ಕರಾಟೆ ಪಟುಗಳಿಗೆ ಬೇಕಿದೆ ಪ್ರೋತ್ಸಾಹ

ಅರ್ಹರಿಗೆ ತಲುಪದ ಸರ್ಕಾರದ ಪ್ರೋತ್ಸಾಹ ಧನ •ಪ್ರತಿಭಾವಂತರನ್ನು ಗುರುತಿಸುವ ಕೆಲಸವಾಗಲಿ

Team Udayavani, Jun 15, 2019, 10:46 AM IST

15-June-7

ಮುದ್ದೇಬಿಹಾಳ: ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ್ದ ತಾಳಿಕೋಟೆ ಪಟ್ಟಣದ ಕರಾಟೆ ಕ್ರೀಡಾಪಟು ಸಚಿನ ನಾಯಕ. ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ್ದ ಪ್ರಮಾಣ ಪತ್ರ.

ಮುದ್ದೇಬಿಹಾಳ: ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಆತ್ಮಸ್ಥೈರ್ಯಕ್ಕಾಗಿ ಕರಾಟೆ ತರಬೇತಿ ಪ್ರಾರಂಭ ಮಾಡಿದ್ದ ಸರಕಾರ ಮಧ್ಯದಲ್ಲಿಯೇ ಯೋಜನೆಗೆ ಬ್ರೇಕ್‌ ಹಾಕಿತು. ಅಲ್ಲದೇ ಕ್ರೀಡಾ ಇಲಾಖೆ ಕ್ರೀಡಾ ಪ್ರೋತ್ಸಾಹಧನ ನೀಡುವಲ್ಲಿಯೂ ಕರಾಟೆ ಕ್ರೀಡೆಗೆ ತಾರತಮ್ಯ ಮಾಡುತ್ತಿದ್ದು ವಿದ್ಯಾರ್ಥಿಗಳೊಂದಿಗೆ ಕರಾಟೆ ತರಬೇತುದಾರರೂ ಪರದಾಡುವಂತಾಗಿದೆ.

ಹೌದು, ಇತ್ತೀಚಿಗಷ್ಟೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯದ 175 ಸರಕಾರಿ ಶಾಲೆಗಳಲ್ಲಿನ ಉತ್ತಮ ಕ್ರೀಡಾಪಟುಗಳನ್ನು ಹೊಂದಿರುವ ಶಾಲೆಯನ್ನು ಗುರುತಿಸಿ ಶಾಲೆಗೆ ಪ್ರೋತ್ಸಾಹ ಧನ ನೀಡಲು ಆದೇಶ ಹೊರಡಿಸಿದೆ. ಆದರೆ ಉತ್ತಮ ಕ್ರೀಡಾಪಟು ಹೊಂದಿದ ಶಾಲೆಯನ್ನು ಗುರುತಿಸುವಲ್ಲಿ ಹಾಗೂ ಸಮರ್ಪಕವಾಗಿ ಪ್ರೋತ್ಸಾಹ ಧನ ವಿತರಿಸುವಲ್ಲಿ ವಿಫಲಗೊಂಡಿದೆ.

ಯಾರದೋ ಸಾಧನೆಗೆ ಯಾರಿಗೋ ಪ್ರ್ರೋತ್ಸಾಹ: ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಆತ್ಮಸ್ಥೈರ್ಯ ವೃದ್ಧಿಸಲು ಕರಾಟೆ ಕ್ರೀಡೆಯನ್ನು ಕಡ್ಡಾಯಗೊಳಿಸಿ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಒದಗಿಸಿತ್ತು. ತರಬೇತಿಗಾಗಿ ರಾಜ್ಯದ ಕರಾಟೆ ಸಂಘಗಳನ್ನು ಗುರುತಿಸಿ ಅಲ್ಲಿನ ತರಬೇತುದಾರರಿಗೆ ಗೌರವಧನ ನೀಡಿ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲು ಆದೇಶಿಸಿತ್ತು. ಆದರೆ ಕ್ರೀಡಾ ಇಲಾಖೆ ಸದ್ಯಕ್ಕೆ ಬಿಡುಗಡೆ ಮಾಡುತ್ತಿರುವ ಪ್ರೋತ್ಸಾಹಧನ ಯಾವುದೇ ಕ್ರೀಡಾಪಟುವಿಗೆ ಅಥವಾ ತರಬೇತುದಾರರಿಗೆ ಸಿಗುವುದಿಲ್ಲ. ಎಲ್ಲ ಪ್ರೋತ್ಸಾಹಧನ ಶಾಲೆಯ ಎಸ್‌ಡಿಎಂಸಿ ಹಾಗೂ ಆಯಾ ಶಾಲಾ ದೈಹಿಕ ಶಿಕ್ಷಕರಿಗೆ ತಲಪುವಂತೆ ಆದೇಶಿಸಲಾಗಿದ್ದು ಯಾರದೋ ಸಾಧನೆಗೆ ಯಾರಿಗೋ ಪ್ರೋತ್ಸಾಹ ನೀಡಿದಂತಾಗಿದೆ.

