ಹಿಂದುಳಿದ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ನೀಡಿ ಉತ್ತೇಜನ
ಕಡೇಚೂರು-ಬಾಡಿಯಾಳ ಕೈಗಾರಿಕೆ ಪ್ರದೇಶದಲ್ಲಿ ಮೂರು ಸಾವಿರ ಎಕರೆ ಭೂಮಿ ಸ್ವಾಧೀನ
Team Udayavani, Jun 16, 2019, 11:05 AM IST
ಯಾದಗಿರಿ: ಗುರುಮಠಕಲ್ ಕ್ಷೇತ್ರದ ಕಡೇಚೂರ-ಬಾಡಿಯಾಳ ಕೈಗಾರಿಕಾ ಪ್ರದೇಶ.
ಅನೀಲ ಬಸೂದೆ
ಯಾದಗಿರಿ: ಗಡಿ ಜಿಲ್ಲೆಯ ಗುರುಮಠಕಲ್ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಕೈಗಾರಿಕೆ ಸ್ಥಾಪನೆಗೆ ಸರ್ಕಾರ ಜಮೀನು ಸ್ವಾಧೀನಮಾಡಿಕೊಂಡು 10 ವರ್ಷಗಳು ಕಳೆದರೂ ಈವರೆಗೆ ಒಂದು ಕಾರ್ಖಾನೆಯೂ ತಲೆ ಎತ್ತಿಲ್ಲ.
ಗುರುಮಠಕಲ್ನ ಕಡೇಚೂರು- ಬಾಡಿಯಾಳ ಕೈಗಾರಿಕೆ ಪ್ರದೇಶದಲ್ಲಿ ರೈತರಿಂದ 3332 ಎಕರೆ ಭೂಮಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಈ ಭಾಗದ ನಿರುದ್ಯೋಗಿಗಳ ಬಹುವರ್ಷಗಳ ಬೇಡಿಕೆ ಈಡೇರಿಸಲು ಜಮೀನು ಗುರುತಿಸಲಾಗಿದೆ. ಇದರಿಂದಾಗಿ ಈ ಭಾಗಕ್ಕೆ ಹಲವು ಕೈಗಾರಿಕೆಗಳನ್ನು ತಂದು ಸರ್ಕಾರ ನಿರುದ್ಯೋಗ ಸಮಸ್ಯೆ ನಿವಾರಿಸುತ್ತದೆ ಎನ್ನುವ ಜನರ ನಿರೀಕ್ಷೆ ಈಡೇರುವ ಲಕ್ಷಣಗಳು ಇನ್ನೂ ಕಾಣುತ್ತಿಲ್ಲ.
ಈ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ. ಉದ್ಯೋಗವಿಲ್ಲದೇ ನಿರುದ್ಯೋಗಿ ಯುವಕರು ಬೆಂಗಳೂರು, ಮುಂಬೈ ಹಾಗೂ ಹೈದರಾಬಾದನಂತಹ ಮಹಾನಗರಗಳಿಗೆ ತೆರಳಿ ದುಡಿಯುವಂತಾಗಿದೆ. ಸ್ಥಳೀಯವಾಗಿಯೇ ಉದ್ಯೋಗಗಳು ಲಭ್ಯವಾದರೆ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ ಎನ್ನುತ್ತಾರೆ ಇಲ್ಲಿನ ಜನ.
ಕೆಲ ವರ್ಷಗಳ ಹಿಂದೆಯಷ್ಟೇ ರೈಲ್ವೆ ಫಿಯೇಟ್ ಬೋಗಿ ತಯಾರಿಕಾ ಕೈಗಾರಿಕೆ ಆರಂಭವಾಗಿದ್ದು, ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಾಬುರಾವ ಚಿಂಚನಸೂರ ಗುರುಮಠಕಲ್ ಕ್ಷೇತ್ರದಲ್ಲಿ ಕೈಗಾರಿಕೆ ಕ್ರಾಂತಿ ಮಾಡುತ್ತೇವೆ ಎಂದು ಭಾಷಣಗಳಲ್ಲಿಯೇ ಹೇಳಿ ಜನರನ್ನು ಮರಳು ಮಾಡಿದ್ದರು ಎನ್ನುವ ಬೇಸರ ಇಲ್ಲಿನ ಜನರಲ್ಲಿದೆ.
ಸದ್ಯ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅಧಿಕಾರದಲ್ಲಿದ್ದು, ಶಾಸಕರೂ ಕೂಡ ಸ್ಥಳೀಯರಾಗಿದ್ದಾರೆ. ಹಾಗಾಗಿ ಮತ್ತೆ ಸ್ಥಳೀಯರಲ್ಲಿ ಕೈಗಾರಿಕೆಗಳ ಸ್ಥಾಪನೆ ಕನಸು ಚಿಗುರೊಡೆದಿದೆ. ಮುಖ್ಯಮಂತ್ರಿಗಳ ಆಪ್ತರಾಗಿರುವ ಶಾಸಕ ನಾಗನಗೌಡ ಕಂದಕೂರ ಅವರು ಪ್ರಯತ್ನಪಟ್ಟು ಈ ಭಾಗದಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಒತ್ತು ನೀಡಲಿ ಎನ್ನುವ ಒತ್ತಾಯ ಕೇಳಿ ಬರುತ್ತಿದೆ.
ಹಿಂದುಳಿದ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಹೈದ್ರಾಬಾದ್ ಕರ್ನಾಟಕದ ಗುರುಮಠಕಲ್ ತಾಲೂಕಿನಿಂದಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಆರಂಭಿಸುತ್ತಿದ್ದು, ಈ ಭಾಗದ ನಿರುದ್ಯೋಗಿ ಯುವಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಇಲ್ಲಿ ಕೈಗಾರಿಕೆ ಸ್ಥಾಪನೆಗೆ ಉತ್ತೇಜನೆ ನೀಡುವ ಕಾರ್ಯ ಮಾಡುವ ಕಾಳಜಿ ತೋರಲಿ ಎನ್ನುವುದು ಸ್ಥಳೀಯರ ಒತ್ತಾಯ. ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಈವರೆಗೆ ಕೇವಲ ರಸ್ತೆಯೊಂದನ್ನು ನಿರ್ಮಿಸಲಾಗಿದೆ. ಆದರೆ ಅಗತ್ಯವಾದ ವಿದ್ಯುತ್ ಹಾಗೂ ನೀರಿನ ವ್ಯವಸ್ಥೆ ಇಲ್ಲ. ಇನ್ನಿತರ ಮೂಲಸೌಕರ್ಯಗಳು ಇಲ್ಲದಿರುವುದರಿಂದ ಕೈಗಾರಿಗಳು ಸ್ಥಾಪನೆಯಾಗುತ್ತಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಸೌಕರ್ಯ ಕಲ್ಪಿಸುವುದಕ್ಕೆ ಮುಂದಾಗಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.