ಹೇಮೆಗೆ ಆರಂಭವಾಗದ ಒಳ ಹರಿವು

ಅಣೆಕಟ್ಟೆಯ ಒಡಲು ಖಾಲಿ : ಕೇವಲ 139 ಕ್ಯೂಸೆಕ್‌ ಒಳಹರಿವು

Team Udayavani, Jun 14, 2019, 9:27 AM IST

hasan-tdy-1..

ಹಾಸನ: ಮುಂಗಾರು ಮಳೆ ಆರಂಭವಾಗಿದ್ದರೂ ಹೇಮಾವತಿ ಜಲಾಶಯಕ್ಕೆ ಒಳ ಹರಿವು ಇನ್ನೂ ಆರಂಭವಾಗಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಒಳ ಹರಿವು ಬಹುತೇಕ ನಿಂತೇ ಹೋಗಿದೆ. ನೀರಿನ ಸಂಗ್ರಹವಂತೂ ಆತಂಕಕಾರಿ ಮಟ್ಟದಲ್ಲಿದೆ.

ಕಳೆದ ವರ್ಷ ಜೂ.13 ರಂದು ಜಲಾಶಯಕ್ಕೆ 37,946 ಕ್ಯೂಸೆಕ್‌ ಒಳ ಹರಿವಿತ್ತು. ಆದರೆ ಈ ವರ್ಷ ನೀರಿನ ಒಳ ಹರಿವು ಕೇವಲ 139 ಕ್ಯೂಸೆಕ್‌ ಮಾತ್ರ. ಕಳೆದ ವರ್ಷ ಜೂನ್‌ ಆಂತ್ಯದ ವೇಳೆಗೆ ಜಲಾಶಯ ಭರ್ತಿಯ ದಿನಗಣನೆ ಆರಂಭವಾಗಿತ್ತು. ಜುಲೈ 15 ರ ವೇಳೆಗೆ ಭರ್ತಿಯಾಗಿ ನದಿಗೆ 20 ಸಾವಿರ ಕ್ಯೂಸೆಕ್‌ ನೀರನ್ನು ಹರಿಸಲಾಗುತ್ತಿತ್ತು. ಆದರೆ ಈ ವರ್ಷ ಜೂನ್‌ ತಿಂಗಳಾಂತ್ಯಕ್ಕೆ ಒಂದು ಟಿಎಂಸಿ ನೀರು ಸಂಗ್ರಹವಾಗುವ ಸೂಚನೆಯೂ ಕಾಣುತ್ತಿಲ್ಲ.

ಜಿಲ್ಲೆಯಲ್ಲಿ ಶೇ.45 ಮಳೆ ಕೊರತೆ: ಜಿಲ್ಲೆಯಲ್ಲಿ ಈ ವರ್ಷ ಫ‌ೂರ್ವ ಮುಂಗಾರು ಮಳೆ ಶೇ. 45 ಕೊರತೆಯಾಗಿದೆ. ಮುಂಗಾರು ಮಳೆ ಆರಂಭವಾದರೂ ಇನ್ನೂ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯುತ್ತಿಲ್ಲ. ಮೋಡ ಕವಿದ ವಾತಾವರಣದ ನಡುವೆ ಚದುರಿದಂತೆ ಮಳೆಯಾಗುತ್ತಿದ್ದು, ರೈತರು ಮುಂಗಾರು ಬೆಳೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮಳೆ ಆಶ್ರಯದ ಪ್ರದೇಶದಲ್ಲಿ ಮೆಕ್ಕೆಜೋಳ, ಆಲೂಗಡ್ಡೆ, ತಂಬಾಕು ನಾಟಿ ಆರಂಭವಾಗಿದೆ. ಆದರೆ ಹೇಮಾವತಿ ಯೋಜನೆಯ ಅಚ್ಚುಕಟ್ಟು ರೈತರಲ್ಲಿ ಈ ವರ್ಷ ಬೆಳೆ ಮಾಡಲಾಗುವುದಿಲ್ಲವೇನೋ ಎಂಬ ಆತಂಕ ಶುರುವಾಗಿದೆ.

