ಐಎಂಎ ಪ್ರಕರಣ: ಮನ್ಸೂರ್ನನ್ನು ತಕ್ಷಣ ಬಂಧಿಸಿ
Team Udayavani, Jun 16, 2019, 3:05 AM IST
ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ವಿಧಾನಸೌಧದಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆಸಿ, ಆರೋಪಿ ಮನ್ಸೂರ್ ಎಲ್ಲಿದ್ದರೂ ಬಂಧಿಸುವಂತೆ ಸೂಚನೆ ನೀಡಿದರು. ಪ್ರಕರಣದ ಸ್ವರೂಪ, ವಂಚನೆಯ ಅಂದಾಜು ಮೊತ್ತ, ದೂರುದಾರರ ಸಂಖ್ಯೆ, ಮಾಲೀಕ ಮನ್ಸೂರ್ ಪತ್ತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.
ನಂತರ ಸುದ್ದಿಗಾರರ ಜತೆ ಮಾತನಾಡಿದ ಎಂ.ಬಿ.ಪಾಟೀಲ್, ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲಾಗಿದೆ. ನಿರ್ದೇಶಕರ ವಿಚಾರಣೆ ನಡೆಯುತ್ತಿದೆ. ಆರೋಪಿ ಮನ್ಸೂರ್ ಎಲ್ಲೇ ಇರಲಿ ಬಂಧಿಸುವಂತೆ ಸೂಚಿಸಿದ್ದೇನೆ. ಆಸ್ತಿ-ಪಾಸ್ತಿ ಜಫ್ತಿಗೂ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಹಣಕಾಸು ವಿಚಾರಗಳು ಪೊಲೀಸ್ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ವಂಚನೆ ಆದಾಗ ಮಾತ್ರ ನಮ್ಮ ಇಲಾಖೆ ವ್ಯಾಪ್ತಿಗೆ ಬರುತ್ತದೆ. ವಂಚನೆ ಆದಾಗ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಪೊಲೀಸರಿಗೆ ಇಲ್ಲ. ಹೀಗಾಗಿ, ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಎಲ್ಲ ಇಲಾಖೆಗಳ ಸಹಕಾರ ಪಡೆಯಲಾಗುವುದು ಎಂದು ತಿಳಿಸಿದರು.
ತಮಿಳುನಾಡಿನಲ್ಲಿ ವಂಚನೆ ಪ್ರಕರಣಗಳಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಪೊಲೀಸರಿಗೆ ಇದೆ. ಅದೇ ರೀತಿ ನಮ್ಮಲ್ಲೂ ಕಾನೂನು ರೂಪಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.