ಕೃಷಿ ಕಾರ್ಯದತ್ತ ರೈತನ ಚಿತ್ತ

|ಹೊಸ ನಿರೀಕ್ಷೆ ತಂತು ಮಳೆಯ ಮಾರುತ |ಬೆಳಗಾವಿ-ಖಾನಾಪುರದಲ್ಲಿ ವಾಡಿಕೆ ಮಳೆ ಕೊರತೆ

Team Udayavani, Jun 16, 2019, 10:33 AM IST

bg-tdy-1..

ಬೆಳಗಾವಿ: ಜಿಲ್ಲೆಯಲ್ಲಿ ರೈತರು ಬಿತ್ತನೆಗೆ ಹೊಲ ಹದ ಮಾಡಿ ಬಿತ್ತನೆ ಕಾರ್ಯದಲ್ಲಿ ತೊಡಗಿರುವುದು. Copyright 2019 © Udayavani | Contact Us

ಬೆಳಗಾವಿ: ಕಳೆದ ನಾಲ್ಕೈದು ತಿಂಗಳಿಂದ ಭೀಕರ ಬರಗಾಲಕ್ಕೆ ತುತ್ತಾಗಿರುವ ಗಡಿ ಜಿಲ್ಲೆ ಬೆಳಗಾವಿಯ ರೈತರು ಹೊಸ ಆಸೆ ಹಾಗೂ ನಿರೀಕ್ಷೆಗಳೊಂದಿಗೆ ಈ ವರ್ಷದ ಮುಂಗಾರು ಕೃಷಿ ಚಟುವಟಿಕೆಗೆ ಚಾಲನೆ ನೀಡಿದ್ದಾರೆ. ಜೂನ್‌ ಎರಡನೇ ವಾರದಲ್ಲಿ ಬಿದ್ದ ಮಳೆ, ಮೋಡ ಕವಿದ ವಾತಾವರಣ ಮುಂಗಾರಿನ ಬಿತ್ತನೆ ಕಾರ್ಯಕ್ಕೆ ಹೊಸ ಜೀವ ನೀಡಿದೆ. ಮೇ ತಿಂಗಳ ಅಂತ್ಯದವರೆಗೆ ರಣಬಿಸಿಲಿನ ಅನುಭವ ಕಂಡಿದ್ದ ಬೆಳಗಾವಿ ಜಿಲ್ಲೆಯ ವಾತಾವರಣದಲ್ಲಿ ಕಳೆದ ಒಂದು ವಾರದಿಂದ ಬದಲಾವಣೆ ಕಾಣುತ್ತಿದೆ. ಮುಂಗಾರು ಮಳೆ ಇನ್ನೂ ಚುರುಕು ಪಡೆದಿಲ್ಲವಾದರೂ ಆಗಾಗ ಬೀಳುತ್ತಿರುವ ಮಳೆ ಹಾಗೂ ವಾತಾವರಣದಲ್ಲಿನ ಬದಲಾವಣೆ ರೈತರಲ್ಲಿ ಹೊಸ ಆಸೆ ಮೂಡಿಸಿದೆ. ಅಲ್ಲಲ್ಲಿ ಕೃಷಿ ಚಟುವಟಿಕೆಗಳು ಮತ್ತೆ ಜೀವ ತುಂಬಿಕೊಂಡಿವೆ. ಬಹುತೇಕ ಕಡೆ ಬಿತ್ತನೆಗೆ ಹೊಲಗಳನ್ನು ಸಿದ್ಧಮಾಡಿಕೊಳ್ಳುವ ಕಾರ್ಯ ಭರದಿಂದ ನಡೆದಿದೆ. ಮುಂಗಾರು ಈ ಬಾರಿಯಾದರೂ ಸಂಪೂರ್ಣವಾಗಿ ನಮ್ಮ ಕೈಹಿಡಿಯುತ್ತದೆ ಎಂಬ ವಿಶ್ವಾಸ ರೈತರ ಮುಖದಲ್ಲಿ ಕಾಣುತ್ತಿದೆ. ಕಳೆದ ಒಂದೆರಡು ದಿನಗಳಿಂದ ಬಿದ್ದ ಮಳೆಯಿಂದ ಬೆಳಗಾವಿ, ಬೈಲಹೊಂಗಲ, ಸವದತ್ತಿ, ರಾಮದುರ್ಗ ಮೊದಲಾದ ಕಡೆ ಬಿತ್ತನೆ ಕಾರ್ಯ ಆರಂಭವಾಗಿದೆ. ಹೊಲಗಳನ್ನು ಹದಮಾಡಿಕೊಳ್ಳುವ ಕೆಲಸ ಜೋರಾಗಿ ನಡೆದಿರುವ ದೃಶ್ಯ ಎಲ್ಲ ಕಡೆ ಕಾಣುತ್ತಿದೆ.

ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಜಿಲ್ಲೆಯಲ್ಲಿ ಶೇ. 78ರಷ್ಟು ಮಳೆಯ ಕೊರತೆ ಕಂಡುಬಂದಿತ್ತು, ಇದೇ ಕಾರಣದಿಂದ ಕೃಷಿ ಚಟುವಟಿಕೆಗಳು ಸಹ ಬಹುತೇಕ ಸ್ಥಗಿತಗೊಂಡಿದ್ದವು. ಅಡ್ಡ ಮಳೆಯ ಕೊರತೆಯಿಂದಾಗಿ ಬಿತ್ತನೆಗೆ ಹೊಲಗಳನ್ನು ಹದ ಮಾಡಿಕೊಳ್ಳುವ ಕಾರ್ಯ ಸಹ ನಡೆದಿರಲಿಲ್ಲ. ಜಿಲ್ಲೆಯಲ್ಲಿ ವಾಡಿಕೆ ಪ್ರಕಾರ ಜೂನ್‌ ಮೊದಲ ವಾರ ಮುಂಗಾರು ಪ್ರವೇಶವಾಗಿ ಬಿತ್ತನೆ ಕಾರ್ಯ ಭರದಿಂದ ನಡೆದಿರುತ್ತಿದ್ದವು. ಜಿಲ್ಲೆಯಲ್ಲಿ ಇದುವರೆಗೆ ವಾಡಿಕೆಯ 111 ಮಿಮೀ ಪೈಕಿ 74.4 ಮಿಮೀ ಮಳೆಯಾಗಿದೆ. ಅತಿ ಹೆಚ್ಚು ಮಳೆಯಾಗಬೇಕಿರುವ ಬೆಳಗಾವಿ ಹಾಗೂ ಖಾನಾಪುರ ತಾಲೂಕುಗಳಲ್ಲಿ ಅರ್ಧದಷ್ಟು ಸಹ ಮಳೆಯಾಗಿಲ್ಲ. ಆದರೆ ಈಗ ಬಿದ್ದ ತುಂತುರು ಮಳೆಯಿಂದ ಬಿತ್ತನೆ ಕಾರ್ಯ ಆರಂಭಗೊಂಡಿದೆ. ಈ ಬಾರಿ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂಬ ವಿಶ್ವಾಸದಿಂದ ಕೃಷಿ ಇಲಾಖೆ ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಳೆದ ಒಂದೆರಡು ದಿನಗಳಿಂದ ಅಲ್ಲಲ್ಲಿ ಜಿಟಿ ಜಿಟಿ ಮಳೆ ಆರಂಭವಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬೀಳಬೇಕು. ಮುಖ್ಯವಾಗಿ ಖಾನಾಪುರ, ಬೈಲಹೊಂಗಲ, ಬೆಳಗಾವಿ ತಾಲೂಕುಗಳಲ್ಲಿ ಇನ್ನೂ ಮಳೆ ಕಾಣುತ್ತಿಲ್ಲ. ಒಂದೆರಡು ದಿನಗಳಲ್ಲಿ ಒಳ್ಳೆಯ ಮಳೆ ಆರಂಭವಾಗಬಹುದು ಎಂಬ ನಿರೀಕ್ಷೆ ಇದೆ. ಯಾವುದೇ ಕಾರಣಕ್ಕೂ ರೈತರಿಗೆ ಬೀಜ ಮತ್ತು ಗೊಬ್ಬರದ ಅಭಾವ ಉಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತೆ ವಹಿಸಿ 122 ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಎಚ್. ಮೊಕಾಸಿ ಹೇಳಿದರು.

