21ರಂದು ಜಿಲ್ಲಾಡಳಿತದಿಂದ ಯೋಗ ದಿನಾಚರಣೆ
Team Udayavani, Jun 15, 2019, 1:24 PM IST
ಧಾರವಾಡ: ಡಿಸಿ ಕಚೇರಿ ಸಭಾಂಗಣದಲ್ಲಿ ಜರುಗಿದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯಲ್ಲಿ ಡಿಸಿ ದೀಪಾ ಚೋಳನ್ ಮಾತನಾಡಿದರು.
ಧಾರವಾಡ: ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಜೂ. 20ರಂದು ಯೋಗ ಜಾಗೃತಿ ನಡಿಗೆ ಹಾಗೂ 21ರಂದು ಯೋಗಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿ ದೀಪಾ ಚೋಳನ್ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಗ ಜಾಗೃತಿ ನಡಿಗೆ ಹಾಗೂ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ನಗರದ ಶಾಲಾ-ಕಾಲೇಜು, ಸರ್ಕಾರಿ ಹಾಸ್ಟೆಲ್ಗಳ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು. ಮಳೆಗಾಲ ಆರಂಭವಾಗಿರುವುದರಿಂದ ಒಳಾಂಗಣ ಕ್ರೀಡಾಂಗಣವನ್ನೂ ಮುನ್ನೆಚ್ಚರಿಕೆಯಾಗಿ ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಉಪಾಹಾರ, ಕುಡಿಯುವ ನೀರು ಮತ್ತಿತರ ಮೂಲ ೌಕರ್ಯ ಕಲ್ಪಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ| ಸಂಗಮೇಶ ಕಲಹಾಳ ಮಾತನಾಡಿ, 20ರಂದು ಬೆಳಗ್ಗೆ 8 ಗಂಟೆಗೆ ಡಾ| ಆರ್.ಎನ್. ಶೆಟ್ಟಿ ಕ್ರೀಡಾಂಗಣದಿಂದ ಯೋಗ ಜಾಗೃತಿ ನಡಿಗೆ ಆರಂಭವಾಗಲಿದೆ. ಜ್ಯುಬಿಲಿ ವೃತ್ತ, ಮಹಾನಗರಪಾಲಿಕೆ, ಜಿಲ್ಲಾಸ್ಪತ್ರೆ, ಜಿಲ್ಲಾ ಆಯುರ್ವೇದ ಆಸ್ಪತ್ರೆ, ಕೊಂಡವಾಡ ಓಣಿ, ವಿಜಯಾ ರಸ್ತೆ, ಸಿಬಿಟಿ, ಸ್ವಾಮಿ ವಿವೇಕಾನಂದ ವೃತ್ತ, ಹಳೆ ಬಸ್ ನಿಲ್ದಾಣ ಮಾರ್ಗಗಳಲ್ಲಿ ಸಂಚರಿಸಿ ಪುನಃ ಕ್ರೀಡಾಂಗಣ ತಲುಪಲಾಗುವುದು ಎಂದರು.
21ರಂದು ಬೆಳಗ್ಗೆ 6:45 ಗಂಟೆಗೆ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಬಳಿಕ ಬೆಳಗ್ಗೆ 7ರಿಂದ 8 ಗಂಟೆಯವರೆಗೆ ಯೋಗಾಭ್ಯಾಸ ಕಾರ್ಯಕ್ರಮ ಜರುಗಲಿದೆ. ಯೋಗಾಭ್ಯಾಸಕ್ಕೆ ಬರುವವರು ಸರಳವಾದ ಉಡುಪು ಧರಿಸಿ ಯೋಗಾ ಮ್ಯಾಟ್ ಅಥವಾ ಜಮಖಾನೆಯೊಂದಿಗೆ ಆಗಮಿಸಬೇಕು ಎಂದು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಜಿಪಂ ಸ್ವಚ್ಛಭಾರತ ಮಿಷನ್ ಸಹಾಯಕ ನಿರ್ದೇಶಕ ಗಿರೀಶ ಕೋರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ಡಾ| ವಿ.ಡಿ. ಕರ್ಪೂರಮಠ, ಜಿಲ್ಲಾ ಆಯುಷ್ ಫೆಡರೇಷನ್ ಅಧ್ಯಕ್ಷ ಡಾ| ರವೀಂದ್ರ, ಆಯುಷ್ ಇಲಾಖೆ ಸಹಾಯಕ ಆಡಳಿತಾಧಿಕಾರಿ ಅಶೋಕ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.