ಬೆದರಿಸಲು ಬಂದಳು ದೇವಯಾನಿ
Team Udayavani, Jun 14, 2019, 5:00 AM IST
ಕನ್ನಡ ಚಿತ್ರರಂಗಕ್ಕೂ ಹಾರರ್ ಚಿತ್ರಗಳಿಗೂ ಅದೇನೋ ಒಂಥರಾ ಬಿಡಿಸಲಾಗದ ನಂಟು. ಅದರಲ್ಲೂ ಕಳೆದ ಮೂರ್‍ನಾಲ್ಕು ವರ್ಷಗಳಲ್ಲಿ ಹಿಂದೆಂದಿಗಿಂತಲೂ ಹೆಚ್ಚಾಗಿ ಸಾಲು ಸಾಲು ಹಾರರ್ ಚಿತ್ರಗಳು ಪ್ರೇಕ್ಷಕರನ್ನು ಬೆಚ್ಚಿ ಬೀಳಿಸಲು ಬರುತ್ತಿವೆ. ಈಗ ಅಂಥದ್ದೇ ಮತ್ತೂಂದು ಚಿತ್ರ ಪ್ರೇಕ್ಷಕರ ಮುಂದೆ ಬರೋದಕ್ಕೆ ರೆಡಿಯಾಗಿದೆ. ಅಂದಹಾಗೆ, ಆ ಚಿತ್ರದ ಹೆಸರು “ದೇವಯಾನಿ’. ತೆರೆಯ ಹಿಂದೆ ಮತ್ತು ತೆರೆಯ ಮುಂದೆ ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ದೇವಯಾನಿ’ ಸದ್ಯ ತೆರೆಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇನ್ನು “ದೇವಯಾನಿ’ಚಿತ್ರದಲ್ಲಿ ದೆವ್ವ, ದೇವರು ಮತ್ತು ವಿಜ್ಞಾನ ಈ ಮೂರರ ಸಂಗಮವಿದೆ. ಆತ್ಮಗಳ ಬಗ್ಗೆ ಅಧ್ಯಯನ ನಡೆಸುವ ಪ್ರೊಫೇಸರ್ ಒಬ್ಬರು ಪರಕಾಯ ಪ್ರವೇಶ ಮಾಡಲು ಮುಂದಾಗುತ್ತಾರೆ. ಆನಂತರ ಅಲ್ಲಿ ಏನೇನು ಘಟನೆಗಳು ನಡೆಯುತ್ತವೆ ಅನ್ನೋದೆ “ದೇವಯಾನಿ’ ಚಿತ್ರದ ಕಥೆಯ ಒಂದು ಎಳೆ.
ಭಾರತದ ಅನೇಕ ಪುರಾಣ ಮತ್ತು ಪುಣ್ಯ ಕಥೆಗಳಲ್ಲಿ ಪರಕಾಯ ಪ್ರವೇಶದ ಬಗ್ಗೆ ಅನೇಕ ಉದಾಹರಣೆಗಳಿದ್ದು, ಆದಿಗುರು ಶಂಕರಾಚಾರ್ಯರು ಮತ್ತು ವಿಕ್ರಮಾದಿತ್ಯ ಪರಕಾಯ ಪ್ರವೇಶ ಸಿದ್ಧಾಂತವನ್ನು ಪ್ರೇರಣೆಯಾಗಿ ಇಟ್ಟುಕೊಂಡು ಈ ಚಿತ್ರವನ್ನು ಮಾಡಲಾಗಿದೆ ಎನ್ನುವುದು ಚಿತ್ರತಂಡದ ಮಾತು. ಇನ್ನು ಚಿತ್ರದಲ್ಲಿ ಸುಮಾರು ಮೂವತ್ತು ನಿಮಿಷಗಳಷ್ಟು ಸ್ಪೆಷಲ್ ಗ್ರಾಫಿಕ್ಸ್ ಕೂಡ ಬಳಸಿಕೊಳ್ಳಲಾಗಿದ್ದು, ಇಲ್ಲಿಯವರೆಗೆ ಬಂದ ಹಾರರ್-ಥ್ರಿಲ್ಲರ್ ಚಿತ್ರಗಳಿಗಿಂತ “ದೇವಯಾನಿ’ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎನ್ನುತ್ತದೆ ಚಿತ್ರತಂಡ. “ದೇವಯಾನಿ’ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಕುಮಾರ್ ಈಶ್ವರ್ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸಾಫ್ಟ್
ವೇರ್ ಇಂಜಿನಿಯರ್ ಹರೀಶ್ ಎರಡೂ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಚಿತ್ರದಲ್ಲಿ “ದೇವಯಾನಿ’ಯ ಪಾತ್ರದಲ್ಲಿ ನಾಯಕಿಯಾಗಿ ಅರ್ಚನಾ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಾಗ, ಗೋಪಿಕೃಷ್ಣ, ಜನಾರ್ಧನ್ ಮೊದಲಾದವರು ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸುಮಾರು ಎರಡೂವರೆ ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಟಿ. ಸುಲ್ತಾನ್ ಮತ್ತು ಕೆ. ಸುಬ್ಬಿರಾಮಿ ರೆಡ್ಡಿ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಬೆಂಗಳೂರು ನಗರ, ದೇವನಹಳ್ಳಿಯ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಕಸ್ತೂರಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದಿದ್ದ “ದೇವಯಾನಿ’ ಚಿತ್ರತಂಡ ಚಿತ್ರದ ಬಗ್ಗೆ ಕೆಲ ಮಾಹಿತಿಗಳನ್ನು ಹಂಚಿಕೊಂಡಿತು. ಸದ್ಯ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಜುಲೈ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.