“ಮನದ ಸ್ವಚ್ಛತೆಗೂ ಜಾಗೃತಿ ಮೂಡಲಿ’
ಕ್ಲಸ್ಟರ್ ಮಟ್ಟದ ಸ್ವಚ್ಛಮೇವ ಜಯತೇ
Team Udayavani, Jun 16, 2019, 5:38 AM IST
ಹಳೆಯಂಗಡಿ: ಸುಂದರ ಪರಿಸರ ಹಾಗೂ ಸ್ವಚ್ಛ ಗಾಳಿಯೊಂದಿಗೆ ನಮ್ಮ ನಮ್ಮ ಮನದ ಸ್ವಚ್ಛತೆಗೂ ಜಾಗೃತಿ ಮೂಡಿಸಬೇಕು ಎಂದು ಹಳೆಯಂಗಡಿ ಸಿಎಸ್‌ಐ ಅಮ್ಮನ್ ಮೇಮೋರಿಯಲ್ ಚರ್ಚ್‌ನ ಸಭಾಪಾಲಕ ವ| ವಿನಯಲಾಲ್ ಬಂಗೇರ ಹೇಳಿದರು.
ಯುಬಿಎಂಸಿ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಸ್ವಚ್ಛಮೇವ ಜಯತೇ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಸಾಮಾಜಿಕ ಕಾರ್ಯಕರ್ತೆ ನಂದಾ ಪಾಯಸ್ ಮಾತನಾಡಿದರು.ಕಾರ್ಯಕ್ರಮವನ್ನು ದ. ಕ. ಜಿ. ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ಉ.ವ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಪಡುಪ ಣಂಬೂರು ಸಮೂಹ ಸಂಪನ್ಮೂಲ ಕೇಂದ್ರದ ಸಹಕಾರದಲ್ಲಿ ಸಂಯೋಜಿಸಲಾಗಿತ್ತು.ಸಮೂಹ ಸಂಪನ್ಮೂಲ ಕೇಂದ್ರದ ಮುಖ್ಯಸ್ಥೆ ಕುಸುಮಾ ಆರ್. ಅವರು ಮಕ್ಕಳಿಗೆ ಸ್ವಚ್ಛ ಭಾರತದ ಪರಿಕಲ್ಪನೆಯ ಸ್ವಚ್ಛಮೇವ ಜಯತೇ ಪ್ರತಿಜ್ಞಾ ವಿಧಿ ಭೋಧಿಸಿದರು.
ತೀರ್ಪುಗಾರರಾಗಿ ದಯಾಕ್ಷಿ, ಪ್ರಮೀಳಾ, ನಳಿನಾಕ್ಷಿ ಸಹಕರಿಸಿದ್ದರು. ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಕಾಂಬ್ಳಿ ಸ್ವಾಗತಿಸಿದರು, ಸಹ ಶಿಕ್ಷಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.