ಕರಾಟೆ ಕ್ರೀಡೆಗಿಲ್ಲ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆ: ಕ್ರೀಡಾ ಇಲಾಖೆ ನಮ್ಮೂರ ಶಾಲೆಗೆ ನಮ್ಮ ಯುವಜನರು ಎಂಬ ಯೋಜನೆಯಡಿಯಲ್ಲಿ ಉತ್ತಮ ಕ್ರೀಡಾಪಟುಗಳನ್ನು ಹೊಂದಿದ ಶಾಲೆಗೆ ಪ್ರೋತ್ಸಾಹಧನ ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಇಲಾಖೆಯವರು ಎಲ್ಲ ಕ್ರೀಡೆಗಳನ್ನು ಪರಿಗಣಿಸಿದಂತೆ ಕರಾಟೆ ಕ್ರೀಡೆಯನ್ನು ಪರಿಗಣಿಸುತ್ತಿಲ್ಲ. ಇದರಿಂದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದರೂ ಅವರಿಗೆ ಇಲ್ಲಿವರೆಗೂ ಪ್ರೋತ್ಸಾಹ ಸಿಗುತ್ತಿಲ್ಲ. ಅಧಿಕಾರಿಗಳು ಕರಾಟೆ ಕ್ರೀಡಾಪಟುಗಳನ್ನು ಗುರುತಿಸುವಂತಾಗಬೇಕು ಎನ್ನುವುದು ಪ್ರಜ್ಞಾವಂತ ನಾಗರಿಕರ ಆಗ್ರಹವಾಗಿದೆ.

ವಿಜಯಪುರ ಜಿಲ್ಲೆಯಿಂದ ಪ್ರಥಮ ಬಾರಿಗೆ ಆಯ್ಕೆಯಾದ ಕ್ರಿಡಾಪಟುಗಳು: 2018-19ಸಾಲಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗದಗ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆಯಲ್ಲಿ ವಿಜಯಪುರ ಜಿಲ್ಲೆ ವಿಜಯಪುರ ತಾಲೂಕಿನ ಕಿರಣ ಕಾಂಂಡಕಿ 40ಕೆಜಿ ವಿಭಾಗದಲ್ಲಿ ಹಾಗೂ ಮುದ್ದೇಬಿಹಾಳ ತಾಲೂಕಿನ ತಾಳಿಕೋಟಿ ಪಟ್ಟಣದ ಸಚಿನ ನಾಯಕ 66 ಕೆಜಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸ್ಕೂಲ್ ಗೇಮ್ಸ್‌ ಫೇಡರೇಷನ್‌ ಆಫ್‌ ಇಂಡಿಯಾ (ಎಸ್‌ಜಿಎಫ್‌ಐ) ನೇತೃತ್ವದಲ್ಲಿ ಮಧ್ಯಪ್ರದೇಶದ ಇಂದೋರನಲ್ಲಿ ನಡೆದ 64ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಹೆಮ್ಮೆಯ ವಿಷಯವಾಗಿದೆ. ಇಂತಹ ವಿದ್ಯಾರ್ಥಿಗಳನ್ನು ಕ್ರೀಡಾ ಇಲಾಖೆ ಅಧಿಕಾರಿಗಳು ಗುರುತಿಸಿ ಪ್ರೋತ್ಸಾಹಿಸಬೇಕಾಗಿದೆ.

