ಒತ್ತುವರಿ ಭೂಮಿ ಕಾಫಿ ಬೆಳೆಗಾರರಿಗೇ ಲೀಸ್‌ ಕೊಡಿ

ಹತ್ತು ಎಕರೆ ಒಳಗಿನ ಜಮೀನನ್ನು ಕಾಫಿಬೆಳೆಗಾರರಿಗೆ ನೀಡುವಂತೆ ಶೋಭಾ ಕರಂದ್ಲಾಜೆ ಆಗ್ರಹ

Team Udayavani, Jun 14, 2019, 11:43 AM IST

Udayavani Kannada Newspaper

ಚಿಕ್ಕಮಗಳೂರು:  ಕಾಫಿ ಬೆಳೆಗಾರರು ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ಲೀಸ್‌ ಆಧಾರದ ಮೇಲೆ ಅವರಿಗೇ ಬಿಟ್ಟುಕೊಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಫಿಯನ್ನು ಉದ್ಯಮ ಎಂದು ಪರಿಗಣಿಸಲಾಗುತ್ತದೆ. ಬೇರೆ ಬೇರೆ ಕೈಗಾರಿಕೆಗಳಿಗೆ ಜಮೀನುಗಳನ್ನು ಗುತ್ತಿಗೆ ಆಧಾರದ ಮೇಲೆ ನೀಡಲಾಗುತ್ತದೆ. ಅದೇ ರೀತಿ ಕಾಫಿ ಬೆಳೆಗಾರರಿಗೂ ಭೂಮಿ ನೀಡಿ ಎಂದರು.

ಇದೀಗ ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ಮಾಡುವ ವಿಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಅದೇ ರೀತಿ 10 ಎಕರೆ ಒಳಗೆ ಒತ್ತುವರಿ ಮಾಡಲಾದ ಜಮೀನನ್ನು ಕಾಫಿ ಬೆಳೆಗಾರರಿಗೇ ಗುತ್ತಿಗೆ ಆಧಾರದ ಮೇಲೆ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.

ಹತ್ತು ಎಕರೆ ಒಳಗಿನ ಜಮೀನನ್ನು ಬೆಳೆಗಾರರಿಗೆ ಕೊಡಬೇಕೆಂಬುದು ಬಿಜೆಪಿ ನಿಲುವಾಗಿದೆ. ಈ ಹಿಂದೆಯೂ ಈ ವಿಚಾರವನ್ನು ಹಲವು ಬಾರಿ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರ ಈ ಕುರಿತು ರೂಪುರೇಷೆಗಳನ್ನು ಸಿದ್ಧಪಡಿಸಲಿ. ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ ನಿರ್ಣಯ ಕೈಗೊಳ್ಳಲಿ ಎಂದರು.

ಬುಧವಾರ ಹಾಸನ ಜಿಲ್ಲೆ ಬೇಲೂರಿನಲ್ಲಿ ಕಾಫಿ ಬೆಳೆಗಾರರೊಂದಿಗೆ ಸಭೆ ನಡೆದಿದೆ. ಈ ಸಭೆಯಲ್ಲಿ ಕಾಫಿ ಬೆಳೆಯುವ ಪ್ರದೇಶಗಳ ಸಂಸದರುಗಳಾದ ತಾವು, ಪ್ರಜ್ವಲ್ ರೇವಣ್ಣ, ಪ್ರತಾಪ್‌ ಸಿಂಹ, ಸ್ವತಃ ಕಾಫಿ ಬೆಳೆಗಾರರಾದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಶಾಸಕರುಗಳು ಇದ್ದರು. ಸಭೆಯಲ್ಲಿ ಕಾಫಿ ಬೆಳೆಗಾರರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ತಿಳಿಸಿದರು.

ದೇಶದ ಯಾವುದೇ ರಾಜ್ಯದಲ್ಲಿಯೂ ಮೆಣಸಿಗೆ ಎಪಿಎಂಸಿಯಲ್ಲಿ ತೆರಿಗೆ ವಿಧಿಸುವುದಿಲ್ಲ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಮೆಣಸಿಗೆ ಎಪಿಎಂಸಿಯಲ್ಲಿ ತೆರಿಗೆ ವಿಧಿಸಲಾಗುತ್ತಿದೆ. ಇದರಿಂದಾಗಿ 1 ಕೆಜಿ ಮೆಣಸಿಗೆ 350 ರೂ. ಇದ್ದರೆ 25 ರೂ.ಗಳನ್ನು ಬೆಳೆಗಾರರು ತೆರಿಗೆ ರೂಪದಲ್ಲಿ ಕಟ್ಟುವಂತಾಗಿದೆ. ಕೂಡಲೆ ಎಪಿಎಂಸಿಯಲ್ಲಿ ಮೆಣಸಿಗೆ ವಿಧಿಸಲಾಗುತ್ತಿರುವ ತೆರಿಗೆಯನ್ನು ರದ್ದುಪಡಿಸಬೇಕೆಂಬ ಬೇಡಿಕೆ ಬೆಳೆಗಾರರದ್ದಾಗಿದೆ ಎಂದರು.

