ಕನಿಷ್ಠ ಮಾಸಿಕ ಗೌರವಧನ 12 ಸಾವಿರ ನಿಗದಿಗೊಳಿಸಿ


Team Udayavani, Jun 15, 2019, 12:10 PM IST

mandya-tdy-2..

ಮಂಡ್ಯ: ಕನಿಷ್ಠ ಮಾಸಿಕ ಗೌರವಧನ 12 ಸಾವಿರ ರೂ. ನಿಗದಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಳಿಗೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾವಣೆಗೊಂಡ ಕಾರ್ಯಕರ್ತೆಯರು, ಬಳಿಕ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದರು.

ಆರೋಗ್ಯ ಇಲಾಖೆಯಡಿ ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಳ್ಳಿ, ನಗರದ ಬೇರುಮಟ್ಟದಲ್ಲಿ ಹಲವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ, ಪ್ರತಿ ತಿಂಗಳು ವೇತನವಿಲ್ಲದೇ ಪರದಾಡುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆಗಳು: ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ಪ್ರೋತ್ಸಾಹ ಧನ ಸೇರಿಸಿ ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಗೊಳಿಸಬೇಕು. 9 ತಿಂಗಳಿನಿಂದ ಬಾಕಿಯಿರುವ ಎಂಸಿಟಿಎಸ್‌ ಸೇವೆಗಳ ಪ್ರೋತ್ಸಾಹ ಧನವನ್ನು ಪ್ರತಿ ಕಾರ್ಯಕರ್ತೆಯರಿಗೆ 3 ಸಾವಿರ ರೂ. ನೀಡಬೇಕು. ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ನಿವೃತ್ತಿಯಾದವರಿಗೆ ಮಾಸಿಕ ಪಿಂಚಣಿ ಜತೆಗೆ ನಿವೃತ್ತಿ ಪರಿಹಾರ ನೀಡಬೇಕು. ಪ್ರಧಾನಮಂತ್ರಿ ಜೀವನಜ್ಯೋತಿ ಯೋಜನೆ ಮತ್ತು ಸುರಕ್ಷಾ ಬಿಮಾ ಯೋಜನೆ ಜಾರಿಗೊಳಿಸಬೇಕು. ಹೆರಿಗೆ ರಜೆ ಜತೆಗೆ ಮಾಸಿಕ ಗೌರವಧನ ನೀಡುವುದೂ ಸೇರಿದಂತೆ 13 ಬೇಡಿಕೆಗಳು ಈಡೇರಿಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಲಹೆಗಾರ್ತಿ ಟಿ.ಸಿ.ರಮ್ಯಾ, ಜಿಲ್ಲಾಧ್ಯಕ್ಷೆ ಪುಷ್ಪಾ, ಕಾರ್ಯದರ್ಶಿ ಶೋಭಾ ಇತರರಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.