2018-19ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ ಪದಕ ಪಡೆದು ರಾಷ್ಟ್ರಮಟ್ಟದ ಕರಾಟೆ ಕ್ರೀಡೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ವರದಿ ಪಡೆದುಕೊಂಡು ಅವರಿಗೆ ಇಲಾಖೆಯಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ಮಾಡುತ್ತೇನೆ. ಸಂಬಂಧಪಟ್ಟ ಕ್ರೀಡಾಪಟುಗಳು ಕ್ರೀಡಾ ಇಲಾಖೆ ಕಾರ್ಯಾಲಯಕ್ಕೆ ಭೇಟಿ ನೀಡಿ ಮಾಹಿತಿ ನೀಡಬಹುದು.
•ಎಸ್‌.ಜಿ. ಲೋಣಿ,
ಸಹಾಯಕ ನಿರ್ದೇಶಕರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಜಯಪುರ

ನಾವು ಕರಾಟೆ ಸ್ಪರ್ಧೆಗಳಲ್ಲಿ ಭಾಗವಹಿಸುವ ಸಮಯದಲ್ಲಿ ಸರಕಾರದಿಂದ ಯಾವುದೇ ಸೌಲಭ್ಯಗಳು ಬರುತ್ತಿರಲಿಲ್ಲ. ಆದರೆ ಈಗ ಸರಕಾರವು ಕ್ರೀಡೆಗೆ ಸಾಕಷ್ಟು ಮಹತ್ವ ನೀಡಿದ್ದು ಕರಾಟೆ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕು.
ಎಂ.ಎಲ್. ಚೌಧರಿ
ಹಿರಿಯ ಕರಾಟೆ ಶಿಕ್ಷಕರು, ಇಂಡಿ

ಮೊದಲಿಂದಲೂ ನನ್ನ ಮಗನಿಗೆ ಕ್ರೀಡೆಯಲ್ಲಿ ಆಸಕ್ತನಾಗಿದ್ದ. ಅದರಂತೆ ಕರಾಟೆ ಕ್ರೀಡೆಯಲ್ಲಿ ಅವನು ಶ್ರಮಪಟ್ಟು ಭಾಗವಹಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ್ದಾನೆ. ಕಡು ಬಡತನದಲ್ಲಿಯೂ ಮಗನ ಇಚ್ಛೆ ಈಡೇರಿಸಬೇಕೆಂದು ಹೆಚ್ಚಿನ ತರಬೇತಿ ಕೊಡಸಿದ್ದೇನೆ. ಆದರೆ ಸರಕಾರದಿಂದ ಕ್ರೀಡೆಗೆ ಸಾಕಷ್ಟು ಸೌಲಭ್ಯ ಇದೆ ಎನ್ನುತ್ತಿದ್ದಾರೆ. ಯಾವ ಸೌಲಭ್ಯವೂ ನಮಗೆ ಸಿಕ್ಕಿಲ್ಲ.
ವೆಂಕೋಬಾ ನಾಯ್ಕೋಡಿ
ರಾಜ್ಯಮಟ್ಟದ ವಿಜೇತ ಸಚಿನ ತಂದೆ

ಟಾಪ್ ನ್ಯೂಸ್

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Modi-GUJ

Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-udupi

Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

6

Gangolli: ಸಮುದ್ರ ತೀರದಲ್ಲಿ ಜಾನುವಾರುಗಳ ಕಳೇಬರ ಪತ್ತೆ

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

3

Chandigarh: ಕೋಟೆ ಕಟ್ಟಿದ ಗುತ್ತಿಗೆದಾರನಿಗೆ ರೋಲೆಕ್ಸ್‌ ವಾಚ್‌ ಉಡುಗೊರೆ

2

Pune: 300ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿ ಟೆಸ್ಲಾದಲ್ಲಿ ಉದ್ಯೋಗ ಪಡೆದ

1

Hyderabad: ಈರುಳ್ಳಿ ಬಾಂಬ್‌ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ

2-udupi

Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.