ಕಳೆದ ವರ್ಷ ಕೊಡಗಿನಲ್ಲಿ ಅತಿವೃಷ್ಟಿಯಿಂದ ಊರಿಗೆ ಊರೇ ಕೊಚ್ಚಿ ಹೋಗಿದೆ. ಆದರೂ ರಾಜ್ಯ ಸರ್ಕಾರ ಈವರೆಗೂ ಪರಿಹಾರ ನೀಡಿಲ್ಲ. ಎನ್‌.ಡಿ.ಆರ್‌.ಎಫ್‌. ಮತ್ತು ಎಸ್‌.ಡಿ.ಆರ್‌.ಎಫ್‌.ನಿಂದ ಪ್ರತಿ ಹೆಕ್ಟೇರ್‌ಗೆ ಕೇವಲ 35 ಸಾವಿರ ರೂ. ನೀಡಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಲ್ಲಿ 119 ಕೋಟಿ ರೂ.ಗಳು ಇದ್ದು, ಪ್ರತಿ ಹೆಕ್ಟೇರ್‌ಗೆ 18ಲಕ್ಷ ರೂ. ಪರಿಹಾರ ನೀಡಬೇಕೆಂದು ಬೆಳೆಗಾರರು ಒತ್ತಾಯಿಸಿದ್ದಾರೆ.

9 ವರ್ಷಗಳ ಹಿಂದೆ ತಾವು ಇಂದನ ಸಚಿವರಾಗಿದ್ದಾಗ ಪಡುಬಿದ್ರಿಯಿಂದ ಶಾಂತಿಗ್ರಾಮದವರೆಗೆ ವಿದ್ಯುತ್‌ ಲೈನ್‌ ಎಳೆಸಿದ್ದಾಗ ಪ್ರತಿ ಹೆಕ್ಟೇರ್‌ ಜಮೀನಿಗೆ ಅಂದೇ 17.50 ಲಕ್ಷ ರೂ. ಪರಿಹಾರ ನೀಡಿದ್ದೆ. ಆಗಲೇ ಅಷ್ಟು ಪರಿಹಾರ ನೀಡಿರುವಾಗ ಈಗ ರಾಜ್ಯ ಸರ್ಕಾರಕ್ಕೆ ಪರಿಹಾರ ನೀಡಲು ಕಷ್ಟವೇನು ಎಂದು ಪ್ರಶ್ನಿಸಿದರು.

ಕಾಫಿ ಮಂಡಳಿ ಕಾರ್ಯದರ್ಶಿಗಳು ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂಬ ದೂರು ಹೆಚ್ಚಾಗಿದೆ. ಈ ಹಿಂದೆಯೇ ಅವರನ್ನು ಬದಲಿಸಲು ಉದ್ದೇಶಿಸಲಾಗಿತ್ತು. ಆದರೆ ಕೆಲವೊಂದು ಕಾರಣಗಳಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಅವರು ರಾಜ್ಯ ಸರ್ಕಾರದ ಅಧಿಕಾರಿಯಾಗಿದ್ದಾರೆ. ಕೂಡಲೆ ಅವರನ್ನು ರಾಜ್ಯಕ್ಕೆ ವಾಪಸ್‌ ಕರೆಸಿಕೊಳ್ಳುವಂತೆ ರಾಜ್ಯ ಸರ್ಕಾರವನ್ನು ಕೋರಲಾಗುವುದು ಎಂದರು.

ಈ ಮೂರು ಅಂಶಗಳು ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟದ್ದಾಗಿರುವುದರಿಂದ ನಾಳೆ ಅಥವಾ ನಾಡಿದ್ದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮುಖ್ಯಮಂತ್ರಿಗಳ ಸಮಯ ಪಡೆದುಕೊಳ್ಳಲು ತಿಳಿಸಲಾಗಿದೆ ಎಂದರು.

