ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ: ಶಾಸಕ ಕಂದಕೂರ
Team Udayavani, Jun 14, 2019, 4:24 PM IST
ಗುರುಮಠಕಲ್: ಶಾಸಕ ನಾಗನಗೌಡ ಕಂದಕೂರ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಗುರುಮಠಕಲ್: ಪ್ರಗತಿ ಪರಿಶೀಲನಾ ಸಭೆಗೆ ಹಾಜರಾಗದೆ ಇರುವ ಅಧಿಕಾರಿಗಳಿಗೆ ಕೂಡಲೇ ನೋಟಿಸ್ ನೀಡಿ ಕ್ರಮ ಕೈಗೊಳ್ಳುವಂತೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ತಾಪಂ ಇಒ ಪ್ರಭಯ್ಯ ಸ್ವಾಮಿ ಹಿರೇಮಠ ಅವರಿಗೆ ಸೂಚನೆ ನೀಡಿದರು.
ಪಟ್ಟಣದಲ್ಲಿ ಗುರುವಾರ ಜರುಗಿದ ಗುರುಮಠಕಲ್ ತಾಲೂಕು ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಸಭೆಯಲ್ಲಿ ಗೈರು ಹಾಜರಾದ ಇಲಾಖೆ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾದರು.
ತಾಲೂಕು ವ್ಯಾಪ್ತಿಯಲ್ಲಿ ಜರುಗುತ್ತಿರುವ ಪ್ರಗತಿ ಕಾಮಗಾರಿಗಳ ಮಾಹಿತಿ ಮತ್ತು ಈಗಿನ ಸ್ಥಿತಿಗತಿ ಕುರಿತು ಮಾಹಿತಿ ನೀಡಬೇಕಾದ ಇಲಾಖೆಗಳ ಅಧಿಕಾರಿಗಳು ಹೀಗೆ ಬೇಜವಾಬ್ದಾರಿಯಿಂದ ಸಭೆಗೆ ಹಾಜರಾಗದೆ ಹೋದರೆ ಹೇಗೆ? ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶಗೊಂಡರು.
ಮುಂದಿನ ಸಭೆಯಲ್ಲಿ ಎಲ್ಲಾ ಇಲಾಖೆಗಳ ಸಂಬಂಧಿತ ಅಧಿಕಾರಿಗಳು ಗೈರಾದರೆ ಸಹಿಸುವುದಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಪ್ರಗತಿಯಲ್ಲಿರುವ ಕಾಮಗಾರಿಗಳ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.
ತಾಲೂಕು ಪಂಚಾಯತಿ ಅಧ್ಯಕ್ಷ ಶ್ರೀಮತಿ ಹಣಮ್ಮವ, ಉಪಾಧ್ಯಕ್ಷರಾದ ರಾಮಲಿಂಗಮ್ಮ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ತಿಮ್ಮಣ್ಣ ಸೇರಿದಂತೆ ವಿವಿಧ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Ullala: ತ್ರಿವಳಿ ತಲಾಖ್ ಪ್ರಕರಣ: ಆರೋಪಿಯ ಸೆರೆ
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.