ಎಲ್ಲೆಲ್ಲಿ ಎಷ್ಟು?:

ಜಿಲ್ಲೆಯಲ್ಲಿ 7,18 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮಾಡಲಾಗುತ್ತಿದ್ದು ಇದರಲ್ಲಿ ಎರಡು ಲಕ್ಷ ಹೆಕ್ಟೇರ್‌ದಲ್ಲಿ ಕಬ್ಬು ಬೆಳೆಯಲಾಗುತ್ತಿದೆ. 1.30 ಲಕ್ಷ ಹೆ. ಪ್ರದೇಶದಲ್ಲಿ ಸೋಯಾಬಿನ್‌, ಸುಮಾರು 1.40 ಲಕ್ಷ ಹೆಕ್ಟೇರ್‌ದಲ್ಲಿ ಮುಸುಕಿನ ಜೋಳ, 70 ಸಾವಿರ ಹೆಕ್ಟೇರ್‌ನಲ್ಲಿ ಭತ್ತ, 31500 ಹೆಕ್ಟೇರ್‌ನಲ್ಲಿ ಶೇಂಗಾ, ಸುಮಾರು 48 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ದ್ವಿದಳ ಧಾನ್ಯ ಬೆಳೆ ಬೆಳೆಯಲಾಗುತ್ತಿದೆ. ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಸೋಯಾಬಿನ್‌, ಮುಸುಕಿನ ಜೋಳ, ಭತ್ತ ಮೊದಲಾದ ಬೀಜ ಹಾಗೂ ಗೊಬ್ಬರ ವಿತರಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂಬುದು ಕೃಷಿ ಅಧಿಕಾರಿಗಳ ಹೇಳಿಕೆ ಈಗಿನ ಮಾಹಿತಿಯ ಪ್ರಕಾರ ಜಿಲ್ಲೆಯಲ್ಲಿ ಭತ್ತ, ಸೋಯಾ, ಹೆಸರು, ಉದ್ದು ಸೇರಿದಂತೆ ಸುಮಾರು 2,28 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ಯಾವ ಭಾಗದಲ್ಲಿ ಮಳೆಯಾಗಿದೆಯೋ ಅಲ್ಲಿ ಬಿತ್ತನೆ ಕಾರ್ಯ ಚುರುಕು ಪಡೆದಿದೆ. ನಮ್ಮ ನಿರೀಕ್ಷೆಯಂತೆ ಇದೇ ರೀತಿಯ ಮಳೆ ಎಲ್ಲ ಕಡೆ ಆಗುತ್ತಿಲ್ಲ. ಈ ವಾರದಲ್ಲಿ ಎಲ್ಲ ಕಡೆ ಬಿತ್ತನೆಗೆ ಚಾಲನೆ ಸಿಗಲಿದೆ ಎಂಬ ವಿಶ್ವಾಸ ಇದೆ ಎಂದು ಮೊಕಾಸಿ ಹೇಳಿದರು. ಜಿಲ್ಲೆಯಲ್ಲಿ ಜೋಳ, ಭತ್ತ, ಸಜ್ಜೆ, ಮೆಕ್ಕೆಜೋಳ, ಶೇಂಗಾ, ಸೋಯಾಬಿನ್‌, ಸೂರ್ಯಕಾಂತಿ, ಹೀಗೆ ಹಲವು ಬೆಳೆಗಳ ಜತೆಗೆ ಸಾವೆ, ನವಣೆ, ಬರಗುಗಳಂತಹ ಸಿರಿಧಾನ್ಯ ಬೆಳೆಯಲು ಒತ್ತು ನೀಡಲಾಗಿದೆ. ಕೃಷಿ ಅಭಿಯಾನದಲ್ಲೂ ಕಡಿಮೆ ನೀರಿನ ಬಳಕೆಗೆ ಒತ್ತು ನೀಡುವುದು ಮತ್ತು ಲಭ್ಯವಾದ ನೀರಿನಲ್ಲೇ ಸಮರ್ಥವಾದ ಉತ್ತಮ ಫ‌ಸಲು ಪಡೆಯಲು ರೈತರನ್ನು ಅಣಿಗೊಳಿಸುವ ಕೆಲಸಕ್ಕೆ ಕೃಷಿ ಇಲಾಖೆ ಮುಂದಾಗಿದೆ.
•ಕೇಶವ ಆದಿ

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.