ಉದ್ಯೋಗ ಖಾತ್ರಿ ಯೋಜನೆ ವ್ಯಾಪ್ತಿಯಿಂದ ಕಾಫಿ ತೋಟಗಳನ್ನು ಹೊರಗಿಡಲಾಗಿದೆ. ಕಾಫಿ ತೋಟಗಳನ್ನೂ ಸೇರಿಸಿದರೆ ಸಣ್ಣ ಬೆಳೆಗಾರರಿಗೆ ಅನುಕೂಲವಾಗುವುದರಿಂದ ಈ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗುವುದು. ಕಾಫಿಗೆ ಚಿಕೋರಿಯನ್ನು ಶೇ.49 ರಷ್ಟು ಸೇರಿಸಲು ಅವಕಾಶವಿದ್ದು, ಇದನ್ನು ಶೇ.28ಕ್ಕೆ ಇಳಿಸುವಂತೆ ಕಾಫಿ ಬೆಳೆಗಾರರು ಕೋರಿದ್ದಾರೆ. ಈ ಬಗ್ಗೆ ಎಫ್‌.ಎಸ್‌.ಎಸ್‌.ಎ.ಐ.ಗೆ ಪತ್ರ ಬರೆದು ಪರಿಶೀಲಿಸಲು ಕೋರಲಾಗುವುದು ಎಂದು ಹೇಳಿದರು.

ಕಳೆದ ಕೇಂದ್ರ ಸರ್ಕಾರವು ಮೆಣಸಿನ ಆಮದಿನ ಮೇಲೆ ತೆರಿಗೆಯನ್ನು ಹೆಚ್ಚಿಸಿದ್ದರಿಂದಾಗಿ ಮೆಣಸಿನ ಬೆಲೆ ಸ್ಥಿರವಾಗಿತ್ತು. ಅಕ್ರಮವಾಗಿ ದೇಶಕ್ಕೆ ಆಮದಾಗುವ ಮೆಣಸನ್ನು ತಡೆಗಟ್ಟಬೇಕಾಗಿದೆ. ಈ ವಿಚಾರವಾಗಿ ಗೃಹಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು. ಈ ಹಿಂದಿನ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೇ ಈಗ ಹಣಕಾಸು ಸಚಿವರಾಗಿದ್ದಾರೆ. ಅವರಿಗೆ ಕಾಫಿ ಸಮಸ್ಯೆ ಕುರಿತು ಹೆಚ್ಚಿನ ಮಾಹಿತಿ ಇದೆ. ಕೇಂದ್ರದಿಂದ ಕಾಫಿ ಬೆಳೆಗಾರರಿಗೆ ಆಗಬೇಕಿರುವ ಕೆಲಸದ ಕುರಿತು ಚರ್ಚಿಸಲು ಕಾಫಿ ಬೆಳೆಗಾರರ ನಿಯೋಗವನ್ನು ಜುಲೈ ತಿಂಗಳಲ್ಲಿ ಕರೆದೋಯ್ಯಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಕುರಿತು ಮಾತನಾಡಿದ ಅವರು, ಕಳೆದ ಅವಧಿಯಲ್ಲಿ ಜಿಲ್ಲೆಗೆ ಹಲವು ಕೆಲಸಗಳನ್ನು ಮಾಡಲಾಗಿದೆ. ನಗರಕ್ಕೆ ಕೇಂದ್ರೀಯ ವಿದ್ಯಾಲಯವನ್ನು ಮಂಜೂರು ಮಾಡಲಾಗಿದೆ. ಅದರ ಕಟ್ಟಡ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿಸಲಾಗುವುದು. ಇ.ಎಸ್‌.ಐ. ಡಿಸ್ಪೆನ್ಸರಿಯನ್ನು ಮಂಜೂರು ಮಾಡಲಾಗಿದೆ. ಸುಸಜ್ಜಿತ ಆಸ್ಪತ್ರೆ ಮಂಜೂರಾತಿಗೆ ಯತ್ನಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ರೈಲ್ವೆ ಮಾರ್ಗಗಳನ್ನು ಡಬಲ್ ಟ್ರಾಕ್‌ ಮಾಡಬೇಕಿದೆ. ನಗರಿಂದ ಬೆಂಗಳೂರಿಗೆ ತೆರಳುತ್ತಿರುವ ರೈಲಿನ ಸಮಯ ಕಡಿಮೆಗೊಳಿಸುವಂತೆ ಒತ್ತಡವಿದೆ. ಅದರೊಂದಿಗೆ ಹೊಸ ರೈಲನ್ನು ಓಡಿಸಲು ಕೂಡ ಪ್ರಯತ್ನಿಸಲಾಗುವುದು ಎಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಡಿ.ಎನ್‌. ಜೀವರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.