂಗಳವಾರ ಅರುಣಾಚಲ ಪ್ರದೇಶದ ಲಿಪೋದಿಂದ 16 ಕಿ.ಮೀ ದೂರದ ಸ್ಥಳದಲ್ಲಿ ಪತ್ತೆಯಾಗಿದ್ದು, ವಿಮಾನದಲ್ಲಿದ್ದ 13 ಮಂದಿಯೂ ಸಾವನ್ನಪ್ಪಿರುವುದಾಗಿ ಐಎಎಫ್ ಪ್ರಕಟಣೆಯಲ್ಲಿ ತಿಳಿಸಿದೆ.
ಅವಶೇಷಗಳು ಪತ್ತೆಯಾದ ಸ್ಥಳದಲ್ಲಿ ಯಾವುದೇ ವ್ಯಕ್ತಿ ಬದುಕುಳಿದಿಲ್ಲ ಎಂದು 13 ಮಂದಿ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಹೇಳಿದೆ.
#Update on #An32 crash: Eight members of the rescue team have reached the crash site today morning. IAF is sad to inform that there are no survivors from the crash of An32.
— Indian Air Force (@IAF_MCC) June 13, 2019
ರಷ್ಯಾ ನಿರ್ಮಿತ ಎಎನ್ 32 ವಿಮಾನ ಜೂನ್ 3ರಂದು ಅಸ್ಸಾಂನ ಜೋಹಾರ್ಟ್ ನಿಂದ ಹೊರಟ ಕೆಲವೇ ಹೊತ್ತಿನಲ್ಲಿ ನಾಪತ್ತೆಯಾಗಿತ್ತು. ವಾಯುಪಡೆಯ ಈ ವಿಮಾನದಲ್ಲಿ ಒಟ್ಟು 13 ಮಂದಿ ಪ್ರಯಾಣಿಸಿದ್ದರು.
ವಿಮಾನದ ಅವಶೇಷಗಳು ಪತ್ತೆಯಾಗಿದ್ದ ಸ್ಥಳಕ್ಕೆ ಇಂದು ಬೆಳಗ್ಗೆ ಎಂದು ಮಂದಿ ರಕ್ಷಣಾ ತಂಡ ತೆರಳಿ ಶೋಧ ಕಾರ್ಯ ನಡೆಸಿತ್ತು. ಆದರೆ ಅಪಘಾತಕ್ಕೀಡಾದ ವಿಮಾನದಲ್ಲಿ ಯಾರೂ ಬದುಕಿ ಉಳಿದಿಲ್ಲ ಎಂದು ಐಎಎಫ್ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.