ಸುಮಲತಾ ಬೆಂಬಲಿಗರಿಗೆ ಜೆಡಿಎಸ್ ತರಾಟೆ
Team Udayavani, Jun 14, 2019, 5:04 AM IST
ಮಂಡ್ಯ: ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಕೇಂದ್ರದಿಂದ 2 ಲಕ್ಷ ರೂ.ಪರಿಹಾರ ಬಿಡುಗಡೆಯಾಗಿರುವ ವಿಚಾರ ಜೆಡಿಎಸ್ ಹಾಗೂ ಅಂಬರೀಶ್ ಬೆಂಬಲಿಗರ ನಡುವಿನ ಜಟಾಪಟಿಗೆ ಕಾರಣವಾಗಿದೆ. ಬಸ್ ದುರಂತದಲ್ಲಿ ಸಾವನ್ನಪ್ಪಿದ 30 ಕುಟುಂಬಗಳಿಗೆ ಕೇಂದ್ರ ಸರ್ಕಾರದ ಗಮನ ಸೆಳೆದು 2 ಲಕ್ಷ ರೂ.ಪರಿಹಾರ ಕೊಡಿಸಿದ್ದು ಸುಮಲತಾ ಎಂದು ಅಂಬರೀಶ್ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿಸಿದ್ದರು.
ಸುಮಲತಾಗೆ ಧನ್ಯವಾದವನ್ನೂ ಅರ್ಪಿಸಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಕಾರ್ಯಕರ್ತರು, ಕೇಂದ್ರದಿಂದ ಹಣ ಕೊಡಿಸಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ. ಬಸ್ ದುರಂತ ಕುರಿತು ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ್ದರ ಫಲವಾಗಿ ಕಳೆದ ಫೆಬ್ರವರಿ 6ರಂದೇ ಪರಿಹಾರ ಬಂದಿದೆ. ಆಗ ಸುಮಲತಾ ಎಲ್ಲಿದ್ದರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮಧ್ಯೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ, ಪರಿಹಾರ ಹಣದ ವಿಚಾರವನ್ನು ಪ್ರಚಾರಕ್ಕೆ ಬಳಸಿದ್ದು ತಪ್ಪು. ಆದರೆ, ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ತಲುಪಿರುವುದು ಮುಖ್ಯ. ಅದನ್ನು ಯಾರು ಕೊಟ್ಟಿದ್ದಾರೆ ಅಥವಾ ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ, ನೀವು ಕೊಟ್ಟಿಲ್ಲ ಅನ್ನೋದು ತುಂಬಾ ತಪ್ಪಾಗುತ್ತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.