ಮಳೆಗಾಲದಲ್ಲಿ ಹರಡುವ ರೋಗಗಳ ನಿಯಂತ್ರಣ ಅಗತ್ಯ: ಡಿಸಿ
ಸಮನ್ವಯ ಸಮಿತಿ ಸಭೆ
Team Udayavani, Jun 14, 2019, 5:42 AM IST
ಮಡಿಕೇರಿ : ಮಳೆಗಾಲದ ಅವಧಿಯಲ್ಲಿ ಹರಡುವಂತಹ ರೋಗ ಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿಫಾ ವೈರಾಣು ಜ್ವರದ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ ನಡೆದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮೀಪದ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಕಂಡು ಬರುತ್ತಿರು ವುದರಿಂದ ಕೊಡಗು ಜಿಲ್ಲೆಯಲ್ಲಿಯೂ ಸಹ ಕಟ್ಟೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ನಿಫಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಾಹಿತಿ ನೀಡಬೇಕು. ಜೊತೆಗೆ ಮಳೆಗಾಲದ ಸಂದರ್ಭದಲ್ಲಿ ಹರಡುಬಹುದಾದ ಡೆಂಗ್ಯು, ಚಿಕನ್‌ಗುನ್ಯ, ಮಲೇರಿಯಾ, ಕಾಮಾಲೆ ಮತ್ತಿತರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕೆ.ಮೋಹನ್ ಅವರು ನಿಫಾ ವೈರಸ್ ಜ್ವರ ಸಂಬಂಧಿಸಿದಂತೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.
ಪ್ರಾಣಿಗಳು ಮತ್ತು ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ತಿನ್ನಬಾರದು. ಬಾವಲಿಗಳು ಅತಿ ಹೆಚ್ಚಾಗಿ ಕಂಡುಬರುವ ಪ್ರದೇಶಗಳಿಂದ ಸಂಗ್ರಹಿಸಿದ ನೀರಾ ಕುಡಿಯಬಾರದು. ಸೋಂಕಿತ ಪ್ರದೇಶಗಳಿಗೆ ಭೇಟಿ ನೀಡುವಾಗ ಪ್ರತಿಬಂಧಕ ಉಪಾಯಗಳನ್ನು ಕೈಗೊಳ್ಳುವುದು, ರೋಗಿಯ ಶರೀರ ಸ್ರಾವದೊಂದಿಗೆ (ಜೊಲ್ಲು, ಬೆವರು, ಮೂತ್ರ ಇತ್ಯಾದಿ) ಸಂಪರ್ಕ ತಪ್ಪಿಸಬೇಕು ಎಂದು ಅವರು ತಿಳಿಸಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರ ಣಾಧಿಕಾರಿ ಡಾ|ಎಂ.ಶಿವಕುಮಾರ್ ಅವರು ಮಾತನಾಡಿ ಹಂದಿ, ಕುದುರೆ, ನಾಯಿ ಮತ್ತು ಬೆಕ್ಕುಗಳಂತಹ ಸೋಂಕಿತ ಜಾನುವಾರುಗಳು ಮಧ್ಯಾಂತರ ಮೂಲ ಗಳಾಗಿರುವುದರಿಂದ ಇವುಗಳನ್ನು ಪ್ರತ್ಯೇಕವಾಗಿಡಿ, ಶಂಕಿತ ಪ್ರಕರಣಗಳನ್ನು ಪ್ರತ್ಯೇಕವಾಗಿಡಬೇಕು.
ಮಾಸ್ಕ್ ಮತ್ತು ಗ್ಲೌಸ್ ತಪ್ಪದೇ ಬಳಸುವುದು
ರೋಗಿಗಳು ಬಳಸುವ ವಸ್ತುಗಳನ್ನು ಪ್ರತ್ಯೇಕವಾಗಿ ಸಾಬೂನು ನೀರು ಬಳಸಿ ಶುಚಿಗೊಳಿಸಬೇಕು. ಸೋಂಕಿತ ಜನರ ಸಂಪರ್ಕಕ್ಕೆ ಬಂದ ನಂತರ ಕೈಗಳನ್ನು ಸರಿಯಾಗಿ ತೊಳೆದುಕೊಳ್ಳಬೇಕು. ರೋಗಿ ಗಳನ್ನು ಉಪಚರಿಸುವಾಗ ಮಾಸ್ಕ್ ಮತ್ತು ಗ್ಲೌಸ್ ತಪ್ಪದೇ ಬಳಸುವುದು, ಎಲ್ಲ ರೀತಿಯ ಹಣ್ಣುಗಳನ್ನು ಚೆನ್ನಾಗಿ ತೊಳೆದು, ಸಿಪ್ಪೆ ಸುಲಿದು ಮತ್ತು ಬೇಯಿಸಿ ತಿನ್ನುವುದು, ಫ್ಲೋ ರೀತಿಯ ಲಕ್ಷಣಗಳು ಕಂಡುಬಂದರೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ, ನೆರವಿಗಾಗಿ 104 ಕ್ಕೆ ಕರೆ ಮಾಡುವಂತಾಗಬೇಕು ಎಂದು ಅವರು ಮಾಹಿತಿ ನೀಡಿದರು.
ರೋಗಿಯ ಶರೀರದ ಸ್ರಾವ ದೊಂದಿಗೆ(ಜೊಲ್ಲು, ಬೇವರು ಮಾತ್ರ) ಸಂಪರ್ಕ ತಪ್ಪಿಸಿ. ರೋಗ ಹರಡುವ ರೀತಿ ಮತ್ತು ರೋಗ ಲಕ್ಷಣಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದರು.
ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ, ತಾಲೂಕು ವೈದ್ಯಾಧಿಕಾರಿಯಾದ ಡಾ|ಎ.ಸಿ.ಶಿವ ಕುಮಾರ್ (ಮಡಿಕೇರಿ) ಡಾ|ಗುರುರಾಜ್(ವಿರಾಜಪೇಟೆ), ಡಾ|ಲೋಕೇಶ್ ಮಾಹಿತಿ ನೀಡಿದರು.
ನಿಫಾ ವೈರಸ್ ಜ್ವರ
ಬಾವಲಿಗಳಿಂದ ಇತರ ಪ್ರಾಣಿಗಳಿಗೆ, ಪ್ರಾಣಿಗಳಿಂದ ಹಾಗೂ ಬಾವಲಿಗಳಿಂದ ಮನುಷ್ಯನಿಗೆ ಹರಡುತ್ತದೆ, ಸೋಂಕಿತ ಬಾವಲಿ ಮತ್ತು ಪ್ರಾಣಿಗಳಿಂದ ಸ್ರವಿಸುವ ದ್ರವಗಳ ನೇರ ಸಂಪರ್ಕ ಹೊಂದುವುದರಿಂದ ಹರಡುತ್ತದೆ, ಸೋಂಕಿತ ಬಾವಲಿ ಮತ್ತು ಪ್ರಾಣಿಗಳ ಸೋಂಕಿತ ಪದಾರ್ಥಗಳನ್ನು ಉಪಯೋಗಿಸುವುದರಿಂದ ಹರಡಬಹುದು ಎಂದು ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ| ಎಂ.ಶಿವಕುಮಾರ್‌ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.