ಸಂಪರ್ಕ ಕಡಿತ ಭೀತಿಯಲ್ಲಿ ಪಾಜಪಳ್ಳ-ಕಲ್ಮಡ್ಕ ರಸ್ತೆ
ಡಾಮರು ಕಿತ್ತು ಹೋಗಿ ರಸ್ತೆ ತುಂಬ ಕೆಸರು; ಸಂಚಾರಕ್ಕೆ ತೊಂದರೆ
Team Udayavani, Jun 16, 2019, 9:39 AM IST
ಬೆಳ್ಳಾರೆ: ಬೆಳ್ಳಾರೆ ಸುಬ್ರಹ್ಮಣ್ಯ ರಸ್ತೆಯ ಪಾಜಪಳ್ಳದಿಂದ ಕಲ್ಮಡ್ಕ ಸಂಪರ್ಕಿಸುವ ರಸ್ತೆ ತೀರಾ ಹದಗೆಟ್ಟಿದ್ದು, ಡಾಮರು ಎದ್ದು ಹೋಗಿ ಸಂಪೂರ್ಣ ಕೆಸರು ಗದ್ದೆಯಂತಾಗಿದೆ. ಸಂಚಾರಕ್ಕೆ ಅಯೋಗ್ಯವಾಗಿರುವ ಈ ರಸ್ತೆಯ ಮೂಲಕ ಕಲ್ಮಡ್ಕ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.
ಕಲ್ಮಡ್ಕ ಮೂಲಕ ಕುಕ್ಕುಜಡ್ಕ ಸಂಪರ್ಕಿಸುವ ರಸ್ತೆ ಇದಾಗಿದ್ದು, ಕಲ್ಮಡ್ಕ ಭಾಗದ ಜನ ಪುತ್ತೂರು, ಸುಬ್ರಹ್ಮಣ್ಯ ಮತ್ತು ಸುಳ್ಯ ಸಂಪರ್ಕಿಸಬೇಕಾದರೆ ಈ ರಸ್ತೆಯನ್ನು ಬಳಸುವುದು ಅನಿವಾರ್ಯವಾಗಿದೆ. ಆದರೆ ಹದಗೆಟ್ಟಿರುವ ರಸ್ತೆಯಿಂದ ಮಳೆಗಾಲದಲ್ಲಿ ಮತ್ತಷ್ಟು ತೊಂದರೆ ಎದುರಾಗಿದ್ದು, ಈ ರಸ್ತೆಯಲ್ಲಿ ವಾಹನ ಚಲಾಯಿಸುವುದೇ ಸವಾಲಾಗಿ ಪರಿಣಮಿಸಿದೆ.
9 ಸರಕಾರಿ ಬಸ್ ಓಡಾಟ
ಪಾಜಪಳ್ಳದಿಂದ ಈ ರಸ್ತೆ ಇಂದ್ರಾಜೆ ಮೂಲಕ ಹಾದು ಹೋಗಿ ಕಲ್ಮಡ್ಕ ಗ್ರಾಮದ ಮೂಲಕ ಕುಕ್ಕುಜಡ್ಕ ಸೇರಿಕೊಳ್ಳುತ್ತದೆ. ಈ ರಸ್ತೆ ಹಾದು ಹೋಗುವಲ್ಲಿ ಕಲ್ಮಡ್ಕ ಮತ್ತು ಅಮರಪಟ್ನೂರು ಗ್ರಾಮದ ನೂರಾರು ಮನೆಗಳಿವೆ. ನೂರಾರು ವಿದ್ಯಾರ್ಥಿಗಳು ಕಲ್ಮಡ್ಕ ಮತ್ತು ಕುಕ್ಕುಜಡ್ಕದಿಂದ ಈ ರಸ್ತೆಯಾಗಿ ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಪ್ರತಿದಿನ ಈ ರಸ್ತೆಯಲ್ಲಿ 9 ಸರಕಾರಿ ಬಸ್‌ಗಳು ಓಡಾಟ ನಡೆಸುತ್ತಿವೆ. ಈ ಭಾಗದ ಜನರಿಗೆ ತಾಲೂಕು ಕೇಂದ್ರವಾದ ಸುಳ್ಯ ತಲುಪಲು ಈ ರಸ್ತೆ ಸಹಕಾರಿಯಾಗಿದೆ.
ಡಾಮರು ರಸ್ತೆ ಮಧ್ಯೆ ಹಲವೆಡೆ ದೊಡ್ಡ ಹೊಂಡ ನಿರ್ಮಾಣವಾಗಿದೆ. ಇನ್ನೂ ಹಲವೆಡೆ ಡಾಮರು ಎದ್ದು ಹೋಗಿ ಮಣ್ಣಿನ ರಸ್ತೆಯಾಗಿ ಪರಿವರ್ತನೆಯಾಗಿ ಕೆಸರುಮಯವಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಮರುಡಾಮರು ಕಾಮಗಾರಿ ನಡೆದಿದ್ದು, ಈ ರಸ್ತೆಗೆ ಸರಿಯಾದ ಚರಂಡಿ ವ್ಯವಸ್ಥೆ ಮಾಡದೇ ಇರುವುದರಿಂದ ಮಳೆ ನೀರು ರಸ್ತೆಯಲ್ಲೇ ಹರಿದು ಹೋಗಿ ಈ ಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.