ಬತ್ತಿದ ಹಳ್ಳ ಕೊಳ್ಳಗಳು: ಹೇಮಾವತಿ ಜಲಾಶಯ ಯೋಜನೆಯ ಜಲಾನಯನ ಪ್ರದೇಶ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕನ್ನು ಆವರಿಸಿದೆ. ಆದರೆ ಈ ವರ್ಷ ಈ ಪ್ರದೇಶಗಳಲ್ಲಿ ಹಳ್ಳ, ಕೊಳ್ಳಗಳು ಬತ್ತಿಹೋಗಿವೆ. ಹಾಗಾಗಿ ಹೇಮಾವತಿ ಜಲಾಶಯಕ್ಕೆ ಒಳ ಹರಿವು ಆರಂಭವಾಗಬೇಕಾದರೆ ಹಳ್ಳಕೊಳ್ಳಗಳು ತುಂಬಿ ಹರಿಯಬೇಕು. ಆದರೆ ಇದುವರೆಗೂ ಮಲೆನಾಡಿನಲ್ಲಿ ಹದ ಮಳೆಯೂ ಆಗಿಲ್ಲದೇ ಇರುವುದು ಆತಂಕ ಮೂಡಿಸಿದೆ. ಯಗಚಿ ವ್ಯಾಪ್ತಿಯಲ್ಲೂ ಮಳೆ ಕೊರತೆ: ಹೇಮಾವತಿ ಯೋಜನೆಯ ಜಲಾನಯನ ಪ್ರದೇಶವಾದ ಯಗಚಿ ಜಲಾಶಯ ವ್ಯಾಪ್ತಿಯಲ್ಲೂ ಮಳೆಯಾಗುತ್ತಿಲ್ಲ. ಕಳೆದ ವರ್ಷ ಯಗಚಿ ಜಲಾಶಯ ಯೋಜನೆಯ ಜಲಾನಯ ಪ್ರದೇಶದಲ್ಲಿ ಮಳೆಯ ಕೊರತೆ ಕಾಡಿತು. ಹಾಗಾಗಿ ಹೇಮಾವತಿ ಜಲಾಶಯ ಭರ್ತಿಯಾದರೂ ಕೇಲವ 3.5 ಟಿಂಎಸಿ ಸಂಗ್ರಣಾ ಸಾಮರ್ಥಯದ ಬೇಲೂರು ಸಮೀಪದ ಯಗಚಿ ಜಲಾಶಯ ಭರ್ತಿಯಾಗಿರಲಿಲ್ಲ. ಯಗಚಿ ಜಲಾಶಯಕ್ಕೆ ಒಳ ಹರಿವು ಆರಂಭವಾಗಬೇಕಾದರೆ ಚಿಕ್ಕಮಗಳೂರು ತಾಲೂಕಿನಲ್ಲಿ ಮಳೆ ಆಗಬೇಕು. ಆದರೆ ಕಳೆದ ವರ್ಷ ಮೂಡಿಗೆರೆ, ಸಕಲೇಶಪುರ ತಾಲೂಕಿನಲ್ಲಿ ಸುರಿದಷ್ಟು ಪ್ರಮಾಣದ ಮಳೆ ಚಿಕ್ಕಮಗಳೂರು ತಾಲೂಕಿನಲ್ಲಿ ಸುರಿಯಲಿಲ್ಲ. ಹಾಗಾಗಿ ಯಗಚಿ ಜಲಾಶಯವು ಆಗಸ್ಟ್‌ ಅಂತ್ಯಕ್ಕೆ ಭರ್ತಿಯಾಯಿತು.

ಮುಂಗಾರು ಈಗಷ್ಟೇ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಚುರುಕಾಗಿ ಜಲಾಶಯಕ್ಕೆ ನೀರು ಹರಿದು ಬರಬಹುದು ಎಂಬ ನಿರೀಕ್ಷೆಯಲ್ಲಿ ರೈತರಿದ್ದಾರೆ.

● ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.