ಬಿಎಸ್ಎನ್ಎಲ್ಗಾಗಿ ಮರಗೋಡು ಗ್ರಾಮಸ್ಥರಿಂದ ಹಣ ಸಂಗ್ರಹ
Team Udayavani, Jun 16, 2019, 6:00 AM IST
ಮರಗೋಡು : ದಿನದಿಂದ ದಿನಕ್ಕೆ ಗ್ರಾಹಕರಿಂದ ದೂರವಾಗುತ್ತಿರುವ ಕೇಂದ್ರ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವಿರುದ್ಧ ಮರಗೋಡು ಗ್ರಾಮಸ್ಥರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಬಿಎಸ್ಎನ್ಎಲ್ ಕೇಂದ್ರದ ಜನರೇಟರ್ಗಾಗಿ ಮರಗೋಡು ಗ್ರಾಮ ಸ್ಥರೆ ಭಿಕ್ಷೆ ಬೇಡಿ ಬಂದ ಹಣದಿಂದ ಡೀಸೆಲ್ ಖರೀದಿಸಿ ನೀಡಿದ್ದಾರೆ.
ಮರಗೋಡು ಗ್ರಾಮ ಪಂಚಾಯತ್ ಕಟ್ಟಡದಲ್ಲಿರುವ ಬಿಎಸ್ಎನ್ಎಲ್ ಕೇಂದ್ರ, ವಿದ್ಯುತ್ ಕೈಕೊಟ್ಟಾಗಲೆಲ್ಲಾ ತನ್ನ ಸೇವೆ ಸ್ಥಗಿತಗೊಳಿಸುತ್ತದೆ. ಈ ಸಂದರ್ಭ ಪರ್ಯಾಯ ವ್ಯವಸ್ಥೆಯಾಗಿ ಜನರೇಟರ್ ಇದ್ದರೂ ಸಹ ಇದಕ್ಕೆ ಡೀಸೆಲ್ ಪೂರೈಸಲು ಅಧಿಕಾರಿಗಳಿಂದ ಹಣ ದೊರಕುತ್ತಿಲ್ಲವಂತೆ. ಮರಗೋಡು ಗ್ರಾಮದಲ್ಲಿ ಕಳೆದ ನಾಲ್ಕೆçದು ದಿನಗಳಿಂದ ವಿದ್ಯುತ್ ಕೈಕೊಟ್ಟಿದ್ದು ಬಿಎಸ್ಎನ್ಎಲ್ ಸೇವೆ ಆಗಿಂದ್ದಾಗೆ ಸ್ಥಗಿತವಾಗುತ್ತಿದೆ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ಶುಕ್ರವಾರದಂದು ಬೆಳಗ್ಗೆ ಗ್ರಾಮ ಕೇಂದ್ರದಲ್ಲಿ ಸೇರಿ ಸಾರ್ವಜನಿಕರಿಂದ, ವಾಹನ ಚಾಲಕರಿಂದ ಮತ್ತು ಅಂಗಡಿ ಮಳಿಗೆಗಳಿಂದ ಹಣ ಸಂಗ್ರಹಿಸಿ , ಸಂಗ್ರಹವಾದ 2800 ರೂಪಾ ಯಿಗಳಿಗೆ 35 ಲೀಟರ್ ಡೀಸೆಲ್ ಖರೀದಿಸಿ ಗ್ರಾಮಸ್ಥರು ಬಿಎಸ್ಎನ್ಎಲ್ ಕೇಂದ್ರಕ್ಕೆ ನೀಡಿದ್ದಾರೆ.
ಈ ಸಂದರ್ಭ ಮಾತನಾಡಿದ ಆಟೋ ಚಾಲಕರ ಸಂಘದ ಅಧ್ಯಕ್ಷ ತಮ್ಮುಣಿ, ಮರಗೋಡಿನಲ್ಲಿ 30 ಆಟೋ ರಿûಾಗಳಿದ್ದು ತುರ್ತು ಸಂದರ್ಭದಲ್ಲಿ ಗ್ರಾಹಕರು ಕರೆ ಮಾಡಿದರೂ ತಮಗೆ ಸಂಪರ್ಕ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ಬಡುವಂಡ್ರ ಲಕ್ಷಿ¾àಪತಿ, ನಮ್ಮಿಂದ ದುಬಾರಿ ದರ ಪಡೆಯುವ ಬಿಎಸ್ಎನ್ಎಲ್ ಅದೇ ಮಟ್ಟದ ಸೇವೆ ನೀಡುವಲ್ಲಿ ವಿಫಲವಾಗುತ್ತಿದೆ ಎಂದು ದೂರಿದರು. ಮರಗೋಡು ವಿಎಸ್ಎಸ್ಎನ್ ಬ್ಯಾಂಕ್ ಅಧ್ಯಕ್ಷ ಬಾಳೆಕಜೆ ಯೋಗೇಂದ್ರ, ವೈಷ್ಣವಿ, ಫುಟ್ಬಾಲ್ ಕ್ಲಬ್ನ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕಾಫಿ ಬೆಳಗಾರ ಮಂಡೇಪಂಡ ಗಣಪತಿ, ಕಲಾವಿದ ಐಮಂಡ ರೂಪೇಶ್ ನಾಣಯ್ಯ, ನ್ಪೋರ್ಟ್ ಆ್ಯಂಡ್ ರಿಕ್ರಿಯೇಷನ್ ಕ್ಲಬ್ ಕಾರ್ಯದರ್ಶಿ ಕೋಚನ ಅನೂಪ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Bengaluru: ಕಬ್ಬನ್ ಪಾರ್ಕ್ನಲ್ಲಿ ಪುಷ್ಪ ಪ್ರದರ್ಶನ
S.Africa: ಫಿಕ್ಸಿಂಗ್ ಕೇಸ್ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.